Homeಕರ್ನಾಟಕಲಕ್ಷ್ಮಣ ಸವದಿಗೆ ಭರ್ಜರಿ ಗೆಲವು, ಸೋಲಿನತ್ತ ಜಗದೀಶ್ ಶೆಟ್ಟರ್...

ಲಕ್ಷ್ಮಣ ಸವದಿಗೆ ಭರ್ಜರಿ ಗೆಲವು, ಸೋಲಿನತ್ತ ಜಗದೀಶ್ ಶೆಟ್ಟರ್…

- Advertisement -
- Advertisement -

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ಲಿಂಗಾಯತ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಸವದಿ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಜಗದೀಶ್ ಶೆಟ್ಟರ್ ಸೋಲಿನತ್ತ ಮುಖ ಮಾಡಿದ್ದಾರೆ.

ಅಥಣಿ ವಿಧಾಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯಥಿಯಾಗಿದ್ದ ಲಕ್ಷ್ಮಣ ಸಂಗಪ್ ಸವದಿ ಅವರು ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ವಿರುದ್ಧ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಬಿಜೆಪಿ ನಾಯಕ ಮಹೇಶ್ ಈರನಗೌಡ ಕುಮಟಳ್ಳಿ ಶಾಸಕರಾಗಿದ್ದಾರೆ. 2018 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆದ್ದ ನಂತರ ಬಿಜೆಪಿಗೆ ಹಾರಿದ್ದ ಕಮಟಳ್ಳಿ 2019 ರ ಉಪಚುನಾವಣೆಯಲ್ಲಿಯೂ ಗೆದ್ದು ಬೀಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹಾಗೂ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ನಡುವೆ ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಸವದಿಗೆ ಗೆಲುವು ಸಿಕ್ಕಿದೆ.

2018 ರಲ್ಲಿ, ಕಾಂಗ್ರೆಸ್‌ ಅಭ್ಯರ್ಥಿ ಮಹೇಶ್ ಕುಮಠಳ್ಳಿ ಅವರು 82094 ಮತಗಳನ್ನು ಗಳಿಸಿ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದಿದ್ದರು. ಐಎನ್‌ಸಿ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ ಸವದಿ ಅವರನ್ನು 2,331 ಮತಗಳ ಅಂತರದಿಂದ ಸೋಲಿಸಿದ್ದರು.

******

ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ ಧಾರವಾಡ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಆದರೆ ಕ್ಷೇತ್ರದ ಮತದಾರರು ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಮುನ್ನಡೆ ಸಾಧಿಸಿದ್ದಾರೆ.

2018ರಲ್ಲಿ ಬರೋಬ್ಬರಿ 75,794 ಮತಗಳನ್ನು ಪಡೆದ ಜಗದೀಶ್ ಶೆಟ್ಟರ್, ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಡಾ. ಮಹೇಶ್ ನಲ್ವಾಡ್ ಗೆ ಎರಡನೇ ಬಾರಿ ಸೋಲಿನ ರುಚಿ ತೋರಿಸಿದ್ದರು. ಮಹೇಶ್ ಲನಲ್ವಾಡ್ ಅವರಿಗೆ 54,488 ಮತಗಳು ಬಂದಿದ್ದವು‌.

ಇದೀಗ 2023ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಹೇಶ್ ಟೆಂಗಿನಕಾಯಿ ಅವರು ಜಗದೀಶ್ ಶೆಟ್ಟರ್‌ ವಿರುದ್ಧ ಭಾರೀ ಅಂತರದಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...