Homeಮುಖಪುಟ'ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದು ಜೀವನದಲ್ಲಿ ಮಾಡಿದ ದೊಡ್ಡ ತಪ್ಪು' : ಡೆತ್‌ ನೋಟ್‌ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

‘ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದು ಜೀವನದಲ್ಲಿ ಮಾಡಿದ ದೊಡ್ಡ ತಪ್ಪು’ : ಡೆತ್‌ ನೋಟ್‌ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಕೇರಳದ ಆನಂದ್ ಕೆ ಥಂಪಿ (40) ಎಂಬ ಆರ್‌ಎಸ್‌ಎಸ್ ಕಾರ್ಯಕರ್ತ ಶನಿವಾರ (ನವೆಂಬರ್ 15) ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ತನ್ನ ಸ್ನೇಹಿತರಿಗೆ ವಾಟ್ಸಾಪ್ ಮೂಲಕ ಡೆತ್‌ ನೋಟ್ ಕಳಿಸಿದ ಬಳಿಕ ಶನಿವಾರ ಸಂಜೆ 5.20ರ ಸುಮಾರಿಗೆ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆನಂದ್ ಶವ ಪತ್ತೆಯಾಗಿದೆ ಎಂದು ವರದಿಗಳು ಹೇಳಿವೆ.

ಬಿಜೆಪಿಯ ಮಾಜಿ ಸದಸ್ಯರಾಗಿರುವ ಆನಂದ್ ತನ್ನ ಡೆತ್‌ ನೋಟ್‌ನಲ್ಲಿ, ತಿರುವನಂತಪುರಂ ನಗರ ಪಾಲಿಕೆಯ ಚುನಾವಣೆಗೆ ತೃಕ್ಕಣ್ಣಪುರಂ ವಾರ್ಡ್‌ನ ಪ್ರಸ್ತುತ ಬಿಜೆಪಿ ಅಭ್ಯರ್ಥಿಯಾಗಿರುವ ವಿನೋದ್ ಕುಮಾರ್, ಬಿಜೆಪಿಯ ಪ್ರದೇಶ ಕಾರ್ಯದರ್ಶಿ ಉದಯಕುಮಾರ್, ಬಿಜೆಪಿ ಕ್ಷೇತ್ರ ಸಮಿತಿ ಸದಸ್ಯ ಕೃಷ್ಣಕುಮಾರ್ ಮತ್ತು ತಿರುವನಂತಪುರಂ ನಗರ ಆರ್‌ಎಸ್‌ಎಸ್‌ನ ಕಾರ್ಯವಾಹಕ್ ರಾಜೇಶ್ ಸೇರಿದಂತೆ ಪ್ರಮುಖ ಬಿಜೆಪಿ-ಆರ್‌ಎಸ್‌ಎಸ್ ನಾಯಕರು ಮಣ್ಣಿನ ಮಾಫಿಯಾದ ಭಾಗವಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ತೃಕ್ಕಣ್ಣಪುರಂ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದೆ. ಟಿಕೆಟ್ ಸಿಗದ ಹಿನ್ನೆಲೆ, ಅದೇ ವಾರ್ಡ್‌ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೆ. ಆ ಬಳಿಕ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರಿಂದ ಮಾನಸಿಕ ಒತ್ತಡವನ್ನು ಎದುರಿಸಬೇಕಾಯಿತು. ಅದು ಮಿತಿ ಮೀರಿ ಹೋಯಿತು ಎಂದು ಹೇಳಿದ್ದಾರೆ. ಯಾವುದೇ ಬಿಜೆಪಿ-ಆರ್‌ಎಸ್‌ಎಸ್ ಸದಸ್ಯರಿಗೆ ತಮ್ಮ ಮೃತದೇಹವನ್ನು ನೋಡಲು ಅವಕಾಶ ನೀಡಬಾರದು ಎಂದು ಅವರು ತಮ್ಮ ಡೆತ್‌ನೋಟ್‌ನಲ್ಲಿ ತಿಳಿಸಿದ್ದಾರೆ.

“ನನ್ನ ಜೀವನದಲ್ಲಿ ನಾನು ಮಾಡಿದ ದೊಡ್ಡ ತಪ್ಪು ಎಂದರೆ ನಾನು ಆರ್‌ಎಸ್‌ಎಸ್ ಕಾರ್ಯಕರ್ತನಾಗಿ ಬದುಕಿದ್ದು. ನನ್ನ ಸಾವಿಗೆ ಸ್ವಲ್ಪ ಮುಂಚೆ ಇದ್ದ ಆರ್‌ಎಸ್‌ಎಸ್ ಕಾರ್ಯಕರ್ತ ಎಂಬ ಗುರುತು, ನಾನು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ತಂದು ನಿಲ್ಲಿಸಿದೆ” ಎಂದು ಆನಂದ್ ತನ್ನ ಡೆತ್‌ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಕೇರಳದಲ್ಲಿ ಆರ್‌ಎಸ್‌ಎಸ್‌-ಬಿಜೆಪಿ ವಿರುದ್ದ ಗಂಭೀರ ಆರೋಪಗಳನ್ನು ಮಾಡಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡವರ ಪಟ್ಟಿಗೆ ಆನಂದ್ ಹೊಸ ಸೇರ್ಪಡೆಯಾಗಿದೆ. ಕಳೆದ ಸೆಪ್ಟೆಂಬರ್ 20ರಂದು ತಿರುಮಲದ ವಾರ್ಡ್ ಕೌನ್ಸಿಲರ್ ಅನಿಲ್‌ಕುಮಾರ್ ಕೆ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತರ, ಅನಂತು ಅಜಿ ಎಂಬ ಆರ್‌ಎಸ್‌ಎಸ್ ಕಾರ್ಯಕರ್ತ ಕೂಡ ಡೆತ್‌ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದರು. ಇನ್‌ಸ್ಟಾಗ್ರಾಮ್‌ ಮೂಲಕ ಅನಂತು ಹಂಚಿಕೊಂಡ ಡೆತ್‌ ನೋಟ್‌ನಲ್ಲಿ ಆರ್‌ಎಸ್‌ಎಸ್‌ ಶಿಬಿರಗಳಲ್ಲಿ ಲೈಂಗಿಕ ದೌರ್ಜನ್ಯ ಎದುರಿಸಿದ್ದು, ಅದರಿಂದ ಮಾನಸಿಕವಾಗಿ ನೊಂದು ಈ ನಿರ್ಧಾರ ಮಾಡಿದ್ದೇನೆ ಎಂದಿದ್ದರು.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಬಿಹಾರದ ಎನ್‌ಡಿಎ ಗೆಲುವಿನಲ್ಲಿ ಎಸ್‌ಐಆರ್ ಪ್ರಭಾವ ಸ್ಪಷ್ಟವಾಗಿದೆ : ಕೇರಳ ಬಿಜೆಪಿ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...