Homeಮುಖಪುಟಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ...

ಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ ಗಾಯ

ಈ ಭೀಕರ ವಿಧ್ವಂಸಕ ಕೃತ್ಯಕ್ಕೆ ಕಾರಣರಾದ ಪೊಲೀಸರ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಹೋರಾಟಗಾರ ಕನ್ಹಯ್ಯ ಕುಮಾರ್‌ ಆಗ್ರಹಿಸಿದ್ದಾರೆ.

- Advertisement -
- Advertisement -

ಬಿಹಾರದ ವಿಧಾನಸಭಾ ಚುನಾವಣೆಗೆ ನಾಳೆ ಮೊದಲ ಹಂತದ ಮತದಾನ ಆರಂಭವಾಗಲಿದೆ. ಚುನಾವಣೆ ಇಷ್ಟು ಸಮೀಪವಿರುವಾಗಲೇ ಬಿಹಾರದಲ್ಲಿ ದುರಂತಗಳು ಶುರುವಾಗಿವೆ. ಮುಂಗೆರ್ ಪಟ್ಟಣದಲ್ಲಿ ದುರ್ಗಾ ಮೂರ್ತಿಗಳ ವಿಸರ್ಜನೆ ಮೇಳೆ ಪೊಲೀಸರು ಮತ್ತು ಜನಸಮೂಹದ ನಡುವೆ ಗುಂಪು ಘರ್ಷಣೆ ಉಂಟಾಗಿದೆ.

ಗುಂಪು ಘರ್ಷಣೆಯಲ್ಲಿ ಬುಲೆಟ್ ತಾಗಿ 18 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. 20 ಮಂದಿ ಪೊಲೀಸರು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ. ಘರ್ಷಣೆಯಲ್ಲಿ ಕೆಲವರು ಬಂದೂಕುಗಳನ್ನು ಬಳಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದುರ್ಗಾ ವಿಗ್ರಹಗಳ ವಿಸರ್ಜನೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಜನ ಮತ್ತು ಕೊತ್ವಾಲಿ ಪೊಲೀಸ್ ಠಾಣಾ ಸಿಬ್ಬಂದಿ ನಡುವೆ ವಾಗ್ವಾದ ನಡೆದು, ನಂತರ ಹಿಂಸಾಚಾರ ಆರಂಭವಾಗಿದೆ. ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘರ್ಷಣೆ ತಡೆಯಲು ಮೊದಲು ಪೊಲೀಸರು ಅಶ್ರುವಾಯು ಬಳಸಿದರು. ಆದರೆ ಜನಸಮೂಹವನ್ನು ನಿಯಂತ್ರಣಕ್ಕೆ ತರುವಲ್ಲಿ ಅವು ವಿಫಲವಾದ ಪರಿಣಾಮ ಪೊಲೀಸರು ಗುಂಡು ಹಾರಿಸಿದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ ಬಾಯ್ಕಾಟ್ ಎಂದ 108 ಆದಿವಾಸಿ ಗ್ರಾಮಗಳು: ಯಾಕೆ? ಇಲ್ಲಿದೆ ವಿವರ

“ಜನಸಮೂಹ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಗುಂಡು ಹಾರಿಸಿದ್ದು ಒಬ್ಬ ವ್ಯಕ್ತಿಯ ಸಾವಿಗೆ ಕಾರಣವಾಯಿತು. ಘಟನೆಯಲ್ಲಿ 20 ಪೊಲೀಸರು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ” ಎಂದು ಮುಂಗೆರ್ ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್ ಹೇಳಿದ್ದಾರೆ.

“ಈ ಬಾರಿ ಮುಂಗೆರ್‌ನಲ್ಲಿ 53 ಕ್ಕೂ ಹೆಚ್ಚು ದುರ್ಗಾ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿದೆ, ಅದರಲ್ಲಿ 15 ವಿಗ್ರಹಗಳನ್ನು ದೀನ್‌ದಯಾಳ್ ಚೌಕ್‌ನಲ್ಲಿ ಗಂಗಾ ನದಿಯಲ್ಲಿ ಮುಳುಗಿಸಲು ಸಂಭ್ರಮದಿಂದ ತೆಗೆದುಕೊಂಡು ಹೋಗಲಾಗುತ್ತಿತ್ತು” ಎಂದು ದುರ್ಗಾ ಐಡೆಲ್ ಇಮ್ಮರ್ಶನ್ ಸಮಿತಿಯ ಸದಸ್ಯ ಪ್ರಕಾಶ್ ಭಗತ್ ಹೇಳಿದ್ದಾರೆ.

“ಸಾಂಪ್ರದಾಯಿಕವಾಗಿ, ವಿಜಯದಶಮಿ ಹಬ್ಬದ ಮೂರು ದಿನಗಳ ನಂತರ ವಿಗ್ರಹಗಳನ್ನು ವಿಸರ್ಜಿಸಲಾಗುತ್ತದೆ. ಆದರೆ, ಈ ಬಾರಿ ಬುಧವಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇರುವ ಕಾರಣ,  ಮಂಗಳವಾರ ಬೆಳಿಗ್ಗೆ 5 ಗಂಟೆಯೊಳಗೆ ದುರ್ಗಾ ವಿಸರ್ಜನೆಗೆ ಅಧಿಕಾರಿಗಳು ಒತ್ತಾಯಿಸಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

ದುರ್ಗಾ ಪೂಜಾ ಸಂಘಟಕರು ದುರ್ಗಾ ಮೂರ್ತಿ ವಿಸರ್ಜನೆಗೆ ತೆರಳುವ ಸಂದರ್ಭದಲ್ಲಿ ಜೋರಾಗಿ ಡಿಜೆ ಸಂಗೀತ ಹಾಕಲಾಗಿತ್ತು. ರಾತ್ರಿ 11.50 ರ ಸುಮಾರಿಗೆ ಪೊಲೀಸ್ ಅಧಿಕಾರಿಗಳು ವಿಗ್ರಹಗಳನ್ನು ಹೆಗಲ ಮೇಲೆ ಹೊತ್ತುಕೊಂಡಿದ್ದ ನಾಲ್ವರನ್ನು ಥಳಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ದುರಂತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

“ಏಳು ಜನರಿಗೆ ಬುಲೆಟ್ ತಾಗಿ ಗಾಯಗಳಾಗಿದ್ದು, ಅವರಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಒಬ್ಬರನ್ನು ಉತ್ತಮ ಚಿಕಿತ್ಸೆಗಾಗಿ ಭಾಗಲ್‌ಪುರಕ್ಕೆ ಕರೆದೊಯ್ಯಲಾಗಿದೆ” ಎಂದು ಮುಂಗೆರ್ ಸದರ್ ಆಸ್ಪತ್ರೆಯ ಉಪ ಅಧೀಕ್ಷಕ ಡಾ. ನಿರಂಜನ್ ಹೇಳಿದ್ದಾರೆ. ಮೃತ ಅನುರಾಗ್ ಕುಮಾರ್ ತಲೆಗೆ ಗುಂಡು ತಾಗಿ ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿ ಸಾಧನಾ ಕುಮಾರ್ ಹೇಳಿದ್ದಾರೆ.

ಘರ್ಷಣೆಯಲ್ಲಿ ಸಂಗರ್‌ಪುರ, ಕೊತ್ವಾಲಿ, ಕಾಸಿಮ್ ಬಜಾರ್, ಬಸುದೇಪುರ ಪೊಲೀಸ್ ಠಾಣೆಗಳ ಎಸ್‌ಎಚ್‌ಒಗಳು ಸೇರಿದಂತೆ ಕನಿಷ್ಠ 20 ಮಂದಿ ಪೊಲೀಸರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ಘಟನೆ ನಂತರ ಜಿಲ್ಲೆಯ ಬಹುತೇಕ ಪೊಲೀಸ್ ಪಡೆಗಳನ್ನು ಕೊತ್ವಾಲಿ ಕಡೆಗೆ ಕಳುಹಿಸಲಾಗಿದೆ. ನಂತರ ಬಿಹಾರ ಮಿಲಿಟರಿ ಪೊಲೀಸ್ (ಬಿಎಂಪಿ) ಮತ್ತು ಅರೆಸೈನಿಕ ಪಡೆಗಳ ಸಿಬ್ಬಂದಿಯನ್ನು ಘರ್ಷಣಾ ಸ್ಥಳದಲ್ಲಿ ನಿಯೋಜಿಸಲಾಗಿದೆ. ಬಿಗಿ ಭದ್ರತೆಯ ನಡುವೆಯೂ ಮುಂಗೆರ್ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಪರಿಸ್ಥಿತಿ ಉದ್ವಿಗ್ನವಾಗಿದೆ.

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಕುರಿತು ಹೋರಾಟಗಾರ ಕನ್ಹಯ್ಯ ಕುಮಾರ್‌ ಟ್ವೀಟ್ ಮಾಡಿದ್ದಾರೆ.

“ನಿನ್ನೆ ರಾತ್ರಿ ಬಿಹಾರದ ಮುಂಗೆರ್‌ನಲ್ಲಿ ದುರ್ಗಾ ವಿಗ್ರಹ ವಿಸರ್ಜನೆ ಸಂದರ್ಭದಲ್ಲಿ ಪೊಲೀಸರು ಅನಾಗರಿಕ ಲಾಠಿ ಚಾರ್ಜ್ ನಡೆಸಿ, ನಂತರ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಡಜನ್‌ಗಟ್ಟಲೆ ಜನರು ಗಾಯಗೊಂಡಿದ್ದಾರೆ. ನಾಲ್ಕು ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಜನರು ಹೇಳುತ್ತಾರೆ. ಈ ಭೀಕರ ವಿಧ್ವಂಸಕ ಕೃತ್ಯಕ್ಕೆ ಕಾರಣರಾದ ಪೊಲೀಸರ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...