ಬಿಹಾರದ ಸಿವಾನ್ ಮತ್ತು ಸರನ್ ಜಿಲ್ಲೆಗಳಲ್ಲಿ ಅಕ್ರಮ ಮದ್ಯ ಸೇವಿಸಿ ಮತ್ತೆ ಹತ್ತು ಮಂದಿ ಸಾವನ್ನಪ್ಪಿದ್ದು, ಕಳ್ಳಭಟ್ಟಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸಿವಾನ್‌ನಲ್ಲಿ 28 ಸಾವುಗಳಾಗಿದ್ದು, ಸರನ್‌ನಲ್ಲಿ ಏಳು ಸಾವುಗಳು ವರದಿಯಾಗಿವೆ ಎಂದು ಪೊಲೀಸ್ ಉಪ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ನೀಲೇಶ್ ಕುಮಾರ್ ಶುಕ್ರವಾರ ಹೇಳಿದ್ದಾರೆ.
“ಸಿವಾನ್ ಜಿಲ್ಲೆಯ ಮಘರ್ ಮತ್ತು ಔರಿಯಾ ಪಂಚಾಯತ್‌ಗಳಲ್ಲಿ ಇದುವರೆಗೆ 28 ಜನರು ಶಂಕಿತ ಅಕ್ರಮ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ. ಸರನ್ ಜಿಲ್ಲೆಯ ಮಶ್ರಖ್ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ರಾಹಿಂಪುರ ಪ್ರದೇಶದಲ್ಲಿ ಏಳು ಮಂದಿ ಶಂಕಿತ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ” ಎಂದು ಡಿಐಜಿ ಶುಕ್ರವಾರ ಪಿಟಿಐಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಸುಮಾರು ಎಂಟು ವರ್ಷಗಳ ಹಿಂದೆ ನಿತೀಶ್ ಕುಮಾರ್ ಸರ್ಕಾರವು ರಾಜ್ಯದಲ್ಲಿ ಮದ್ಯದ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಈ ದುರಂತವು ಮದ್ಯ ನಿಷೇಧದ ಪರಿಣಾಮಕಾರಿತ್ವದ ಬಗ್ಗೆ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಎರಡೂ ಜಿಲ್ಲೆಗಳಲ್ಲಿ ಜನರು ಅಕ್ರಮ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.
ಸಿವಾನ್, ಸರನ್ ಮತ್ತು ಪಾಟ್ನಾ ಜಿಲ್ಲೆಗಳ ವಿವಿಧ ಆಸ್ಪತ್ರೆಗಳಲ್ಲಿ ಎರಡೂ ಜಿಲ್ಲೆಗಳ 25 ಕ್ಕೂ ಹೆಚ್ಚು ಜನರು ಇನ್ನೂ ಜೀವಕ್ಕಾಗಿ ಹೋರಾಡುತ್ತಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಶವಪರೀಕ್ಷೆ ವರದಿ ಬಂದ ನಂತರವಷ್ಟೇ ಘಟನೆಗೆ ನಿಖರ ಕಾರಣ ತಿಳಿಯಲಿದೆ ಎಂದು ಡಿಐಜಿ ತಿಳಿಸಿದ್ದಾರೆ. ಮೃತರ ಮತ್ತು ಚಿಕಿತ್ಸೆಯಲ್ಲಿರುವವರ ಗುರುತುಗಳನ್ನು ಅಧಿಕಾರಿಗಳು ಇದುವರೆಗೆ ಬಹಿರಂಗಪಡಿಸಿಲ್ಲ.
“ಘಟನೆಯ ನಂತರ ಎರಡು ವಿಶೇಷ ತನಿಖಾ ತಂಡಗಳನ್ನು ಸಹ ರಚಿಸಲಾಗಿದೆ. ಸ್ಥಳೀಯ ಮಟ್ಟದಲ್ಲಿ ಸ್ಥಾಪಿಸಲಾದ ಈ ತಂಡವು ಇತ್ತೀಚಿನ ಘಟನೆಗಳ ಅಪರಾಧವನ್ನು ಪರಿಶೀಲಿಸುತ್ತದೆ” ಎಂದು ಪೊಲೀಸ್ ಮಹಾನಿರ್ದೇಶಕ ಅಲೋಕ್ ರಾಜ್ ಗುರುವಾರ ತಿಳಿಸಿದ್ದಾರೆ.
शराबबंदी श्री नीतीश कुमार के संस्थागत भ्रष्टाचार का एक छोटा सा नमूना है। अगर शराबबंदी हुई है तो इसे पूर्ण रूप से लागू करना सरकार का दायित्व है लेकिन मुख्यमंत्री की वैचारिक व नीतिगत अस्पष्टता, कमजोर इच्छाशक्ति तथा जनप्रतिनिधियों की बजाय चुनिंदा अधिकारियों पर निर्भरता के कारण आज…
— Tejashwi Yadav (@yadavtejashwi) October 18, 2024
“ಪಾಟ್ನಾದಲ್ಲಿ ಇಲಾಖೆಯು ಮತ್ತೊಂದು ಎಸ್‌ಐಟಿಯನ್ನು ರಚಿಸಿದ್ದು, ಇದು ಇತ್ತೀಚಿನ ದಿನಗಳಲ್ಲಿ ನಡೆದಿರುವ ಇಂತಹ ಎಲ್ಲಾ ಘಟನೆಗಳ ಸಮಗ್ರ ಅಧ್ಯಯನವನ್ನು ನಡೆಸುತ್ತದೆ. ಅದರ ಆಧಾರದ ಮೇಲೆ ಕ್ರಮದ ಯೋಜನೆಯನ್ನು ರೂಪಿಸಲಾಗುವುದು” ಎಂದು ಅವರು ಹೇಳಿದ್ದಾರೆ.
ಎರಡೂ ಜಿಲ್ಲೆಗಳಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಸುಮಾರು 15 ಜನರನ್ನು ಬಂಧಿಸಿದ್ದಾರೆ. ಘಟನೆಯ ನಂತರ ಎರಡೂ ಜಿಲ್ಲಾಡಳಿತಗಳು ಮಘರ್, ಔರಿಯಾ ಮತ್ತು ಇಬ್ರಾಹಿಂಪುರ ಪ್ರದೇಶದ ಮೂವರು ಚೌಕಿದಾರರನ್ನು ಅಮಾನತುಗೊಳಿಸಿವೆ. ಕನಿಷ್ಠ ಐವರು ಪೊಲೀಸ್ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಗುರುವಾರ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಿವಾನ್ ಮತ್ತು ಸರನ್‌ನಲ್ಲಿ ಶಂಕಿತ ಅಕ್ರಮ ಮದ್ಯೆ ಪ್ರಕರಣದ ಸಾವುಗಳ ತನಿಖೆಯ ಪ್ರಗತಿಯನ್ನು ಕೇಳಿದ್ದಾರೆ ಎಂದು ವರದಿಯಾಗಿದೆ. ಪರಿಸ್ಥಿತಿಯನ್ನು ಖುದ್ದು ನಿಗಾ ವಹಿಸಿ, ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸಿಎಂ ಸೂಚಿಸಿದ್ದಾರೆ ಎಂದು ಅದು ಹೇಳಿದೆ.
ಘಟನೆಯ ಕುರಿತು ಪ್ರತಿಕ್ರಿಯಿಸಿದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, “ರಾಜ್ಯದಲ್ಲಿ ಇತ್ತೀಚಿನ ಅಕ್ರಮ ಮದ್ಯ ಪ್ರಕರಣದ ಸಾವುಗಳಿಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಹೊಣೆ ಮಾಡಬೇಕು. ಇದು ಸಾಮೂಹಿಕ ಹತ್ಯೆಯಾಗಿದೆ. ಮದ್ಯ ನಿಷೇಧವನ್ನು ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಜಾರಿಗೆ ತಂದಿದ್ದರೆ ಅದನ್ನು ಸಮರ್ಥವಾಗಿ ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಆದರೆ ಅದು ನಡೆಯುತ್ತಿಲ್ಲ.” ಎಂದು ಹೇಳಿದ್ದಾರೆ.
“ಬಿಹಾರದಲ್ಲಿ ಮದ್ಯ ನಿಷೇಧವು ಸೂಪರ್ ಫ್ಲಾಪ್ ಆಗಿದೆ. ಆಡಳಿತಾರೂಢ ರಾಜಕಾರಣಿಗಳು-ಪೊಲೀಸ್ ಮತ್ತು ಲಿಕ್ಕರ್ ಮಾಫಿಯಾದ ನಡುವಿನ ಅಪವಿತ್ರ ಸಂಬಂಧದಿಂದಾಗಿ, ಬಿಹಾರದಲ್ಲಿ 30,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅಕ್ರಮ ಮದ್ಯದ ಕಪ್ಪು ಮಾರುಕಟ್ಟೆ ಪ್ರವರ್ಧಮಾನಕ್ಕೆ ಬಂದಿದೆ” ಎಂದು ತೇಜಸ್ವಿ ಹೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಆರೋಪ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರ ವಿರುದ್ಧ ಎಫ್‌ಐಆರ್
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಆರೋಪ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರ ವಿರುದ್ಧ ಎಫ್‌ಐಆರ್


