Homeಮುಖಪುಟಬಿಹಾರ: ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳು ಸಾವು

ಬಿಹಾರ: ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳು ಸಾವು

- Advertisement -
- Advertisement -

ಬಿಹಾರದ ಗಯಾ ಜಿಲ್ಲೆಯ ಭದ್ರತಾ ಪಡೆಗಳ ಶೋಧ ಕಾರ್ಯಾಚರಣೆಯಲ್ಲಿ ಶನಿವಾರ ಮಧ್ಯರಾತ್ರಿ ಸುಮಾರಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘರ್ಷಣೆಯಲ್ಲಿ ಹತರಾದ ಮಾವೋವಾದಿಗಳಲ್ಲಿ ಕಮಾಂಡರ್ ಅಲೋಕ್ ಯಾದವ್ ಕೂಡ ಸೇರಿದ್ದಾರೆ ಎಂದು ತಿಳಿದುಬಂದಿದೆ. ಪಾಟ್ನಾದಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಯಾ ಜಿಲ್ಲೆಯ ಬರಾಚಟ್ಟಿ ಅರಣ್ಯ ಪ್ರದೇಶದಲ್ಲಿ ಎನ್ಕೌಂಟರ್‌ ನಡೆದಿದೆ.

205 ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆಕ್ಷನ್) ಮತ್ತು ಬಿಹಾರ ಪೊಲೀಸ್ ಸಿಬ್ಬಂದಿ ಈ ಶೋಧಕಾರ್ಯಾಚಣೆಯಲ್ಲಿ ಭಾಗವಹಿಸಿದ್ದರು. ಘಟನಾ ಸ್ಥಳದಿಂದ ಒಂದು ಎಕೆ -47 ರೈಫಲ್ ಮತ್ತು ಒಂದು ಐಎನ್‌ಎಸ್ಎಎಸ್ ರೈಫಲ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಗೌರಿ ಲಂಕೇಶ್‌ ಹುತಾತ್ಮ ದಿನ: ದೇಶಾದ್ಯಂತ ನೆನಪಿನ‌ ಕಾರ್ಯಕ್ರಮಗಳು

ಅಧಿಕೃತ ಹೇಳಿಕೆಯ ಪ್ರಕಾರ, ಮಾವೋವಾದಿಗಳ ವಲಯ ಕಮಾಂಡರ್‌ ಅಲೋಕ್ ಯಾದವ್ ಈ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳನ್ನು ಕೊಂದಿದ್ದಾನೆ ಎಂದು ವರದಿಯಾದ ನಂತರ ಭದ್ರತಾ ಪಡೆಗಳು ಮುಂಜಾನೆ 12.20 ರ ಸುಮಾರಿಗೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.

ಇಂದು ಬೆಳಿಗ್ಗೆ ಮಹೂರಿ ಗ್ರಾಮ ಪ್ರದೇಶದ ದೇವಾಲಯವೊಂದರ ಬಳಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ, ಕೋಬ್ರಾ ಕಮಾಂಡೋಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ ದಾಳಿ ಸಂಭವಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ. ಮೃತಪಟ್ಟ ಮೂವರು ಮಾವೋವಾದಿಗಳ ಶವಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದರು.

ಕೋಬ್ರಾ ಅಥವಾ ಕಮಾಂಡೋ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆಕ್ಷನ್, ಕೇಂದ್ರ ಮೀಸಲು ಪೊಲೀಸ್ ಪಡೆಯ ವಿಶೇಷ ಘಟಕವಾಗಿದ್ದು, ಇದನ್ನು ಮಾವೋವಾದಿ ವಿರೋಧಿ ಕಾರ್ಯಾಚರಣೆಗಾಗಿ ಬಿಹಾರ ರಾಜ್ಯದಲ್ಲಿ ನಿಯೋಜಿಸಲಾಗಿದೆ.


ಇದನ್ನೂ ಓದಿ: ಟಿಪ್ಪು ಸುಲ್ತಾನರ ಬಲವಂತದ ಮತಾಂತರ ಚರ್ಚೆಯೊಳಗಿನ ವಾಸ್ತವಗಳು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮುಂದುವರಿದ ಬಿಜೆಪಿ ನಾಯಕರ ದ್ವೇಷ ಭಾಷಣ; ‘ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರಲಿದೆ’...

0
ಸಂಪತ್ತು ಮರು ಹಂಚಿಕೆ ಕುರಿತು ದ್ವೇಷ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ನಂತರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮಂಗಳವಾರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 'ಕಾಂಗ್ರೆಸ್...