Homeದಲಿತ್ ಫೈಲ್ಸ್ಬಿಹಾರ| ಹೋಳಿ ಆಚರಣೆಯ ಸಂದರ್ಭದಲ್ಲಿ 80 ವರ್ಷದ ದಲಿತ ವೃದ್ಧೆ ಮೇಲೆ ಅತ್ಯಾಚಾರ

ಬಿಹಾರ| ಹೋಳಿ ಆಚರಣೆಯ ಸಂದರ್ಭದಲ್ಲಿ 80 ವರ್ಷದ ದಲಿತ ವೃದ್ಧೆ ಮೇಲೆ ಅತ್ಯಾಚಾರ

- Advertisement -
- Advertisement -

ಕಳೆದ ಭಾನುವಾರ ಸಂಜೆ ಹುಲ್ಲು ಕತ್ತರಿಸಲು ಗೋಧಿ ಹೊಲಕ್ಕೆ ತೆರಳಿದ್ದ 80 ವರ್ಷದ ದಲಿತ ವೃದ್ದೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಪಾಟ್ನಾ ಬಳಿಯಲ್ಲಿ ಬೆಳಕಿಗೆ ಬಂದಿದೆ. ಹೊಲಕ್ಕೆ ತೆರಳಿದ್ದ ವೃದ್ದೆ ಮೇಲೆ ಆರೋಪಿ ಹಲ್ಲೆ ನಡೆಸಿದ್ದು, ಆಕೆಯ ಬಾಯಿ ಮುಚ್ಚಿಸಿದ ನಂತರ ಘೋರ ಅಪರಾಧ ಎಸಗಿದ್ದಾನೆ ಎಂದು ಆಕೆಯ ಕುಟುಂಬ ಸದಸ್ಯರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

“ಸಂತ್ರಸ್ತ ಮಹಿಳೆ ಮನೆಯಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿರುವ ಗೋಧಿ ಹೊಲದಲ್ಲಿ ಹುಲ್ಲು ಕತ್ತರಿಸುತ್ತಿದ್ದಾಗ, ಕೆಲವರು ಆಕೆಯನ್ನು ಹಿಂದಿನಿಂದ ಹಿಡಿದುಕೊಂಡಿದ್ದಾರೆ. ಆಕೆ ತನ್ನನ್ನು ಬಿಡಿಸಿಕೊಳ್ಳಲು ಪ್ರಯತ್ನಿಸಿದಾಗ, ಬಾಯಿ ಮುಚ್ಚಿ ಅತ್ಯಾಚಾರ ಎಸಗಿದರು. ಹಲ್ಲೆ ನಡೆಸಿ, ಆಕೆಯ ದೇಹದ ಮೇಲೆ ಹಲವಾರು ಗಾಯಗಳನ್ನು ಮಾಡಿದ್ದಾರೆ. ಆರೋಪಿ ವೃದ್ದೆಯ ಕಣ್ಣುಗಳನ್ನು ಕಿತ್ತುಹಾಕಲು ಪ್ರಯತ್ನಿಸಿದ್ದು, ಆಕೆ ಪ್ರಜ್ಞೆ ತಪ್ಪಿದ ನಂತರ ಮೃತಪಟ್ಟಿದ್ದಾಳೆಂದು ನಂಬಿ ಸ್ಥಳದಿಂದ ಪರಾರಿಯಾಗಿದ್ದನು” ಎಂದು ದೂರಿನಲ್ಲಿ ತಿಳಿಸಲಾಗಿದೆ. ಸ್ಥಳದಲ್ಲಿ ಇನ್ನೂ ಇಬ್ಬರಿರು. ಆದರೆ, ಅವರು ಅತ್ಯಾಚಾರದಲ್ಲಿ ಭಾಗವಹಿಸಲಿಲ್ಲ ಎಂದು ತಿಳಿದುಬಂದಿದೆ.

“ಅಪರಾಧ ನಡೆದ 19 ಗಂಟೆಗಳ ನಂತರ ಮಾರ್ಚ್ 15 ರಂದು ಮಧ್ಯಾಹ್ನ ಮಹಿಳೆಗೆ ಪ್ರಜ್ಞೆ ಬಂದು ಘಟನೆಯ ಬಗ್ಗೆ ತಿಳಿಸಿದಾಗ, ಅವರು ಆರೋಪಿಯ ಮನೆಗೆ ಹೋಗಿ ಆತನನ್ನು ಪ್ರಶ್ನಿಸಿದ್ದಾರೆ. ಆದರೆ, ಆತನ ಸಹೋದರ ಮತ್ತು ತಂದೆ ಜಾತಿ ನಿಂದನೆ ಮಾಡಿ ಅವರನ್ನು ಬೆದರಿಸಿದ್ದಾರೆ. ಇದರ ನಂತರ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಲಾಯಿತು” ಎಂದು ದೂರುದಾರರು ಹೇಳಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಬಿಎನ್‌ಎಸ್ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಮುಖ ಆರೋಪಿ, ಆತನ ಕುಟುಂಬದ ನಾಲ್ವರು ಮತ್ತು ಅಪರಾಧದ ಸಮಯದಲ್ಲಿ ಸ್ಥಳದಲ್ಲಿದ್ದ ಇತರ ಇಬ್ಬರು ಸೇರಿದ್ದಾರೆ. ಪ್ರಮುಖ ಆರೋಪಿಯೊಂದಿಗೆ ಇದ್ದ ಇಬ್ಬರಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಸ್ಟೇಷನ್ ಹೌಸ್ ಅಧಿಕಾರಿ (ಎಸ್‌ಎಚ್‌ಒ) ತಿಳಿಸಿದ್ದಾರೆ.

“ಪ್ರಮುಖ ಆರೋಪಿ, ಆತನ ಮತ್ತೊಬ್ಬ ಸಹಚರ ಮತ್ತು ಆತನ ಕುಟುಂಬದ ನಾಲ್ವರು ಸದಸ್ಯರನ್ನು ಬಂಧಿಸಲು ದಾಳಿ ನಡೆಸಲಾಗುತ್ತಿದೆ, ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ” ಎಂದು ಅವರು ಹೇಳಿದರು.

ಹೋಳಿ ಹಬ್ಬದ ದಿನದಂದು ಅತ್ತೆಯನ್ನು ಹುಡುಕುತ್ತಿದ್ದಾಗ, ಗ್ರಾಮದ ಕೆಲವು ಮಹಿಳೆಯರು ವೃದ್ಧ ಮಹಿಳೆ ಗೋಧಿ ಹೊಲದಲ್ಲಿ ಪ್ರಜ್ಞಾಹೀನಳಾಗಿ ಬಿದ್ದಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ ಎಂದು ಸಂತ್ರಸ್ತೆಯ ಸೊಸೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಎಸ್‌ಎಚ್‌ಒ ಹೇಳಿದರು. ನಂತರ ಅವರು ಸ್ಥಳಕ್ಕೆ ಹೋಗಿ ಸ್ಥಳೀಯ ನಿವಾಸಿಗಳ ಸಹಾಯದಿಂದ ಆಕೆಯನ್ನು ಮನೆಗೆ ಕರೆತಂದು ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಕೊಡಿಸಿದ್ದಾರೆ.

“ಘಟನೆಯ 19 ಗಂಟೆಗಳ ನಂತರ, ಮಾರ್ಚ್ 15 ಮಧ್ಯಾಹ್ನದ ಸುಮಾರಿಗೆ ವೃದ್ಧ ಮಹಿಳೆ ಪ್ರಜ್ಞೆ ಮರಳಿ ಬಂದು ಇಡೀ ಸಂಕಷ್ಟವನ್ನು ವಿವರಿಸಿದರು” ಎಂದು ಎಸ್‌ಎಚ್‌ಒ ಹೇಳಿದರು.

24 ದಲಿತರ ಸಾಮೂಹಿಕ ಹತ್ಯೆ ಪ್ರಕರಣ | 44 ವರ್ಷಗಳ ಬಳಿಕ ತೀರ್ಪು ಪ್ರಕಟ; ಮೂವರು ದೋಷಿಗಳೆಂದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...