Homeಮುಖಪುಟಬಿಹಾರ | ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಕುಸಿತ

ಬಿಹಾರ | ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಕುಸಿತ

- Advertisement -
- Advertisement -

ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಒಂದು ಭಾಗ ಕುಸಿದಿರುವ ಘಟನೆ ಬಿಹಾರದ ಪಾಟ್ನಾ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಘಟನೆ ಭಾನುವಾರ ರಾತ್ರಿ ನಡೆದಿದ್ದು ಯಾರಿಗೂ ಗಾಯಗಳಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಿಹಾರದ ಹಲವಾರು ಜಿಲ್ಲೆಗಳಲ್ಲಿ ಹತ್ತಕ್ಕೂ ಹೆಚ್ಚು ಸೇತುವೆಗಳು ಕುಸಿದಿದ್ದು ದೇಶದ ಗಮನ ಸೆಳೆದಿತ್ತು.ಬಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಭಕ್ತಿಯಾರಪುರ-ತಾಜಪುರ ಗಂಗಾ ಮಹಾಸೇತು’ ನಿರ್ಮಾಣವನ್ನು ಬಿಹಾರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಲಿಮಿಟೆಡ್ (BSRDCL) ಮೇಲ್ವಿಚಾರಣೆ ಮಾಡಿತ್ತು. ಭಕ್ತಿಯಾರ್‌ಪುರ-ತಾಜ್‌ಪುರ ಗಂಗಾ ಮಹಾಸೇತುವಿನ ಗರ್ಡರ್‌ಗಳ ಬೇರಿಂಗ್‌ಗಳನ್ನು ಬದಲಾಯಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಂಬಗಳ ಮೇಲೆ ಗರ್ಡರ್‌ಗಳನ್ನು ಹಾಕುವಾಗ, ಅವುಗಳಲ್ಲಿ ಒಂದು ಕುಸಿದಿದೆ ಎಂದು ವರದಿಯಾಗಿದೆ.

ಇದನ್ನೂಓದಿ: ರಾಜ್ಯಪಾಲರು ಸರ್ಕಾರದ ಪ್ರತಿದಿನದ ಆಡಳಿತದ ಬಗ್ಗೆ ಮಾಹಿತಿ ಕೇಳಿದರೆ ಹೇಗೆ? ಗೃಹ ಸಚಿವ ಪರಮೇಶ್ವರ್

“ಬೇರಿಂಗ್‌ಗಳನ್ನು ಬದಲಾಯಿಸುವುದು ದಿನನಿತ್ಯದ ಪ್ರಕ್ರಿಯೆಯಾಗಿದೆ. ಯಾವುದೇ ಸಾವು ನೋವು ಸಂಭವಿಸಿದ ವರದಿಗಳಿಲ್ಲ. ನಡೆಯುತ್ತಿರುವ ಕೆಲಸವನ್ನು ಪರಿಶೀಲಿಸಲು ನಾವು ಸ್ಥಳಕ್ಕೆ ಹೋಗುತ್ತಿದ್ದೇವೆ” ಎಂದು ಬಿಎಸ್‌ಆರ್‌ಡಿಸಿಎಲ್ ಮುಖ್ಯ ಪ್ರಧಾನ ವ್ಯವಸ್ಥಾಪಕ ಪ್ರಬಿನ್ ಚಂದ್ರ ಗುಪ್ತಾ ಪಿಟಿಐಗೆ ತಿಳಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಯೋಜನೆಯ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜೂನ್ 2011 ರಲ್ಲಿ 5.57 ಕಿಲೋಮೀಟರ್ ಉದ್ದದ ಭಕ್ತಿಯಾರ್ಪುರ್-ತಾಜಪುರ ಗಂಗಾ ಮಹಾಸೇತು ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದರು. ಯೋಜನೆಯ ಒಟ್ಟು ವೆಚ್ಚ 1,602.74 ಕೋಟಿ ರೂ. ಆಗಿದೆ.

“ನಿರ್ಮಾಣ ಹಂತದಲ್ಲಿರುವ ಸೇತುವೆಯ ಗರ್ಡರ್ ದಿನನಿತ್ಯದ ಕೆಲಸದ ಸಮಯದಲ್ಲಿ ಭಕ್ತಿಯಾರ್‌ಪುರ ಭಾಗದಲ್ಲಿ ಬಿದ್ದಿದೆ” ಎಂದು ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರಶೇಖರ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ. ಯೋಜನೆಯು ಪೂರ್ಣಗೊಂಡ ನಂತರ, ಸೇತುವೆಯು ಸಮಸ್ತಿಪುರದ ರಾಷ್ಟ್ರೀಯ ಹೆದ್ದಾರಿ 28 ಮತ್ತು ಪಾಟ್ನಾದ NH 31 ಅನ್ನು ಸಂಪರ್ಕಿಸುತ್ತದೆ.

ಈ ಯೋಜನೆಯು ಪಾಟ್ನಾದ ಮಹಾತ್ಮ ಗಾಂಧಿ ಸೇತು ಮತ್ತು ಮೊಕಾಮಾದಲ್ಲಿನ ರಾಜೇಂದ್ರ ಸೇತುಗಳಲ್ಲಿ ಟ್ರಾಫಿಕ್ ಹೊರೆ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಪೂರ್ಣಗೊಂಡಾಗ, ಇದು ಉತ್ತರ ಮತ್ತು ದಕ್ಷಿಣ ಬಿಹಾರದ ನಡುವಿನ ಮತ್ತೊಂದು ಪ್ರಮುಖ ರಸ್ತೆ ಸಂಪರ್ಕವಾಗಿಯೂ ಕಾರ್ಯನಿರ್ವಹಿಸುತ್ತದೆ.

ವಿಡಿಯೊ ನೋಡಿ: ನಂಗ ಜೇನು ಕುರುಬ ಮಕ್ಕಾಳು.. ದೂರಿ ದೂರಿ, ನಂಗ ಕಾಡಿನ ಅರಸಾರು.. ದೂರಿ ದೂರಿ – ಜೇನು ಕುರುಬರ ಹಾಡು ಕೇಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...