Homeಮುಖಪುಟಬಿಹಾರ | ಮತ್ತೆ ಮೋದಿಯ ಕಾಲು ಮುಟ್ಟಿ ನಮಿಸಲು ಪ್ರಯತ್ನಿಸಿದ ನಿತೀಶ್ ಕುಮಾರ್!

ಬಿಹಾರ | ಮತ್ತೆ ಮೋದಿಯ ಕಾಲು ಮುಟ್ಟಿ ನಮಿಸಲು ಪ್ರಯತ್ನಿಸಿದ ನಿತೀಶ್ ಕುಮಾರ್!

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರು ದರ್ಭಾಂಗಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾಲನ್ನು ಮುಟ್ಟಿ ನಮಿಸಲು ಪ್ರಯತ್ನಿಸಿರುವ ಘಟನೆ ಬುಧವಾರ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ವೈರಲ್ ಆಗಿದ್ದು, ನಿತೀಶ್ ಕುಮಾರ್ ಅವರು ಮೋದಿಯವರಿಗೆ ಕೈಮುಗಿಯುತ್ತಾ ಅವರ ಕಾಲನ್ನು ಮುಟ್ಟಿ ನಮಿಸುತ್ತಿರುವುದು ಈ ವರ್ಷದಲ್ಲಿ ಇದು ಮೂರನೇ ಬಾರಿಯಾಗಿದೆ. ಮತ್ತೆ ಮೋದಿಯ ಕಾಲು

ನಿತೀಶ್ ಕುಮಾರ್ ಅವರು ತನ್ನ ಕಾಲನ್ನು ಮುಟ್ಟಲು ಪ್ರಯತ್ನಿಸುತ್ತಿರುವಾಗ ಪ್ರಧಾನಿ ಮೋದಿ ಅದನ್ನು ತಡೆದಿದ್ದು, ಅವರ ಕೈ ಕುಲುಕಿದ್ದಾರೆ. ಇದೇ ಕಾರ್ಯಕ್ರಮದ ಮತ್ತೊಂದು ವಿಡಿಯೊ ಕೂಡಾ ವೈರಲ್ ಆಗಿದ್ದು, ಅದರಲ್ಲಿ ಪಕ್ಷದ ಕಾರ್ಯಕರ್ತರು ಪ್ರಧಾನಿ ಮೋದಿಗೆ ಹಾರ ಹಾಕುತ್ತಿರುವ ವೇಳೆ, ಮೋದಿ ಅವರು ನಿತೀಶ್ ಕುಮಾರ್ ಅವರನ್ನು ತಮ್ಮ ಕಡೆಗೆ ಎಳೆದುಕೊಳ್ಳುತ್ತಾರೆ. ಮತ್ತೆ ಮೋದಿಯ ಕಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವರ್ಷದ ಜೂನ್‌ನಲ್ಲಿ ನಿತೀಶ್ ಕುಮಾರ್ ಅವರು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಮೋದಿಯವರ ಕಾಲನ್ನು ಮುಟ್ಟಿ ನಮಸ್ಕರಿಸಲು ಪ್ರಯತ್ನಿಸಿದ್ದರು. ಅಷ್ಟೆ ಅಲ್ಲದೆ, ಏಪ್ರಿಲ್‌ ವೇಳೆ ನವಾಡದಲ್ಲಿ ನಡೆದ ಲೋಕಸಭಾ ಚುನಾವಣಾ ರ್ಯಾಲಿಯಲ್ಲಿ ಕೂಡಾ ಪ್ರಧಾನಿ ಮೋದಿಯವರ ಕಾಲನ್ನು ಮುಟ್ಟಿ ನಮಸ್ಕರಿಸಿದ್ದರು.

ಲೋಕಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷವು ಬಿಜೆಪಿಯ ಎರಡನೇ ಅತಿದೊಡ್ಡ ಮಿತ್ರ ಪಕ್ಷವಾಗಿ ಹೊರಹೊಮ್ಮಿದೆ. ಅಲ್ಲದೆ, ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಲು ಅವರ ಪಕ್ಷವು ಬೆಂಬಲ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದ ಬಿಜೆಪಿ, ಬಹುಮತದ ಗಡಿ ದಾಟಲು ಜೆಡಿಯು ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿಯನ್ನು ಅವಲಂಬಿಸಿದೆ.

ಬಿಹಾರವನ್ನು ‘ಜಂಗಲ್ ರಾಜ್‌’ನಿಂದ ಹೊರತಂದ ನಿತೀಶ್ ಕುಮಾರ್: ಮೋದಿ

ದರ್ಭಾಂಗಾದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಏಮ್ಸ್‌ಗೆ ಅಡಿಪಾಯ ಹಾಕಿದ್ದು, ಸುಮಾರು 12,100 ಕೋಟಿ ರೂಪಾಯಿ ಮೌಲ್ಯದ ಹಲವಾರು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಿತೀಶ್ ಕುಮಾರ್ ಅವರು ರಾಜ್ಯವನ್ನು ಪರಿವರ್ತನೆ ಮಾಡಿದ್ದು, ರಾಜ್ಯವನ್ನು ‘ಜಂಗಲ್ ರಾಜ್’ನಿಂದ ಹೊರತಂದಿದ್ದಾರೆ” ಎಂದು ಶ್ಲಾಘಿಸಿ, ಆರ್‌ಜೆಡಿ ಮತ್ತು ಲಾಲು ಪ್ರಸಾದ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎನ್‌ಡಿಎ ಆಡಳಿತದಲ್ಲಿ ಬಿಹಾರದ ಆರೋಗ್ಯ ಮೂಲಸೌಕರ್ಯದಲ್ಲಿನ ಸುಧಾರಣೆಗಳನ್ನೂ ಪ್ರಧಾನಮಂತ್ರಿ ಎತ್ತಿ ತೋರಿಸಿದ್ದಾರೆ. “ಬಿಹಾರದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ಬಿಹಾರದ ಹಿಂದಿನ ಸರ್ಕಾರ ಆರೋಗ್ಯ ಮೂಲಸೌಕರ್ಯಗಳ ಬಗ್ಗೆ ಎಂದಿಗೂ ತಲೆಕೆಡಿಸಿಕೊಳ್ಳಲಿಲ್ಲ. ಅವರು ಸುಳ್ಳು ಭರವಸೆಗಳನ್ನು ನೀಡುತ್ತಿದ್ದರು. ಆದರೆ ನಿತೀಶ್ ಕುಮಾರ್ ಅಧಿಕಾರಕ್ಕೆ ಬಂದ ನಂತರ ಪರಿಸ್ಥಿತಿ ಸುಧಾರಿಸಿದೆ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ‘ಬುಲ್ಡೋಜರ್ ಈಗ ಗ್ಯಾರೇಜ್‌ನಲ್ಲಿ ಉಳಿಯಲಿದೆ..’; ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

‘ಬುಲ್ಡೋಜರ್ ಈಗ ಗ್ಯಾರೇಜ್‌ನಲ್ಲಿ ಉಳಿಯಲಿದೆ..’; ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...