Homeಮುಖಪುಟಬಿಹಾರ: ನಿತೀಶ್-ತೇಜಸ್ವಿ ನಡುವೆ ಒಪ್ಪಂದ; ಹೊಸ ಸರ್ಕಾರದಲ್ಲಿ ಯಾರಿಗೆ ಯಾವ ಸ್ಥಾನ?

ಬಿಹಾರ: ನಿತೀಶ್-ತೇಜಸ್ವಿ ನಡುವೆ ಒಪ್ಪಂದ; ಹೊಸ ಸರ್ಕಾರದಲ್ಲಿ ಯಾರಿಗೆ ಯಾವ ಸ್ಥಾನ?

- Advertisement -
- Advertisement -

ಬಿಹಾರದಲ್ಲಿ ಹೊಸ ಸರ್ಕಾರ ರಚಿಸುವ ಕಸರತ್ತುಗಳು ನಡೆಯುತ್ತಿದ್ದು, ಬಿಜೆಪಿಯ ಮೈತ್ರಿಯಿಂದ ಹೊರಬಂದಿರುವ ನಿತೀಶ್‌ ಕುಮಾರ್‌ ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಲಿದ್ದಾರೆ.

32 ವರ್ಷದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಹಾಗೂ ನಿತೀಶ್‌ ಕುಮಾರ್‌ ನಡುವೆ ಒಪ್ಪಂದವಾಗಿದ್ದು ಯಾರಿಗೆ ಯಾವ ಸ್ಥಾನವೆಂದು ನಿರ್ಧರಿಸಲಾಗಿದೆ.

ಮೂಲಗಳನ್ನು ಉಲ್ಲೇಖಿಸಿ ಎನ್‌.ಡಿ.ಟಿ.ವಿ ವರದಿ ಮಾಡಿದೆ. ಜೆಡಿಯು ಪಕ್ಷದ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ. ಆರ್‌ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಲಿದ್ದಾರೆ. ಎಲ್ಲಾ ಸಚಿವಾಲಯಗಳ ನಿಯೋಜನೆಯಲ್ಲಿ ನಿತೀಶ್ ಕುಮಾರ್ ಅವರಿಗೆ ವಿಶೇಷಾಧಿಕಾರ ನೀಡಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂದಿನ ಸ್ಪೀಕರ್‌‌ ಸ್ಥಾನವನ್ನು ತೇಜಸ್ವಿ ಯಾದವ್‌ ಅವರ ಪಕ್ಷವಾದ ಆರ್‌ಜೆಡಿಯಿಂದ ಆಯ್ಕೆ ಮಾಡಲಾಗುತ್ತಿದೆ.

ನಿತೀಶ್ ಕುಮಾರ್ ನೇತೃತ್ವದ ಹೊಸ ಸರ್ಕಾರದಲ್ಲಿ ಪಾಲ್ಗೊಳ್ಳಲು ಸಿದ್ಧರಿರುವ ಎಡಪಕ್ಷಗಳು ಮತ್ತು ಕಾಂಗ್ರೆಸ್‌ನಂತಹ ಇತರ ವಿರೋಧ ಪಕ್ಷಗಳೊಂದಿಗೆ ತೇಜಸ್ವಿ ಯಾದವ್ ಅವರು ಸಭೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಕೆಳಗಿಳಿಸಬೇಕು ಎಂದು ನಿತೀಶ್‌ ಕುಮಾರ್ ಬಯಸಿದ್ದರು. ತಮ್ಮ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತುವ ಮೂಲಕ ಸಂವಿಧಾನವನ್ನು ಬಹಿರಂಗವಾಗಿ ಉಲ್ಲಂಘಿಸಿದ್ದಾರೆ ಎಂದು ನಿತೀಶ್‌ ಆರೋಪಿಸಿದ್ದರು. ಸ್ಪೀಕರ್‌ ಸಿನ್ಹಾ ಅವರ ಮೇಲೆ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅನೇಕ ಸಲ ಅಸಮಾಧಾನ ವ್ಯಕ್ತಪಡಿಸಿದ್ದರು. ಹೀಗೆ ರಾಜಕೀಯ ಬಿಕ್ಕಟ್ಟು ಆರಂಭವಾಯಿತು.

2019ರ ಜೂನ್‌ನಲ್ಲಿ ನರೇಂದ್ರ ಮೋದಿ ಸರ್ಕಾರದಲ್ಲಿ ತಮ್ಮ ಪಕ್ಷ ಜೆಡಿಯುಗೆ ಒಂದೇ ಒಂದು ಸ್ಥಾನವನ್ನು ನೀಡಿದ ನಂತರ ನಿತಿಶ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆನಂತದಲ್ಲಿ ನಿತೀಶ್‌ ಕುಮಾರ್‌ ಕ್ಯಾಬಿನೇಟ್‌ ವಿಸ್ತರಣೆ ಮಾಡಿ ತಮ್ಮ ಪಕ್ಷದ ಎಂಟು ಮಂದಿಯನ್ನು ಸೇರಿಸಿಕೊಂಡರು. ಬಿಜೆಪಿಗೆ ಒಂದು ಸ್ಥಾನವನ್ನು ನೀಡಿದ್ದರು.

ರಾಜ್ಯ ಮತ್ತು ಕೇಂದ್ರ ಸರ್ಕಾರದ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಯೋಚನೆಯನ್ನು ಜೆಡಿಯು ಮುಖ್ಯಸ್ಥರು ವಿರೋಧಿಸಿದ್ದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಏಕಕಾಲದಲ್ಲಿ ಚುನಾವಣೆಯನ್ನು ನಡೆಸುವ ಪ್ರಸ್ತಾಪವನ್ನು ಮೋದಿ ಮಾಡಿದ್ದು, ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಜೆಡಿಯು ಪ್ರತಿಪಕ್ಷಗಳ ನಿಲುವನ್ನು ಸ್ವಾಗತಿಸಿರುವುದು ಬಿಜೆಪಿಗೆ ಸಹಿಸಲಾಗಿಲ್ಲ.

ಇದನ್ನೂ ಓದಿರಿ: ನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

ನಿತೀಶ್‌ ಕುಮಾರ್ ಅವರು ತಮ್ಮ ಸಂಪುಟಕ್ಕೆ ಬಿಜೆಪಿ ಸಚಿವರನ್ನು ಸೇರಿಸಿಕೊಳ್ಳುವಾಗ ಸವಾಲುಗಳನ್ನು ಎದುರಿಸಿದ್ದರು. ತಮಗೆ ಆಪ್ತರಾಗಿರುವವರನ್ನು ಮಂತ್ರಿಗಳನ್ನಾಗಿ ಮಾಡುವ ಮೂಲಕ ಬಿಹಾರದ ಮೇಲೆ ಗೃಹ ಸಚಿವ ಅಮಿತ್ ಶಾ ಹಿಡಿತ ಸಾಧಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿದ್ದವು. ರಾಜಕೀಯ ತಿರುವುಗಳಿಗೆ ಇದು ಕೂಡ ಕಾರಣವಾಯಿತು.

ಜೆಡಿಯು ತೊರೆದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್, ಬಿಜೆಪಿ ನಾಯಕರೊಂದಿಗೆ ನೇರವಾಗಿ ವ್ಯವಹರಿಸುತ್ತಿದ್ದದ್ದು ನಿತೀಶ್ ಕುಮಾರ್‌ ಅವರ ಕೋಪಕ್ಕೆ ಕಾರಣವಾಯಿತು. ನಿತೀಶ್ ಅವರ ನಿಲುವಿಗೆ ವಿರುದ್ಧವಾಗಿ ಕೇಂದ್ರದ ಮಂತ್ರಿಯಾಗಿದ್ದರು.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು. ಅದನ್ನು ಮೀರಿ ಆರ್‌ಸಿಪಿ ಸಿಂಗ್‌ ಕೇಂದ್ರ ಸರ್ಕಾರದ ಸಚಿವರಾಗಿದ್ದು ಸರಿಯೇ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಭಾನುವಾರ ಹೇಳಿಕೆ ನೀಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

LEAVE A REPLY

Please enter your comment!
Please enter your name here

- Advertisment -

Must Read

‘ಟಿಪ್ಪು ಸುಲ್ತಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

0
"ಜಿಹಾದಿ ಶಾರುಖ್ ಖಾನ್‌ನ ಭಾರೀ ಬಜೆಟ್‌ನಿಂದ ತಯಾರಾದ ದೇಶದ್ರೋಹಿ, ಮತಾಂಧ ತಿಪ್ಪೆ ಸುಲ್ತಾನನ ನಕಲಿ ಚರಿತ್ರೆ ಬರುತ್ತಿದೆ. ಇಂತಹ ದೇಶದ್ರೋಹಿಯ ಸಿನಿಮಾವನ್ನು ಬಹಿಷ್ಕರಿಸಲು ಶೇರ್ ಮಾಡಿ" ಎಂದು ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ...