Homeಮುಖಪುಟಬಿಹಾರ ವಿಧಾನಸಭೆ ಕಲಾಪ: 2ನೇ ದಿನವೂ ಅಗ್ನಿಪಥ ವಿರುದ್ಧದ ಪ್ರತಿಭಟನೆ ಮುಂದುವರಿಕೆ

ಬಿಹಾರ ವಿಧಾನಸಭೆ ಕಲಾಪ: 2ನೇ ದಿನವೂ ಅಗ್ನಿಪಥ ವಿರುದ್ಧದ ಪ್ರತಿಭಟನೆ ಮುಂದುವರಿಕೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೊಳಿಸುತ್ತಿರುವ ಅಗ್ನಿಪಥ ಯೋಜನೆ ಕುರಿತ ಚರ್ಚೆಗಾಗಿ ಎರಡನೇ ದಿನವೂ (ಮಂಗಳವಾರ) ಬಿಹಾರ ವಿಧಾನಸಭೆಯಲ್ಲಿ ಗದ್ದಲ ಮುಂದುವರೆದಿದೆ. ಯೋಜನೆ ಕುರಿತು ಚರ್ಚೆ ನಡೆಸಬೇಕು ಎಂಬ ಪ್ರತಿಪಕ್ಷಗಳ ನಿರಂತರ ಬೇಡಿಕೆಯನ್ನು ಸಭಾಪತಿ ತಿರಸ್ಕರಿಸಿದ್ದಾರೆ.

ಆರ್‌ಜೆಡಿ ನೇತೃತ್ವದ ವಿರೋಧ ಪಕ್ಷದ ಸದಸ್ಯರು ಸಶಸ್ತ್ರ ಪಡೆಗಳಲ್ಲಿ ನೇಮಕಾತಿಯ ಹೊಸ ಯೋಜನೆಯ ವಿರುದ್ಧ ಘೋಷಣೆಗಳನ್ನು ಕೂಗುವುದರೊಂದಿಗೆ ಬೆಳಿಗ್ಗೆ 11 ಗಂಟೆಗೆ ಕಲಾಪ ಪ್ರಾರಂಭವಾಯಿತು. ಸೋಮವಾರವೂ ಗದ್ದಲ ಹೆಚ್ಚಾಗಿ ವಿಧಾನಸಭೆ ಕಲಾಪವನ್ನು ಪದೇ ಪದೇ ಮುಂದೂಡಲಾಗುತ್ತಿತ್ತು.

ರಾಷ್ಟ್ರೀಯ ಜನತಾ ದಳ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್) ಮತ್ತು ಕಾಂಗ್ರೆಸ್‌ನ ಹಲವಾರು ಸದಸ್ಯರು ಯೋಜನೆಯ ವಿರುದ್ಧ ಸದನದ ಬಾವಿಯಲ್ಲಿ ನಿಂತು ಘೋಷಣೆಗಳನ್ನು ಕೂಗಿದ್ದಾರೆ. ಸದನದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ವಿಷಯದ ಬಗ್ಗೆ ಮೌನ ಮುರಿಯುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ’ಅಗ್ನಿಪಥ್’ ಯೋಜನೆ; ’ಎಕ್ಸೆಕ್ಯುಟಿವ್’ ಆಡಳಿತ ಎಂಬುದು ಸರ್ವಾಧಿಕಾರದ ’ಪ್ರಾಕ್ಸಿ’

ಗಮನಾರ್ಹವಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರ ಜೆಡಿಯುನ ಅನೇಕ ನಾಯಕರು ಅಗ್ನಿಪಥ್ ವಿರುದ್ಧದ ಪ್ರತಿಭಟನೆಗಳ ಬಗ್ಗೆ ಸಹಾನುಭೂತಿ ಹೊಂದಿದ್ದು, ಇದು ಮಿತ್ರಪಕ್ಷ ಬಿಜೆಪಿಗೆ ಕಿರಿಕಿರಿಯನ್ನುಂಟುಮಾಡಿದೆ.

ಗದ್ದಲಗಳ ನಡುವೆ ಸಭಾಪತಿ ವಿಜಯ್ ಕುಮಾರ್ ಸಿನ್ಹಾ ಸದನವನ್ನು ನಡೆಸಲು ಪ್ರಯತ್ನಿಸಿದ್ದರು. ಪ್ರತಿಪಕ್ಷಗಳ ಸದಸ್ಯರ ಗದ್ದಲದ ನಡುವೆಯೇ ಪ್ರಶ್ನೋತ್ತರ ಅವಧಿಯನ್ನು ನಡೆಸಿದರು, ಆಗ ಪ್ರತಿಭಟನಾ ನಿರತ ನಾಯಕರು ಸದನದ ಬಾವಿಯಲ್ಲಿ ಕುಳಿತು ಘೋಷಣೆ ಕೂಗಿದ್ದಾರೆ.

ಸುಮಾರು ಅರ್ಧಗಂಟೆಯ ಬಳಿಕ ಶಾಸಕಾಂಗ ಕಲಾಪಕ್ಕೆ ಅಡ್ಡಿಯಾಗುತ್ತಿದ್ದಂತೆ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿತ್ತು. ಸದನ ಮತ್ತೆ ಕಲಾಪ ಆರಂಭವಾದಾಗ ಪ್ರತಿಪಕ್ಷಗಳ ಸದಸ್ಯರ ಗದ್ದಲದಿಂದ ಮಧ್ಯಾಹ್ನ 2 ಗಂಟೆಯವರೆಗೆ ಮತ್ತೆ ಕಲಾಪ ಮುಂದೂಡಲಾಯಿತು.

ಮಧ್ಯಾಹ್ನ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ನೇತೃತ್ವದಲ್ಲಿ ಎಲ್ಲಾ ವಿಪಕ್ಷಗಳು ಸಭೆ ನಡೆಸಿವೆ. “ಕೇಂದ್ರ ಸರ್ಕಾರದ ಗುತ್ತಿಗೆ ಆಧಾರಿತ ಅಗ್ನಿಪಥ ಯೋಜನೆಯಿಂದ ಉಂಟಾಗಿರುವ ಪ್ರತಿಭಟನೆ ಸಂದರ್ಭಗಳಲ್ಲಿ ದಮನಕಾರಿ ಕ್ರಮ ಕೈಗೊಂಡು, ಯುವಕರ ಮೇಲೆ ದಾಖಲಾದ ಪ್ರಕರಣಗಳು ಹಾಗೂ ಯುವಕರ ಭವಿಷ್ಯವನ್ನು ಹಾಳು ಮಾಡಿದ ಈ ಯೋಜನೆ ವಾಪಸಾತಿಗೆ ಮುಂದಿನ ಕ್ರಿಯಾ ಯೋಜನೆ ಕುರಿತು ಎಲ್ಲಾ ವಿರೋಧ ಪಕ್ಷಗಳ ಜೊತೆ ನಡೆದ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ” ಎಂದು ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಅಗ್ನಿಪಥ ಯೋಜನೆ ಬೀರಬಹುದಾದ ಪರಿಣಾಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...