Homeಕರ್ನಾಟಕಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೈಸೂರು: ಬಿಹಾರದಲ್ಲಿನ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನವೆಂಬರ್ 3ರಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬಿಹಾರ ಚುನಾವಣೆ ಪ್ರಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತನೀಡಲು ಕೋರಲಾಗುವುದು ಎಂದರು. 

ಬಿಹಾರದಲ್ಲಿನ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿವೆ. ಬಿಹಾರದಲ್ಲಿ ಎನ್.ಡಿ. ಎ ಮೈತ್ರಿಕೂಟವೂ ರಾಜ್ಯದ ಗ್ಯಾರಂಟಿ ಯೋಜನೆಗಳ ಭರವಸೆಗಳ ಮಾದರಿಯನ್ನು ಅನುಸರಿಸಿದೆ. ಕರ್ನಾಟಕದಲ್ಲಿ 1.24 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ಗೃಹಲಕ್ಷ್ಮಿ ಗ್ಯಾರಂಟಿ ನೀಡಲಾಗುತ್ತಿದೆ. ಇದುವರೆಗೆ ರಾಜ್ಯದಲ್ಲಿ 1 ಲಕ್ಷ ಕೋಟಿಗೂ ಹೆಚ್ಚು ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ.  ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದ್ದು, ಅವರಿಗೆ ಯಾವುದೇ ಸಿದ್ಧಾಂತವಿಲ್ಲ. ಬಿಹಾರದಲ್ಲಿ ಬಡತನ ನಿರ್ಮೂಲನೆಯಾಗಿಲ್ಲ.  ಆದ್ದರಿಂದ ಬಡವರು, ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಮತ ಚಲಾಯಿಸುವ ಭರವಸೆಯಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳ ಕುರಿತು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿರುವ ಹಲವು ಸಾಧಕರನ್ನು ಗುರುತಿಸಿ ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಬಾರಿ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ ಎಂದರು.

ಮೈಸೂರಿನಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ತಲೆ ಎತ್ತುತ್ತಿದ್ದು, ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ. ನೀರು ಮತ್ತು ಮೇವಿನ ಕೊರತೆ ಹಾಗೂ ಹುಲಿ ಚಿರತೆಗಳ ಹಾವಳಿಯಿಂದ  ಕಾಡು ಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಸಭೆ ಈಗಾಗಲೇ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿಯೂ ಸಭೆ ನಡೆಯಲಿದೆ. ಅಲ್ಲದೇ, ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಇದೇ ವೇಳೆ ಕರ್ನಾಟಕದ ಮುಖ್ಯಮಂತ್ರಿಗಳ ಬದಲಾವಣೆ ಕುರಿತ ಮಾತನಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನರು ಅಭಿಪ್ರಾಯವೇನೇ ಇದ್ದರೂ, ಹೈಕಮಾಂಡ್ ನ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಈ ಬಗ್ಗೆ ಏನೂ ಹೇಳಿರುವುದಿಲ್ಲ . ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನರ್ ರಚಿಸುವ ಬಗ್ಗೆ  ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...