Homeಮುಖಪುಟಬಿಹಾರ ಚುನಾವಣೆ: ಜಿತಾನ್ ರಾಮ್ ಮಾಂಜಿ ಮಹಾಮೈತ್ರಿ ತೊರೆಯುವುದಾಗಿ ಘೋಷಣೆ

ಬಿಹಾರ ಚುನಾವಣೆ: ಜಿತಾನ್ ರಾಮ್ ಮಾಂಜಿ ಮಹಾಮೈತ್ರಿ ತೊರೆಯುವುದಾಗಿ ಘೋಷಣೆ

ಒಂದು ಕಾಲದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ್ದ ಮಾಂಜಿ, ತಡವಾಗಿ ರಾಜ್ಯ ಸರ್ಕಾರ ತೆಗೆದುಕೊಂಡ ವಿಭಿನ್ನ ನಿರ್ಧಾರಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಪ್ರತಿ ಪಕ್ಷ ಮಹಾಮೈತ್ರಿ‌ಗೆ ಹಿನ್ನಡೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಜಿತಾನ್ ರಾಮ್ ಮಾಂಜಿ ನೇತೃತ್ವದ ಹಿಂದೂಸ್ತಾನಿ ಅವಂ ಮೋರ್ಚಾ (ಜಾತ್ಯತೀತ) (ಎಚ್‌ಎಎಂ-ಎಸ್) ಮೈತ್ರಿಯನ್ನು ತೊರೆಯುವುದಾಗಿ ಘೋಷಿಸಿದೆ.

ಎನ್‌ಡಿಎಗೆ ಸೇರ್ಪಡೆಗೊಳ್ಳಲು ಸಜ್ಜಾಗಿರುವ ಪಕ್ಷವು ಈ ಕುರಿತು ಒಂದೆರಡು ದಿನಗಳಲ್ಲಿ ಕರೆ ನೀಡುವುದಾಗಿ ಹೇಳಿದೆ. “ಪಕ್ಷದ ಕಾರ್ಯಕಾರಿ ಸಮಿತಿಯು ಭವಿಷ್ಯದ ಕ್ರಮಗಳ ಬಗ್ಗೆ ಕ್ರಮ ತೆಗೆದುಕೊಳ್ಳಲು ಮಾಂಜಿ ಅವರಿಗೆ ಅಧಿಕಾರ ನೀಡಿದೆ” ಎಂದು HAM-S ವಕ್ತಾರ ಡ್ಯಾನಿಶ್ ರಿಜ್ವಾನ್ ಹೇಳಿದ್ದಾರೆ.

ಪಕ್ಷದ ಮೂಲಗಳು ಎಚ್‌ಎಎಂ-ಎಸ್ ಜೆಡಿಯು ಜೊತೆ ವಿಲೀನಗೊಳ್ಳಬಹುದು ಅಥವಾ ಬಿಹಾರ ವಿಧಾನಸಭಾ ಚುನಾವಣೆಗೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು ಎಂದು ಹೇಳಿದರು. ಜೊತೆಗೆ “ರಾಜಕೀಯವು ಸಂಭವನೀಯತೆಗಳು ಮತ್ತು ಸಾಧ್ಯತೆಗಳಿಂದ ತುಂಬಿದೆ” ಎಂದು ರಿಜ್ವಾನ್ ಹೇಳಿದ್ದಾರೆ.

ಒಂದು ಕಾಲದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ್ದ ಮಾಂಜಿ, ತಡವಾಗಿ ರಾಜ್ಯ ಸರ್ಕಾರ ತೆಗೆದುಕೊಂಡ ವಿಭಿನ್ನ ನಿರ್ಧಾರಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

ಪಕ್ಷವು ಮಹಾಮೈತ್ರಿಯ ಭಾಗವಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿತ್ತು ಮತ್ತು ಹೀನಾಯವಾಗಿ ಸೋತಿತು. ಹಾಗಾಗಿ ಮಾಂಜಿ, ಕಳೆದ ಎರಡು ತಿಂಗಳುಗಳಲ್ಲಿ ಒವೈಸಿ ನೇತೃತ್ವದ-ಎಐಐಎಂಐಎಂ ಸೇರಿದಂತೆ ವಿವಿಧ ಪಕ್ಷಗಳೊಂದಿಗೆ ಮೈತ್ರಿಯ ಆಯ್ಕೆಗಳನ್ನು ಹುಡುಕುತ್ತಿದ್ದಾರೆ.

ಇದಕ್ಕೂ ಮೊದಲು, 2015ರ ಆರಂಭದಲ್ಲಿ ಸಿಎಂ ಹುದ್ದೆಯನ್ನು ತ್ಯಜಿಸಿದ ನಂತರ ಮಾಂಜಿ, ನಿತೀಶ್ ಕುಮಾರ್ ಅವರೊಂದಿಗೆ ಹೊರಗುಳಿದಿದ್ದರು. 2015ರ ವಿಧಾನಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ನಂತರ ಅವರು ಎನ್‌ಡಿಎಯಿಂದ ಹೊರನಡೆದಿದ್ದರು.

ಬಿಹಾರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಎಚ್‌ಎಎಂ-ಎಸ್ ತಲಾ ಒಬ್ಬ ಸದಸ್ಯರನ್ನು ಹೊಂದಿದೆ.

ಪಕ್ಷದ ಮೂಲಗಳು ಎಚ್‌ಎಎಂ-ಎಸ್ ಎನ್‌ಡಿಎಯ ಭಾಗವಾಗುವುದು ಔಪಚಾರಿಕವಾಗಿದೆ ಎಂದು ಹೇಳಿದರು. “ಪಕ್ಷವು, ಸ್ಥಾನಗಳ ಬಗ್ಗೆ ಯಾವುದೇ ಪೂರ್ವ ಷರತ್ತುಗಳನ್ನು ವಿಧಿಸಿಲ್ಲ” ಎಂದು ಪಕ್ಷದ ಹಿರಿಯ ಮುಖಂಡರು ಹೇಳಿದ್ದಾರೆ.

“ಯಾರಾದರೂ ಎನ್‌ಡಿಎ ನಾಯಕತ್ವ ಮತ್ತು ನೀತಿಯಲ್ಲಿ ನಂಬಿಕೆ ತೋರಿಸಿದರೆ, ಇತರ ಪಕ್ಷಗಳು ಸೇರುವುದರಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ” ಎಂದು ಬಿಜೆಪಿ ವಕ್ತಾರ ನಿಖಿಲ್ ಆನಂದ್ ಹೇಳಿದ್ದಾರೆ.


ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...