Homeಮುಖಪುಟಬಿಹಾರ ವಿಧಾನಸಭೆ ಚುನಾವಣೆ : 143 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಆರ್‌ಜೆಡಿ

ಬಿಹಾರ ವಿಧಾನಸಭೆ ಚುನಾವಣೆ : 143 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಆರ್‌ಜೆಡಿ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ 143 ಅಭ್ಯರ್ಥಿಗಳ ಪಟ್ಟಿಯನ್ನು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸೋಮವಾರ (ಅ.20) ಪ್ರಕಟಿಸಿದ್ದು, ಎರಡನೇ ಮತ್ತು ಅಂತಿಮ ಹಂತದ ನಾಮಪತ್ರ ಸಲ್ಲಿಕೆಯ ಅವಧಿ ಮುಗಿಯುವ ಕೆಲವೇ ಗಂಟೆಗಳ ಮೊದಲು ಈ ಪಟ್ಟಿಯನ್ನು ಪ್ರಕಟಿಸಲಾಗಿದೆ. ನವೆಂಬರ್ 6 ಮತ್ತು 11 ರಂದು ಮತದಾನ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆಯಾಗಿ ಫಲಿತಾಂಶ ಘೋಷಣೆಯಾಗಲಿದೆ.

ವೈಶಾಲಿ ಜಿಲ್ಲೆಯ ರಾಘೋಪುರ ವಿಧಾನಸಭಾ ಕ್ಷೇತ್ರದಿಂದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಕಣಕ್ಕಿಳಿದಿದ್ದಾರೆ. ರಾಘೋಪುರ ಯಾದವ್ ಕುಟುಂಬಕ್ಕೆ ಅಪಾರ ರಾಜಕೀಯ ಮತ್ತು ಭಾವನಾತ್ಮಕ ಸಂಬಂಧವನ್ನು ಹೊಂದಿರುವ ಕ್ಷೇತ್ರವಾಗಿದೆ. ಈ ಕ್ಷೇತ್ರವು ಆರ್‌ಜೆಡಿಯ ಭದ್ರಕೋಟೆಯಾಗಿದ್ದು, ಈ ಹಿಂದೆ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪತ್ನಿ, ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಪ್ರತಿನಿಧಿಸಿದ್ದರು. ತೇಜಸ್ವಿ ಯಾದವ್ 2015ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಸತತ ಮೂರನೇ ಅವಧಿಗೆ ಸ್ಪರ್ಧಿಸುತ್ತಿದ್ದಾರೆ.

143 ಅಭ್ಯರ್ಥಿಗಳಲ್ಲಿ, ಐವರು ಇಂಡಿಯಾ ಒಕ್ಕೂಟದ ಇತರ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಲಿದ್ದಾರೆ. ಆರ್‌ಜೆಡಿ ಪ್ರಸ್ತುತ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ರಾಜೇಶ್ ಕುಮಾರ್ ರಾಮ್ ಪ್ರತಿನಿಧಿಸುವ ಕುಟುಂಬ ಕ್ಷೇತ್ರದಿಂದಲೂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದೆ ಎಂಬ ಚರ್ಚೆಗೆ ಮುನ್ನೆಲೆಗೆ ಬಂದಿತ್ತು. ಇಂಡಿಯಾ ಒಕ್ಕೂಟದ ಎರಡು ಪ್ರಮುಖ ಪಕ್ಷಗಳ ನಡುವೆ ತಿಕ್ಕಾಟಕ್ಕೆ ಕಾರಣವಾಗುತ್ತಿದ್ದ ಆ ವಂದಂತಿಗೆ ಆರ್‌ಜೆಡಿಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಇತಿಶ್ರಿ ಹಾಡಿದೆ.

ಆರ್‌ಜೆಡಿ ವೈಶಾಲಿ, ಲಾಲ್‌ಗಂಜ್ ಮತ್ತು ಕಹಲ್‌ಗಾಂವ್‌ನಲ್ಲಿ ಕಾಂಗ್ರೆಸ್ ವಿರುದ್ಧ ಹಾಗೂ ತಾರಾಪುರ ಮತ್ತು ಗೌರ ಬೋರಂನಲ್ಲಿ ಮಾಜಿ ರಾಜ್ಯ ಸಚಿವ ಮುಖೇಶ್ ಸಾಹ್ನಿ ಅವರ ವಿಕಾಸಶೀಲ ಇನ್ಸಾನ್ ಪಕ್ಷದ ವಿರುದ್ಧ ಸ್ಪರ್ಧಿಸಲಿದೆ ಎಂದು ಹೇಳಲಾಗಿತ್ತು. ಈ ವದಂತಿಗೂ ಪಟ್ಟಿ ಪ್ರಕಟಣೆ ತೆರೆ ಎಳೆದಿದೆ.

ಅಭ್ಯರ್ಥಿಗಳ ಪೈಕಿ ತೇಜಸ್ವಿ ಯಾದವ್ (ರಾಘೋಪುರ್), ಅಲೋಕ್ ಮೆಹ್ತಾ (ಉಜಿಯಾರ್‌ಪುರ್), ಮುಖೇಶ್ ರೌಶನ್ (ಮಹುವಾ) ಮತ್ತು ಅಖ್ತರುಲ್ ಇಸ್ಲಾಂ ಶಾಹಿನ್ (ಸಮಸ್ತಿಪುರ್) ಇವರೆಲ್ಲರೂ ತಮ್ಮ ಹಾಲಿ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ.

ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಆಪ್ತ ಸಹಾಯಕ ಭೋಲಾ ಯಾದವ್, 2015ರಲ್ಲಿ ಬಹದ್ದೂರ್‌ಪುರ ಸ್ಥಾನವನ್ನು ಗೆದ್ದಿದ್ದರು. ಆದರೆ, ಐದು ವರ್ಷಗಳ ನಂತರ ಪಕ್ಷವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿ (ಯು)ಗೆ ವಿರುದ್ದ ಕ್ಷೇತ್ರವನ್ನು ಕಳೆದುಕೊಂಡಿತ್ತು. ಈ ಬಾರಿ ಸಚಿವ ಮದನ್ ಸಾಹ್ನಿಯಿಂದ ಅದನ್ನು ಮರಳಿ ಪಡೆಯಲು ಮುಂದಾಗಿದೆ.

ಕಳೆದ ವರ್ಷ ಲೋಕಸಭಾ ಚುನಾವಣೆಯಲ್ಲಿ ಸಿವಾನ್‌ನಿಂದ ಸ್ಪರ್ಧಿಸಿ ಜೆಡಿಯು ವಿರುದ್ದ ಸೋತಿದ್ದ ಮಾಜಿ ಸ್ಪೀಕರ್ ಅವಧ್ ಬಿಹಾರಿ ಚೌಧರಿ ಅವರಿಗೆ ಅದೇ ಕ್ಷೇತ್ರವನ್ನು ಮತ್ತೆ ನೀಡಲಾಗಿದೆ.

ಹಿಂದೂ ಧರ್ಮಗ್ರಂಥಗಳ ಕುರಿತು ವಿವಾದಾತ್ಮಕ ದೃಷ್ಟಿಕೋನಗಳಿಂದ ಸುದ್ದಿಯಲ್ಲಿರುವ ಮಾಜಿ ಶಿಕ್ಷಣ ಸಚಿವ ಚಂದ್ರಶೇಖರ್ ಅವರನ್ನು ಅವರ ಹಾಲಿ ಕ್ಷೇತ್ರ ಮಾಧೇಪುರದಿಂದ ಕಣಕ್ಕಿಳಿಸಲಾಗಿದೆ.

ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ‘ಎಂವೈ’ (ಮುಸ್ಲಿಂ-ಯಾದವ್) ಬೆಂಬಲ ನೆಲೆಯನ್ನು ಗಮನದಲ್ಲಿರಿಸಿಕೊಂಡಿರುವಂತೆ ತೋರುತ್ತದೆ. ಆದರೂ, ಇತರ ಹಿಂದುಳಿದ ಜಾತಿಗಳು ಮತ್ತು ಮೇಲ್ಜಾತಿಗಳಿಗೂ ಟಿಕೆಟ್ ನೀಡಲಾಗಿದೆ.

ಆರ್‌ಜೆಡಿ ಈ ಬಾರಿ 21 ಮಹಿಳೆಯರನ್ನು ಕಣಕ್ಕಿಳಿಸಿದೆ. ಈ ಮೂಲಕ ಪ್ರಮುಖ ಪ್ರತಿಸ್ಪರ್ಧಿಗಳಾದ ಜೆಡಿ(ಯು) ಮತ್ತು ಬಿಜೆಪಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡಿದೆ.

ಆಡಳಿತಾರೂಢ ಎನ್‌ಡಿಎಯ ಎರಡು ಪ್ರಮುಖ ಪಕ್ಷಗಳಾದ ಜೆಡಿಯು ಮತ್ತು ಬಿಜೆಪಿ ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ.

ಅಧಿಕಾರದಲ್ಲಿದ್ದಾಗ ‘ಜಂಗಲ್ ರಾಜ್‌’ ಜಾರಿಯಾಗಿದೆ ಎಂದು ವಿರೋಧಿಗಳಿಂದ ಆಗಾಗ್ಗೆ ಆರೋಪಕ್ಕೊಳಗಾಗಿದ್ದ ಆರ್‌ಜೆಡಿ, ಇಮೇಜ್ ಬದಲಾವಣೆಗಿಂತ ವಾಸ್ತವ ರಾಜಕೀಯಕ್ಕೆ ಆದ್ಯತೆ ನೀಡಿದೆ.

ಮಾಫಿಯಾ ಡಾನ್‌ನಿಂದ ರಾಜಕಾರಣಿಯಾದ ಬೋಗೋ ಸಿಂಗ್ (ಮಾತಿಹಾನಿ) ಸ್ವತಃ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಮತ್ತೊಂದೆಡೆ ಒಸಾಮಾ ಶಹಾಬ್‌ಗೆ ತಮ್ಮ ದಿವಂಗತ ತಂದೆ ಮೊಹಮ್ಮದ್ ಶಹಾಬುದ್ದೀನ್‌ರ ರಾಜಕೀಯ ಪರಂಪರೆಯನ್ನು ಮುಂದುವರೆಸಲು ಅವಕಾಶ ನೀಡಲಾಗಿದೆ. ಒಸಾಮಾ ರಘುನಾಥ್‌ಪುರದಿಂದ ಚುನಾವಣೆಗೆ ಚೊಚ್ಚಲ ಪ್ರವೇಶ ಮಾಡುತ್ತಿದ್ದಾರೆ. ಇದು ಸಿವಾನ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಈ ಕ್ಷೇತ್ರದಲ್ಲಿ ಶಹಾಬುದ್ದೀನ್ ಶಿಕ್ಷೆಗೆ ಒಳಗಾಗಿ ಅನರ್ಹಗೊಳ್ಳುವವರೆಗೂ ಯಾವುದೇ ಚುನಾವಣೆಯಲ್ಲಿ ಸೋಲದೆ ಗೆದ್ದಿದ್ದರು.

ಮಾಜಿ ಸಂಸದೆ, ರಾಜಕಾರಣಿ ಸೂರಜ್ ಭನ್ ಸಿಂಗ್ ಅವರ ಪತ್ನಿ ವೀಣಾ ದೇವಿ ಮೊಕಾಮಾ ಕ್ಷೇತ್ರದಲ್ಲಿ ತಮ್ಮ ಪತಿಯ ಬದ್ಧ ವೈರಿ ಅನಂತ್ ಸಿಂಗ್ ಅವರನ್ನು ಎದುರಿಸಲಿದ್ದಾರೆ.

ಲಂಡನ್‌ನಿಂದ ಕಾನೂನು ಪದವಿ ಪಡೆದಿರುವ ಚೊಚ್ಚಲ ಸ್ಪರ್ಧಿ ಶಿವಾನಿ ಶುಕ್ಲಾ, ಲಾಲ್‌ಗಂಜ್‌ನಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರವನ್ನು ಉತ್ತರ ಬಿಹಾರದ ಅತ್ಯಂತ ಭಯಂಕರ ಗ್ಯಾಂಗ್‌ಲಾರ್ಡ್‌ಗಳಲ್ಲಿ ಒಬ್ಬರಾದ ಅವರ ತಂದೆ ಮುನ್ನಾ ಶುಕ್ಲಾ ಎರಡು ಬಾರಿ ಮತ್ತು ಅವರ ತಾಯಿ ಅನ್ನು ಶುಕ್ಲಾ ಒಮ್ಮೆ ಗೆದ್ದಿದ್ದರು.

ಮಹಾಘಟಬಂಧನದೊಳಗಿನ ಗೊಂದಲದಿಂದಾಗಿ, ಆರ್‌ಜೆಡಿ ಇಲ್ಲಿಯವರೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರಲಿಲ್ಲ. ಆದಾಗ್ಯೂ, ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡುವ ಮೊದಲೇ, ಪಕ್ಷವು ತನ್ನ ಎಲ್ಲಾ ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ಹಂಚಿಕೆ ಮಾಡಿತ್ತು.

ಕಾಂಗ್ರೆಸ್ ಸೋಮವಾರ ಇನ್ನೂ ಏಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪಕ್ಷವು ಘೋಷಿಸಿದ ಒಟ್ಟು ಅಭ್ಯರ್ಥಿಗಳ ಸಂಖ್ಯೆ 61ಕ್ಕೆ ತಲುಪಿದೆ.

ಮಹಾಘಟಬಂಧನ್ ಮೈತ್ರಿಕೂಟದ ಎರಡು ಪ್ರಮುಖ ಪಕ್ಷಗಳಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವಿನ ಔಪಚಾರಿಕ ಸೀಟು ಹಂಚಿಕೆ ಒಪ್ಪಂದವು ಒಮ್ಮತಕ್ಕೆ ಬರಲು ಸಾಧ್ಯವಾಗದಿದ್ದರೂ, ಮಧ್ಯರಾತ್ರಿಯ ನಂತರ ಕಾಂಗ್ರೆಸ್ ಪಟ್ಟಿಯನ್ನು ಪ್ರಕಟಿಸಿದೆ.

ಇದಕ್ಕೂ ಮೊದಲು, ಕಾಂಗ್ರೆಸ್ ವಕ್ತಾರ ಪವನ್ ಖೇರಾ ಇಂಡಿಯಾ ಒಕ್ಕೂಟದ ಪಕ್ಷಗಳ ನಡುವಿನ ಸೀಟು ಹಂಚಿಕೆ ಈಗಾಗಲೇ ಅಂತಿಮಗೊಳಿಸಲಾಗಿದೆ ಎಂದು ಹೇಳಿದ್ದರು. “ಎಲ್ಲವನ್ನೂ ಅಂತಿಮಗೊಳಿಸಲಾಗಿದೆ, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ, ಅದನ್ನು ಸೂಕ್ತ ಸಮಯದಲ್ಲಿ ಮಾಡಲಾಗುವುದು” ಎಂದಿದ್ದರು.

ಮಹಾರಾಷ್ಟ್ರದ ಮತದಾರರ ಪಟ್ಟಿಗೆ ಚುನಾವಣಾ ಆಯೋಗ 96 ಲಕ್ಷ ನಕಲಿ ಮತದಾರರನ್ನು ಸೇರಿಸಿದೆ : ರಾಜ್ ಠಾಕ್ರೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...