Homeಮುಖಪುಟಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು:...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

- Advertisement -
- Advertisement -

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

ದೌರ್ಜನ್ಯ ವಿರೋಧಿಸಿ ಮಹಿಳೆ ಕೂಗಾಡಿದಾಗ ಜನಸಮೂಹ ಜಮಾಹಿಸಿದೆ, ಈಗಿದ್ದರೂ ಅಪರಾಧ ಕೃತ್ಯ ನಿಲ್ಲಿಸದ ದುಷ್ಟರು ಆಕೆಯ ಮೇಲೆ ತೀವ್ರ ಹಲ್ಲೆಯನ್ನು ಮಾಡಿ ವಿಡಿಯೋ ಚಿತ್ರಿಸಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋಗಳನ್ನು ಹರಿಬಿಟ್ಟಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ, ಆದರೆ ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಈ ಘಟನೆಯು ಪ್ರದೇಶದಾದ್ಯಂತ ಆಕ್ರೋಶವನ್ನು ಹುಟ್ಟುಹಾಕಿದೆ.

2026 ಮಾರ್ಚ್ 26 ರಂದು ನಡೆದಿದ್ದ ಈ ಘಟನೆ ವಿಡಿಯೋ ವೈರಲ್ ಆದ ನಂತರ ತಡವಾಗಿ ಬೆಳಕಿಗೆ ಬಂದಿದೆ. 

ಪೊಲೀಸರು ಭಾರತೀಯ ನ್ಯಾಯ ಸಂಹಿತಾ, 2023 ರ ಸೆಕ್ಷನ್ 74/75/76/115(2)/126(2)/3(5) ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳನ್ನು ಪಚು ಯಾದವ್ ಅಲಿಯಾಸ್ ಪುನಾ ಯಾದವ್ ಅವರ ಪುತ್ರ ಅಶೋಕ್ ಯಾದವ್ ಮತ್ತು ದಿವಂಗತ ಹರಿಹರ್ ಮಹ್ತೊ ಅವರ ಪುತ್ರ ಮಟ್ಲು ಮಹ್ತೊ ಅಲಿಯಾಸ್ ನವನೀತ್ ಕುಮಾರ್ ನರೋತ್ತಮ್ ಎಂದು ಗುರುತಿಸಲಾಗಿದೆ. ನಳಂದ ಜಿಲ್ಲೆಯ ನೂರ್ಸರೈ ಪೊಲೀಸ್ ಠಾಣೆ ವ್ಯಾಪ್ತಿಯ ಅಜಯ್‌ಪುರ ಗ್ರಾಮದ ನಿವಾಸಿಗಳಿಬ್ಬರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ವರದಿಯ ಪ್ರಕಾರ, ಸಂತ್ರಸ್ತೆ ತನ್ನ ಹೆತ್ತವರ ಮನೆಯಲ್ಲಿ ವಾಸಿಸುತ್ತಿದ್ದಳು. ಮಾರ್ಚ್ 26 ರಂದು ಸಂಜೆ 6 ರಿಂದ 7 ಗಂಟೆಯ ನಡುವೆ, ಅವಳು ದಿನಸಿ ಸಾಮಾನುಗಳೊಂದಿಗೆ ಹಿಂತಿರುಗುತ್ತಿದ್ದಾಗ ಮೂವರು ಆರೋಪಿಗಳು ಅವಳನ್ನು ಹಿಡಿದುಕೊಂಡರು. ಅವಳು ವಿರೋಧಿಸಿದಾಗ ಅವರು ಅವಳನ್ನು ನೆಲಕ್ಕೆ ಎಸೆದು ಬಟ್ಟೆಗಳನ್ನು ಹರಿದು ಹಾಕಿ ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೇ ಹಲ್ಲೆ ಮಾಡಿ ವಿಡಿಯೋ ಚಿತ್ರಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸೋಮವಾರ (ಅ.26) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೊಸ ಮತದಾರರನ್ನು ಸೇರಿಸುವ 'ಫಾರಂ-6ರ' ಜೊತೆ ಸಲ್ಲಿಸುವಂತೆ ಸೂಚಿಸಲಾಗಿದ್ದ 'ಘೋಷಣಾ ಪತ್ರ' ಫಾರಂ-6ರ ಭಾಗವಾಗಿರಲಿಲ್ಲ ಎಂದು ಹೇಳಿದೆ. ಚುನಾವಣಾ ಆಯೋಗ ನಿರ್ಧಾರಗಳ ಕುರಿತು...

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...

ತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

ತಮಿಳುನಾಡಿನ ಆಂಡಿಪಟ್ಟಿ ಸಮೀಪದ ತೆಕ್ಕಂಪಟ್ಟಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿಯನ್ನು ಥಳಿಸಿ 17 ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಂಗಳವಾರ (ಅ.27) ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಜೈಲಿನಿಂದ ಪರಾರಿಯಾದವರ ಪೈಕಿ...

ಕರ್ನಾಟಕ ಎಸ್ಐಆರ್: ಅಂತಿಮ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರುಗಳು ಹೊರಕ್ಕೆ; ಮತದಾರರ ಸಂಖ್ಯೆ 4.55 ಕೋಟಿಗೆ ಕುಸಿತ: ವರದಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಮಂಗಳವಾರ ಪ್ರಕಟವಾಗಲಿರುವ ಅಂತಿಮ ಪಟ್ಟಿಯಲ್ಲಿ ರಾಜ್ಯದ...

‘ನ್ಯೂಸ್‌ರೂಮ್‌ಗಳೇ ಮುಚ್ಚಿಹೋಗಲಿವೆ’ : ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿಎನ್‌ಪಿಎ; ಕೇಂದ್ರ ಸರ್ಕಾರಕ್ಕೆ ನೋಟಿಸ್

ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ, 2023ರ (DPDP Act) ನಿಬಂಧನೆಗಳನ್ನು ಪ್ರಶ್ನಿಸಿ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA) ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.27) ನೋಟಿಸ್...

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು : ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಕೈಗೊಂಡ...

SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!

ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR)ಗೆ ಸಂಬಂಧಿಸಿದ ಎಲ್ಲಾ ಆದೇಶಗಳು ಸಂಪೂರ್ಣ ಒಮ್ಮತದಿಂದಲೇ ಹೊರಬಂದಿವೆ ಎಂದು ಭಾರತೀಯ...

ಎಸ್‌ಸಿ-ಎಸ್‌ಟಿ ಮತ್ತು ಮುಸ್ಲಿಮರ ಇತಿಹಾಸ, ಸಂಕಟ ಒಂದೇ, ಸಮಸಮಾಜ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಶೋಷಿತ ಸಮುದಾಯಗಳು ಒಂದಾಗಬೇಕಿದೆ: ರಿಜ್ವಾನ್ ಅರ್ಷದ್

ಸಮಾಜದಲ್ಲಿ ತಾರತಮ್ಯ ಮತ್ತು ಶೋಷಣೆಗೆ ಒಳಗಾದ ಸಮುದಾಯಗಳು ಒಗ್ಗಟ್ಟಾಗಿ ನಿಂತಾಗ ಮಾತ್ರ ಸಾಮಾಜಿಕ ನ್ಯಾಯ ಮತ್ತು ಸಮಾನ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್...

ಮಹಾರಾಷ್ಟ್ರ ಎಸ್‌ಐಆರ್‌ನಲ್ಲಿ ಹೆಸರು ಅಳಿಸಿದ ಬಳಿಕ ಮರು ನೋಂದಣಿ: ಮತದಾರರ ವಿರುದ್ಧ ಕ್ರಮವಿಲ್ಲ ಎಂದ ಸುಪ್ರೀಂ ಕೋರ್ಟ್ 

ನವದೆಹಲಿ: ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವೇಳೆ ಹೆಸರುಗಳನ್ನು ಅಳಿಸಿರುವ ಪ್ರಕರಣದಲ್ಲಿ, ಮರು ನೋಂದಣಿಗೆ ಅರ್ಜಿ ಸಲ್ಲಿಸುವ ಮತದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಸುಪ್ರೀಂ...