Homeಚಳವಳಿಬಿಹಾರ: ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಕೈಗಳನ್ನು ಕಟ್ಟಿ ಬಂಧಿಸಿದ ಪೊಲೀಸರು

ಬಿಹಾರ: ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಕೈಗಳನ್ನು ಕಟ್ಟಿ ಬಂಧಿಸಿದ ಪೊಲೀಸರು

- Advertisement -
- Advertisement -

ಬಿಹಾರದ ಗಯಾ ಜಿಲ್ಲೆಯಲ್ಲಿ ಮರಳು ಗಣಿಗಳ ಹರಾಜಿನ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಸರ್ಕಾರಿ ಅಧಿಕಾರಿಗಳಿಗೆ ಸಹಾಯ ಮಾಡುವ ಪೊಲೀಸ್ ಅಧಿಕಾರಿಗಳೊಂದಿಗೆ ಘರ್ಷಣೆ ನಡೆದಿದೆ. ಈ ಹಿನ್ನೆಲೆ ಮಹಿಳೆಯರು ಸೇರಿದಂತೆ ಹಲವರು ಗ್ರಾಮಸ್ಥರ ಕೈಗಳನ್ನು ಬಟ್ಟೆಯಿಂದಲೇ ಕಟ್ಟಿ ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಗ್ರಾಮಸ್ಥರು ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದಾಗ, ಗುಂಪು ಚದುರಿಸಲು ಪೊಲೀಸರು ಲಾಠಿ ಮತ್ತು ಅಶ್ರುವಾಯು ಸಿಡಿಸಿದ್ದಾರೆ. ಘರ್ಷಣೆಯಲ್ಲಿ ಮಹಿಳೆಯರು ಸೇರಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಸ್ಥರು ಮತ್ತು ಮಹಿಳೆಯರು ನೆಲದ ಮೇಲೆ ಕೈಕಟ್ಟಿ ಕುಳಿತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಮಹಿಳೆಯರ ಸಿರೆಯ ಸೆರಗು, ಯುವತಿಯರ ದುಪ್ಪಟ್ಟಗಳಿಂದಲೇ ಅವರ ಕೈಗಳನ್ನು ಕಟ್ಟಲಾಗಿದೆ. ಬಳಿಕ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್‍ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಿದ್ದರೂ, ಮಹಿಳಾ ಆರೋಪಿಗಳನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೆ ಎಂಬುದನ್ನು ನೋಡಿ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

ರಾಜ್ಯದಲ್ಲಿ ಅಕ್ರಮ ಮರಳುಗಾರಿಕೆಯನ್ನು ನಿಭಾಯಿಸಲು, ಬಿಹಾರ ರಾಜ್ಯ ಗಣಿಗಾರಿಕೆ ನಿಗಮವು ಈ ತಿಂಗಳ ಆರಂಭದಲ್ಲಿ ಎಲ್ಲಾ ಮರಳು ಗಣಿಗಾರಿಕೆ ಸ್ಥಳಗಳ ಪರಿಸರ ಲೆಕ್ಕಪರಿಶೋಧನೆಯನ್ನು ನಡೆಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಹಿನ್ನೆಲೆ ಕೆಲಸ ನಿರ್ವಹಿಸುತ್ತಿರುವ ಖಾಸಗಿ ಸಂಸ್ಥೆಗಳು ಮರಳು ದಡಗಳನ್ನು ಪರಿಶೀಲಿಸಲು ತಂತ್ರಜ್ಞಾನ ಮತ್ತು ಡ್ರೋನ್‌ಗಳನ್ನು ಬಳಸುತ್ತಿವೆ.

ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಪೊಲೀಸ್ ವರಿಷ್ಠಾಧಿಕಾರಿ (ಕಾನೂನು ಮತ್ತು ಸುವ್ಯವಸ್ಥೆ), “ಬೆಳಗಂಜ್‌ನಲ್ಲಿ ಮರಳು ಗಣಿಗಾರಿಕೆಯ ಹರಾಜು ಸಂದರ್ಭದಲ್ಲಿ, ಕೆಲವು ಗ್ರಾಮಸ್ಥರು ಕಲ್ಲು ತೂರಾಟ ಆರಂಭಿಸಿದರು, ಇದರಲ್ಲಿ ಒಂಬತ್ತು ಪೊಲೀಸರು ಗಾಯಗೊಂಡಿದ್ದಾರೆ” ಎಂದು ಹೇಳಿದ್ದಾರೆ.

ಗುಂಪನ್ನು ಚದುರಿಸಲು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು, ಜಲಫಿರಂಗಿಗಳನ್ನು ಬಳಸಿದರು ಮತ್ತು ಅಶ್ರುವಾಯು ಸಿಡಿಸಿದ್ದಾರೆ. ಘರ್ಷಣೆಯಲ್ಲಿ ಮಹಿಳೆಯರು ಸೇರಿದಂತೆ ಕೆಲವು ಗ್ರಾಮಸ್ಥರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಪೊಲೀಸರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.


ಇದನ್ನೂ ಓದಿ: ಘಾಜಿಯಾಬಾದ್: ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟಿಸುತ್ತಿದ್ದ ಮಹಿಳೆಯರ ಮೇಲೆ ಪೊಲೀಸರ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...