ರೈಲ್ವೇ ನೇಮಕಾತಿ ಮಂಡಳಿ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ವಿರೋಧ ಪಕ್ಷಗಳು ಇಂದು ಬಂದ್‌ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಬಿಹಾರದ ರಾಜಧಾನಿ ಪಾಟ್ನಾ ಮತ್ತು ರಾಜ್ಯದ ಇತರ ಸ್ಥಳಗಳಲ್ಲಿ ರಸ್ತೆ ತಡೆ ನಡೆಸಿದ್ದಾರೆ. ಅಖಿಲ ಭಾರತ ವಿದ್ಯಾರ್ಥಿಗಳ ಸಂಘ (AISA) ಸೇರಿದಂತೆ ಹಲವಾರು ವಿದ್ಯಾರ್ಥಿಗಳ ಸಂಘಟನೆಗಳು ಬಿಹಾರ ಬಂದ್‌ಗೆ ಕರೆ ನೀಡಿವೆ.
ರೈಲ್ವೇ ಉದ್ಯೋಗಗಳ ಪರೀಕ್ಷೆಯನ್ನು ವಿರೋಧಿಸಿ ಗಣರಾಜ್ಯೋತ್ಸವ ದಿನದಂದು ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಹಿಂಸೆಗೆ ತಿರುಗಿತ್ತು. ಈ ವೇಳೆ ರೈಲೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, ಇನ್ನೊಂದು ರೈಲಿಗೆ ಕಲ್ಲು ತೂರಾಟ ನಡೆಸಲಾಗಿತ್ತು.
ಇದನ್ನೂ ಓದಿ: ರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ
ಎರಡು ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸುವ ರೈಲ್ವೇ ಇಲಾಖೆ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದಿದ್ದರು. 2019 ರಲ್ಲಿ ಹೊರಡಿಸಲಾದ ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆಯಲ್ಲಿ ಒಂದೇ ಒಂದು ಪರೀಕ್ಷೆಯನ್ನು ಉಲ್ಲೇಖಿಸಲಾಗಿತ್ತು. ಅಧಿಕಾರಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ರೈಲ್ವೇ ನೇಮಕಾತಿ ಮಂಡಳಿಯ (ಆರ್‌ಆರ್‌ಬಿ) ಎನ್‌ಟಿಪಿಸಿ ಹಂತ 1 ಪರೀಕ್ಷೆಯ ಫಲಿತಾಂಶಗಳಲ್ಲಿನ ಅಕ್ರಮಗಳನ್ನು ಪ್ರತಿಭಟಿಸಿ ಈ ಪ್ರತಿಭಟನೆ ನಡೆಸಲಾಗಿತ್ತು. ವಿದ್ಯಾರ್ಥಿಗಳ ಕಳವಳಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿರುವ ರೈಲ್ವೆ ಸಚಿವಾಲಯದ ಕ್ರಮವನ್ನು ವಿದ್ಯಾರ್ಥಿ ಸಂಘಟನೆಗಳು “ವಂಚನೆ” ಎಂದು ಕರೆದಿವೆ.
ಲೆವೆಲ್ 2 ರಿಂದ ಲೆವೆಲ್ 6 ರವರೆಗಿನ 35,000 ಕ್ಕೂ ಹೆಚ್ಚು ಹುದ್ದೆಗಳಿಗೆ ಸುಮಾರು 1.25 ಕೋಟಿ ಅಭ್ಯರ್ಥಿಗಳು ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹುದ್ದೆಗಳ ಪ್ರಾರಂಭಿಕ ವೇತನವು ತಿಂಗಳಿಗೆ ₹ 19,900 ರಿಂದ ₹ 35,400 ವರೆಗೆ ಇರುತ್ತದೆ. ಸುಮಾರು 60 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಇದನ್ನೂ ಓದಿ: ಬಿಹಾರ: ಮಕ್ಕಳನ್ನು ಓಡಿಸಲು ಗುಂಡು ಹಾರಿಸಿದ ಬಿಜೆಪಿ ಶಾಸಕನ ಮಗನಿಗೆ ಗ್ರಾಮಸ್ಥರಿಂದ ಥಳಿತ
ರಾಷ್ಟ್ರೀಯ ಜನತಾ ದಳ, ಕಾಂಗ್ರೆಸ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮತ್ತು ಸಿಪಿಐ (ಮಾರ್ಕ್ಸ್‌ವಾದಿ) ಸೇರಿದಂತೆ ವಿರೋಧ ಪಕ್ಷಗಳು ಗುರುವಾರದಂದು ನೀಡಿದ ಜಂಟಿ ಹೇಳಿಕೆಯಲ್ಲಿ, “ಬಿಹಾರವು ದೇಶದಲ್ಲಿ ಅತಿ ಹೆಚ್ಚು ಯುವಜನರನ್ನು ಹೊಂದಿದೆ ಮತ್ತು ಅತಿ ಹೆಚ್ಚು ನಿರುದ್ಯೋಗವನ್ನು ಹೊಂದಿದೆ. ಒಕ್ಕೂಟ ಹಾಗೂ ಬಿಹಾರ ಸರಕಾರಗಳಿಂದ ವಿದ್ಯಾರ್ಥಿಗಳಿಗೆ ವಂಚನೆಯಾಗುತ್ತಿದೆ” ಎಂದು ಹೇಳಿದೆ.
“ಸರ್ಕಾರಗಳು ಯುವಕರಿಗೆ ಉದ್ಯೋಗಗಳ ಭರವಸೆಯನ್ನು ನೀಡುತ್ತದೆ. ಆದರೆ ಅವರು ಉದ್ಯೋಗಕ್ಕಾಗಿ ಒತ್ತಾಯಿಸಿ ಬೀದಿಗೆ ಬಂದಾಗ, ನಿತೀಶ್ ಕುಮಾರ್ ಸರ್ಕಾರವು ಅವರ ಮೇಲೆ ಲಾಠಿ ಬೀಸುತ್ತದೆ” ಎಂದು ಹೇಳಿಕೆ ತಿಳಿಸಿದೆ.
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಘಟಕವಾದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ್ದಾರೆ.
ಇದನ್ನೂ ಓದಿ: ‘ನಾನು 11 ಬಾರಿ ಲಸಿಕೆ ಪಡೆದಿದ್ದೇನೆ’ ಎಂದ ವ್ಯಕ್ತಿ: ತನಿಖೆಗೆ ಆದೇಶಿಸಿದ ಬಿಹಾರ ಸರ್ಕಾ


