Homeಮುಖಪುಟಬಿಹಾರ: ವಿಜಯದಶಮಿ ಆಚರಣೆ ವೇಳೆ ಬಾಲಕಿಯರಿಗೆ ಕತ್ತಿ ಹಂಚಿದ ಬಿಜೆಪಿ ಶಾಸಕ

ಬಿಹಾರ: ವಿಜಯದಶಮಿ ಆಚರಣೆ ವೇಳೆ ಬಾಲಕಿಯರಿಗೆ ಕತ್ತಿ ಹಂಚಿದ ಬಿಜೆಪಿ ಶಾಸಕ

- Advertisement -
- Advertisement -

ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ಶನಿವಾರ ನಡೆದ ವಿಜಯದಶಮಿ ಆಚರಣೆ ವೇಳೆ ಬಿಜೆಪಿ ಶಾಸಕ ಮಿಥಿಲೇಶ್ ಕುಮಾರ್ ಹೆಣ್ಣು ಮಕ್ಕಳಿಗೆ ಕತ್ತಿ ಹಂಚುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ.

“ಯಾವುದೇ ದುಷ್ಟರು ನಮ್ಮ ಸಹೋದರಿಯರನ್ನು ಸ್ಪರ್ಶಿಸಲು ಧೈರ್ಯಮಾಡಿದರೆ, ಅವರ ಕೈಯನ್ನು ಈ ಖಡ್ಗದಿಂದ ಕತ್ತರಿಸಲಾಗುತ್ತದೆ” ಎಂದು ಅವರು ಸೀತಾಮರ್ಹಿ ನಗರದ ಕಪ್ರೋಲ್ ರಸ್ತೆಯಲ್ಲಿರುವ ಪೂಜಾ ಕಾರ್ಯಕ್ರಮದಲ್ಲಿ ಸಭೆಯನ್ನು ಉದ್ದೇಶಿಸಿ ಹೇಳಿದರು.

“ನಾವು ನಮ್ಮ ಸಹೋದರಿಯರಿಗೆ ವಿರೋಧಿಗಳ ಕೈ ಕತ್ತರಿಸುವಷ್ಟು ಸಾಮರ್ಥ್ಯ ಕೊಡಬೇಕು. ಅಗತ್ಯವಿದ್ದರೆ, ನಾನು ಮತ್ತು ನೀವೆಲ್ಲರೂ ಇದನ್ನು ಮಾಡಬೇಕಾಗಿದೆ. ನಮ್ಮ ಸಹೋದರಿಯರ ವಿರುದ್ಧ ಕೆಟ್ಟ ಇಚ್ಛೆಯನ್ನು ಹೊಂದಿರುವ ಎಲ್ಲಾ ದುಷ್ಟರನ್ನು ನಾಶಪಡಿಸಬೇಕು” ಎಂದು ಕುಮಾರ್ ಹೇಳಿದ್ದಾರೆ.

ಮಿಥಿಲೇಶ್ ಕುಮಾರ್ ಅವರು ತಮ್ಮ ಉಪಕ್ರಮಕ್ಕೆ ಜನರು ಬೆಂಬಲ ನೀಡುವಂತೆ ಮನವಿ ಮಾಡಿದರು. ದುಷ್ಕರ್ಮಿಗಳ ವಿರುದ್ಧ ಕಾರ್ಯನಿರ್ವಹಿಸಲು ಜನರನ್ನು, ವಿಶೇಷವಾಗಿ ಮಹಿಳೆಯರನ್ನು ಪ್ರೋತ್ಸಾಹಿಸಿದರು. ಇದೇ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜಿಗೆ ಹೋಗುವ ಹೆಣ್ಣು ಮಕ್ಕಳಿಗೆ ಕತ್ತಿಗಳನ್ನು ವಿತರಿಸಲಾಯಿತು.

ಕುಮಾರ್ ಅವರು ಸ್ಥಳದಲ್ಲಿ ಹಲವಾರು ಬಂದೂಕುಗಳು, ಕತ್ತಿಗಳು ಮತ್ತು ಇತರ ಆಯುಧಗಳನ್ನು ಪ್ರದರ್ಶಿಸಿ, ಅವುಗಳನ್ನು ಪೂಜಿಸಿದರು.

ಮಿಥಿಲೇಶ್ ಕುಮಾರ್ ಸೀತಾಮರ್ಹಿ ಕ್ಷೇತ್ರದ ಬಿಜೆಪಿ ಶಾಸಕ. ನವರಾತ್ರಿಯ ಆರಂಭದಲ್ಲಿ ಹಲವಾರು ದುರ್ಗಾಪೂಜಾ ಪಂಗಡಗಳಿಗೆ ಭೇಟಿ ನೀಡಿ ಕತ್ತಿ ಹಂಚುವ ಮೂಲಕ ಸುದ್ದಿಯಾಗಿದ್ದರು.

ಇದನ್ನೂ ಓದಿ; ಬಿಜೆಪಿ ಭಯೋತ್ಪಾದಕ ಪಕ್ಷ; ದಲಿತರ ಮೇಲಿನ ದಾಳಿಗೆ ಬೆಂಬಲಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...