Homeಮುಖಪುಟಹೋಳಿಯಂದು ಮುಸ್ಲಿಮರು ಮನೆಯೊಳಗೇ ಇರಿ, ಹಿಂದೂಗಳಿಗೆ ಹಬ್ಬ ಆಚರಿಸಲು ಬಿಡಿ ಎಂದ ಬಿಹಾರದ ಬಿಜೆಪಿ ಶಾಸಕ!

ಹೋಳಿಯಂದು ಮುಸ್ಲಿಮರು ಮನೆಯೊಳಗೇ ಇರಿ, ಹಿಂದೂಗಳಿಗೆ ಹಬ್ಬ ಆಚರಿಸಲು ಬಿಡಿ ಎಂದ ಬಿಹಾರದ ಬಿಜೆಪಿ ಶಾಸಕ!

- Advertisement -
- Advertisement -

“ಈ ವರ್ಷ ಪವಿತ್ರ ರಂಝಾನ್ ಮಾಸದ ಶುಕ್ರವಾರ ಬರುವ ಹೋಳಿಯಂದು ಮನೆಯೊಳಗೆ ಇರಿ ಮತ್ತು ಹಿಂದೂಗಳು ತಮ್ಮ ಹಬ್ಬವನ್ನು ಯಾವುದೇ ಅಡೆತಡೆಗಳಿಲ್ಲದೆ ಆಚರಿಸಲು ಬಿಡಿ” ಎಂದು ಬಿಹಾರದ ಬಿಜೆಪಿ ಶಾಸಕರೊಬ್ಬರು ಸೋಮವಾರ (ಮಾ.10) ಮುಸ್ಲಿಮರಿಗೆ ಮನವಿ ಮಾಡಿರುವುದು ವಿವಾದಕ್ಕೀಡಾಗಿದೆ.

ಮಧುಬನಿ ಜಿಲ್ಲೆಯ ಬಿಸ್ಫಿ ವಿಧಾನಸಭಾ ಕ್ಷೇತ್ರದ ಶಾಸಕ ಹರಿಭೂಷಣ್ ಠಾಕೂರ್ ಬಚೌಲ್ ಅವರು ವಿಧಾನಸಭೆ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ.

“ಒಂದು ವರ್ಷದಲ್ಲಿ 52 ಶುಕ್ರವಾರಗಳು ಇರುತ್ತವೆ. ಅವುಗಳಲ್ಲಿ ಒಂದು ಹೋಳಿಯ ದಿನವೇ ಬಂದಿದೆ. ಆದ್ದರಿಂದ, ಮುಸ್ಲಿಮರು ಹಿಂದೂಗಳಿಗೆ ಹಬ್ಬವನ್ನು ಆಚರಿಸಲು ಬಿಡಬೇಕು. ಅವರ ಮೇಲೆ ಬಣ್ಣಗಳನ್ನು ಬಳಿದರೆ ನೊಂದುಕೊಳ್ಳಬಾರದು. ಅವರಿಗೆ ಅಂತಹ ಸಮಸ್ಯೆ ಇದ್ದರೆ, ಅವರು ಮನೆಯಲ್ಲೇ ಇರಬೇಕು. ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಇದು ಅತ್ಯಗತ್ಯ” ಎಂದು ಠಾಕೂರ್ ಹೇಳಿದ್ದಾರೆ.

ಮುಸ್ಲಿಮರು ರಂಝಾನ್ ಸಮಯದಲ್ಲಿ ಉಪವಾಸ ಆಚರಿಸುತ್ತಾರೆ. ಶುಕ್ರವಾರದಂದು ವಿಶೇಷ ಪ್ರಾರ್ಥನೆ ಮಾಡುತ್ತಾರೆ ಎಂದಾಗ, ಶಾಸಕ ಠಾಕೂರ್, “ಅವರದು ಯಾವಾಗಲೂ ದ್ವಿಮುಖ ನೀತಿ. ಬಣ್ಣದ ಪುಡಿ ಮಾರಾಟ ಮಾಡುವ ಅಂಗಡಿಗಳನ್ನು ಹಾಕುವ ಮೂಲಕ ಹಣ ಗಳಿಸಲು ಅವರಿಗೆ ಯಾವ ಅಡೆತಡೆಯೂ ಇಲ್ಲ. ಆದರೆ ಕೆಲವು ಬಣ್ಣದ ಕಲೆಗಳು ಅವರ ಬಟ್ಟೆಗಳ ಮೇಲೆ ಬಿದ್ದರೆ, ಅದು ಅವರಿಗೆ ಆಗುವುದಿಲ್ಲ”, ಎಂದಿದ್ದಾರೆ.

ಆರ್‌ಜೆಡಿ ಶಾಸಕ ಮತ್ತು ಮಾಜಿ ಸಚಿವ ಇಸ್ರೈಲ್ ಮನ್ಸೂರಿ, ಬಚೌಲ್ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಹಬ್ಬಗಳ ವಿಷಯಕ್ಕೆ ಬಂದಾಗ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಯಾವುದೇ ಸಮಸ್ಯೆ ಇಲ್ಲ. ಹಿಂದೂಗಳು ನಮ್ಮ ಇಫ್ತಾರ್ ಕೂಟಗಳಿಗೆ ಹಾಜರಾಗುತ್ತಾರೆ. ಬಿಜೆಪಿ ಶಾಸಕರು ಹೋಳಿಯಂದು ಮುಸ್ಲಿಮರ ಬಗ್ಗೆ ಏಕೆ ಚಿಂತೆ ಮಾಡುತ್ತಿದ್ದಾರೆ? ಇವರೆಲ್ಲ ರಾಜಕೀಯಕ್ಕಾಗಿ ಕೋಮು ಗಲಭೆಯನ್ನು ಹುಟ್ಟುಹಾಕುತ್ತಾರೆ. ಇವರೇ ಸನಾತನದ ಧ್ವಜಧಾರಿಗಳಂತೆ ನಟಿಸುತ್ತಾರೆ” ಎಂದು ಹೇಳಿದ್ದಾರೆ.

ರಾಜ್ಯ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಜೆಡಿ (ಯು) ನಾಯಕ ಜಮಾ ಖಾನ್, “ಹೋಳಿಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯುವುದಿಲ್ಲ. ಹಬ್ಬದ ಸಮಯದಲ್ಲಿ ಸಾಮರಸ್ಯವನ್ನು ಕಾಪಾಡಲು ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ” ಎಂದಿದ್ದಾರೆ.

ಮಧ್ಯಪ್ರದೇಶ | ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮಸೀದಿಯ ಮುಂದೆ ವಿಜಯೋತ್ಸವ ರ‍್ಯಾಲಿ ನಡೆಸಿದ ದುಷ್ಕರ್ಮಿಗಳು; ಭುಗಿಲೆದ್ದ ಕೋಮು ಸಂಘರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...