Homeಮುಖಪುಟಬಿಹಾರ ಸಚಿವ ಸಂಪುಟ ವಿಸ್ತರಣೆ: ತೇಜಸ್ವಿ ಯಾದವ್‌ ಅವರ RJD ಗೆ ಸಿಂಹ ಪಾಲು

ಬಿಹಾರ ಸಚಿವ ಸಂಪುಟ ವಿಸ್ತರಣೆ: ತೇಜಸ್ವಿ ಯಾದವ್‌ ಅವರ RJD ಗೆ ಸಿಂಹ ಪಾಲು

- Advertisement -
- Advertisement -

ಬಿಜೆಪಿ ಮೈತ್ರಿಯಿಂದ ಹೊರ ಬಂದು ಆರ್‌ಜೆಡಿ ಜೊತೆಗೆ ಹೊಸದಾಗಿ ಸರ್ಕಾರ ರಚಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿಗೆ ಅತಿ ಹೆಚ್ಚು ಸ್ಥಾನಗಳು ದೊರೆತಿದ್ದು, ನೂತನ ಸಚಿವರಿಗೆ ರಾಜ್ಯಪಾಲ ಫಾಗು ಚೌಹಾಣ್ ಪ್ರಮಾಣ ವಚನ ಬೋಧಿಸಿದ್ದಾರೆ.

ಬಿಹಾರ ರಾಜಕೀಯ ಬೆಳವಣಿಗೆಯ ಇಂದಿನ ಪ್ರಮುಖ ಅಂಶಗಳು ಇಲ್ಲಿವೆ.

  • ಇಂದು ಬಿಹಾರ ಸಂಪುಟಕ್ಕೆ ಒಟ್ಟು 31 ಸಚಿವರು ಸೇರ್ಪಡೆಗೊಂಡಿದ್ದಾರೆ. ತೇಜಸ್ವಿ ಯಾದವ್‌‌ ಅವರ ಆರ್‌ಜೆಡಿಗೆ 16 ಸಚಿವ ಸ್ಥಾನಗಳು ದೊರೆತಿದ್ದು, ಮುಖ್ಯಮಂತ್ರಿ ನಿತೀಶ್‌ ಕುಮಾರ್‌‌ ಅವರ ಜೆಡಿಯುಗೆ 11 ಸ್ಥಾನಗಳನ್ನು ಗಳಿಸಿದೆ.
    .
    ಇದನ್ನೂ ಓದಿ: ಬಿಹಾರ: ಬಹುಮತ ಸಾಬೀತುಪಡಿಸಲು 2 ವಾರ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್ – ಕಾರಣ?
  • ಕಾಂಗ್ರೆಸ್‌ನ ಇಬ್ಬರು ಶಾಸಕರು, ಜಿತಿನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾದ ಒಬ್ಬರು ಮತ್ತು ಏಕೈಕ ಸ್ವತಂತ್ರ ಶಾಸಕ ಸುಮಿತ್ ಕುಮಾರ್ ಸಿಂಗ್ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಸಿಎಂ ನಿತೀಶ್ ಕುಮಾರ್ ಅವರು ಮೊಹಮ್ಮದ್ ಜಮಾ ಖಾನ್, ಜಯಂತ್ ರಾಜ್, ಶೀಲಾ ಕುಮಾರಿ, ಸುನಿಲ್ ಕುಮಾರ್, ಸಂಜಯ್ ಝಾ, ಮದನ್ ಸಾಹ್ನಿ, ಶ್ರವಣ್ ಕುಮಾರ್, ಅಶೋಕ್ ಚೌಧರಿ, ಲೇಶಿ ಸಿಂಗ್, ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಯಾದವ್ ಸೇರಿದಂತೆ ತಮ್ಮ ಪಕ್ಷದ ಹೆಚ್ಚಿನ ಮಂತ್ರಿಗಳನ್ನು ಉಳಿಸಿಕೊಂಡಿದ್ದಾರೆ.
  • ಆರ್‌ಜೆಡಿಯಿಂದ ತೇಜಸ್ವಿ ಯಾದವ್ ಅವರ ಸಹೋದರ ತೇಜ್ ಪ್ರತಾಪ್ ಯಾದವ್, ಅಲೋಕ್ ಮೆಹ್ತಾ, ಸುರೇಂದ್ರ ಪ್ರಸಾದ್ ಯಾದವ್ ಮತ್ತು ರಮಾನಂದ್ ಯಾದವ್, ಕುಮಾರ್ ಸರ್ವಜೀತ್, ಲಲಿತ್ ಯಾದವ್, ಸಮೀರ್ ಕುಮಾರ್ ಮಹಾಸೇತ್, ಚಂದ್ರಶೇಖರ್, ಜಿತೇಂದ್ರ ಕುಮಾರ್ ರೈ, ಅನಿತಾ ದೇವಿ ಮತ್ತು ಸುಧಾಕರ್ ಸಿಂಗ್, ಇಸ್ರೇಲ್ ಮನ್ಸೂರಿ, ಸುರೇಂದ್ರ ಸಿಂಗ್, ಕಾರ್ತಿಕೇಯ , ಶಹನವಾಜ್ ಆಲಂ, ಶಮೀಮ್ ಅಹಮದ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
    .
    ಇದನ್ನೂ ಓದಿ: ಕಾಲು ಮುರಿಯಿರಿ, ಜಾಮೀನು ಕೊಡಿಸುತ್ತೇನೆ ಎಂದ ಸಿಎಂ ಶಿಂಧೆ ಬಣದ ಶಿವಸೇನೆ ಶಾಸಕನ ವಿರುದ್ಧ ದೂರು
  • ಕಾಂಗ್ರೆಸ್ ಶಾಸಕರಾದ ಅಫಕ್ ಆಲಂ ಮತ್ತು ಮುರಾರಿ ಲಾಲ್ ಗೌತಮ್ ಅವರು ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.
  • ಹಿಂದೂಸ್ತಾನಿ ಅವಾಮ್ ಮೋರ್ಚಾದಿಂದ ಶಾಸಕ ಸಂತೋಷ್ ಸುಮನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಬಿಹಾರ ಸಚಿವ ಸಂಪುಟವು ಮುಖ್ಯಮಂತ್ರಿ ಸೇರಿದಂತೆ 36 ಮಂತ್ರಿಗಳನ್ನು ಹೊಂದಬಹುದಾಗಿದೆ. ಭವಿಷ್ಯದ ಸಂಪುಟ ವಿಸ್ತರಣೆಗಾಗಿ ಕೆಲವು ಸಚಿವ ಸ್ಥಾನಗಳನ್ನು ಖಾಲಿ ಇರಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿವೆ.
  • ಈ ತಿಂಗಳ ಆರಂಭದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿಯಿಂದ ಬೇರ್ಪಟ್ಟು ಆರ್‌ಜೆಡಿ ಮತ್ತು ಇತರ ಪಕ್ಷಗಳೊಂದಿಗೆ ಸರ್ಕಾರ ರಚಿಸಿದ್ದಾರೆ.
  • ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ಅವರು ಮತ್ತು ಉಪ ಮುಖ್ಯಮಂತ್ರಿಯಾಗಿ ಆರ್‌ಜೆಡಿಯ ತೇಜಸ್ವಿ ಯಾದವ್ ಆಗಸ್ಟ್ 10 ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಬಿಜೆಪಿಯು ಮಹಾರಾಷ್ಟ್ರದ ಮಾದರಿಯನ್ನು ಪುನರಾವರ್ತಿಸಲು ಪ್ರಯತ್ನಿಸುತ್ತಿದೆ ಎಂದು ನಿತೀಶ್‌ ಕುಮಾರ್‌ ಅವರ ಪಕ್ಷವೂ ಬೆದರಿದೆ.
    .
    ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿಯನ್ನು 18 ಗಂಟೆಗಳ ಕಾಲ ಶೌಚಾಲಯದಲ್ಲಿ ಕೂಡಿಹಾಕಿದ ಶಿಕ್ಷಕ
  • 243 ಸ್ಥಾನಗಳಿರುವ ಬಿಹಾರ ವಿಧಾನಸಭೆಯಲ್ಲಿ ಮಹಾಮೈತ್ರಿಕೂಟವು 163 ರ ಒಟ್ಟು ಬಲವನ್ನು ಹೊಂದಿದೆ. ಸ್ವತಂತ್ರ ಶಾಸಕ ಸುಮಿತ್ ಕುಮಾರ್ ಸಿಂಗ್ ಅವರು ನಿತೀಶ್ ಕುಮಾರ್ ಅವರಿಗೆ ಬೆಂಬಲ ನೀಡಿದ ನಂತರ ಅದರ ಬಲವು 164 ಕ್ಕೆ ಏರಿದೆ.
  • ಹೊಸ ಸರ್ಕಾರ ಆಗಸ್ಟ್ 24 ರಂದು ಬಿಹಾರ ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸುವ ಸಾಧ್ಯತೆಯಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...