Homeಮುಖಪುಟಜಾತಿಗಣತಿ ವರದಿ ಬಿಡುಗಡೆಗೊಳಿಸಿದ ಬಿಹಾರ

ಜಾತಿಗಣತಿ ವರದಿ ಬಿಡುಗಡೆಗೊಳಿಸಿದ ಬಿಹಾರ

- Advertisement -
- Advertisement -

ಬಿಹಾರದಲ್ಲಿ ಜಾತಿಗಣತಿಯ ವರದಿಯನ್ನು ಸರಕಾರ ಬಿಡುಗಡೆಗೊಳಿಸಿದೆ. ಈ ಮೂಲಕ ದೇಶದಲ್ಲಿ ಜಾತಿ ಆಧಾರಿತ ಸಮೀಕ್ಷೆಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಬಿಹಾರ ಪಾತ್ರವಾಗಿದೆ.

ರಾಜ್ಯದಲ್ಲಿ 36%ದಷ್ಟು ಅತಿಹೆಚ್ಚು ಹಿಂದುಳಿದಿರುವ ಮತ್ತು 27% ಹಿಂದುಳಿದ ವರ್ಗದ ಜನರಿದ್ದಾರೆ. 19.7%  ಪರಿಶಿಷ್ಟ ಜಾತಿಯ ಜನ ಮತ್ತು 1.7%  ಪರಿಶಿಷ್ಟ ಪಂಗಡಗಳ ಜನರಿದ್ದಾರೆ. ಸಾಮಾನ್ಯ ವರ್ಗದ ಜನಸಂಖ್ಯೆಯು  15.5% ದಷ್ಟಿದೆ. ರಾಜ್ಯದ ಒಟ್ಟು ಜನಸಂಖ್ಯೆ 13.1 ಕೋಟಿಗೂ ಹೆಚ್ಚು ಎಂದು ಜಾತಿಗಣತಿಯಲ್ಲಿ ಬಹಿರಂಗವಾಗಿದೆ.

ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರ ಯಾದವ್ ಸಮುದಾಯವು ಅತಿಹೆಚ್ಚು ಅಂದರೆ ಒಬಿಸಿ ವರ್ಗಗಳಲ್ಲಿ 14.27 ಶೇಕಡಾ ಜನಸಂಖ್ಯೆಯನ್ನು ಹೊಂದಿದೆ. ಭೂಮಿಹಾರ್ ಜನಸಂಖ್ಯೆ ಶೇಕಡಾ 2.86 ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66 ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87 ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3 ರಷ್ಟಿದ್ದಾರೆ.

ಈ ಜಾತಿಗಣತಿಯ ವರದಿಯು ರಾಜ್ಯದಲ್ಲಿ ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಲಿದೆ. ಒಬಿಸಿಗಳಿಗೆ ಕೋಟಾಗಳನ್ನು ಹೆಚ್ಚಿಸುವ ಬೇಡಿಕೆ ಕೂಡ ಹೆಚ್ಚಾಗಳಿದೆ. ಈಗ ರಾಜ್ಯದಲ್ಲಿ ಒಬಿಸಿಗಳಿಗೆ 27% ಮೀಸಲಾತಿ ಇದೆ. 2024ರ ಲೋಕಸಭಾ ಚುನಾವಣೆಗೆ ತಿಂಗಳುಗಳ ಮೊದಲು ಬಿಡುಗಡೆಯಾದ ಈ ಅಂಕಿಅಂಶಗಳ ಪ್ರಕಾರ ಒಬಿಸಿಗಳು ರಾಜ್ಯದಲ್ಲಿ ಶೇಕಡಾ 63.1ರಷ್ಟಿದ್ದಾರೆ.

ಈ ಜಾತಿಗಣತಿ ವರದಿಯು ಬಿಹಾರದಲ್ಲಿ ಒಬಿಸಿಗಳ ಪ್ರಾಬಲ್ಯ ಮತ್ತು ಚುನಾವಣಾ ಪ್ರಭಾವವನ್ನು ಒತ್ತಿಹೇಳುತ್ತಿದೆ.

ದತ್ತಾಂಶ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗಾಂಧಿ ಜಯಂತಿಯ ದಿನದಂದು ದತ್ತಾಂಶ ಬಿಡುಗಡೆ ಬಗ್ಗೆ ಶ್ಲಾಘಿಸಿ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿದ್ದಾರೆ.

ಶೀಘ್ರದಲ್ಲೇ ಬಿಹಾರ ವಿಧಾನಸಭೆಯಲ್ಲಿ ಒಂಬತ್ತು ಪಕ್ಷಗಳ ಸಭೆಯನ್ನು ಕರೆಯಲಾಗುವುದು. ಬಿಹಾರದಲ್ಲಿನ ಜಾತಿ ಆಧಾರಿತ ಜನಗಣತಿಯ ಫಲಿತಾಂಶಗಳ ಬಗ್ಗೆ ಅವರಿಗೆ ತಿಳಿಸಲಾಗುವುದು ಎಂದು ನಿತೀಶ್ ಕುಮಾರ್ ಅವರು ಹೇಳಿದ್ದಾರೆ.

ಈ ಬಗ್ಗೆ ಲಾಲು ಪ್ರಸಾದ್ ಯಾದವ್‌ ಅವರು ಪ್ರತಿಕ್ರಿಯಿಸಿದ್ದು, ಜಾತಿಗಣತಿ ಬಿಡುಗಡೆ ಬಗ್ಗೆ ಶ್ಲಾಘಿಸಿದ್ದಾರೆ.  ಬಿಜೆಪಿಯ ಪಿತೂರಿಗಳು, ಕಾನೂನು ಅಡೆತಡೆಗಳು ಹೊರತಾಗಿಯೂ ಇಂದು ಬಿಹಾರ ಸರ್ಕಾರವು ಜಾತಿ ಆಧಾರಿತ ಸಮೀಕ್ಷೆಯನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

ಆದರೆ ಕೇಂದ್ರ ಸಚಿವ ಮತ್ತು ಸಂಸದ ಗಿರಿರಾಜ್ ಸಿಂಗ್ ಅವರು ಜಾತಿ ಆಧಾರಿತ ಸಮೀಕ್ಷೆಯ ವರದಿಯನ್ನು “ಕಣ್ಣು ಕಟ್ಟು” ಎಂದು ಟೀಕಿಸಿದ್ದಾರೆ.

ಇದನ್ನು ಓದಿ: ಫತೇಪುರ್‌ನಲ್ಲಿ ಹಿಂಸಾಚಾರ: ಒಂದೇ ಕುಟುಂಬದ ಐವರು ಸೇರಿದಂತೆ ಆರು ಮಂದಿಯ ಹತ್ಯೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...