Homeಮುಖಪುಟಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್- ಅಧಿಕೃತ ಘೋಷಣೆ ಮಾಡಿದ ಎನ್‌ಡಿಎ!

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್- ಅಧಿಕೃತ ಘೋಷಣೆ ಮಾಡಿದ ಎನ್‌ಡಿಎ!

ಈ ನಡುವೆ ಆರ್‌ಜೆಡಿ ಮುಖಂಡರಾದ ಮನೋಜ್ ಝಾ ಮಾತನಾಡಿ, “ಕೇವಲ 40 ಸ್ಥಾನ ಪಡೆದ, ಜನಾದೇಶ ಇಲ್ಲದವರು ಹೇಗೆ ಮುಖ್ಯಮಂತ್ರಿ ಆಗಲು ಸಾಧ್ಯ” ಎಂದು ಪ್ರಶ್ನೆ ಮಾಡಿದ್ದಾರೆ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ಮೈತ್ರಿಕೂಟದ ಎನ್‌ಡಿಎ ಸ್ಪಷ್ಟ ಬಹುಮತಗಳನ್ನು ಗಳಿಸುವ ಮೂಲಕ ರಾಜ್ಯದಲ್ಲಿ ಸರ್ಕಾರವನ್ನು ರಚಿಸಲು ಶಕ್ತವಾಗಿದೆ. ಇಂದು ಬಿಹಾರ ಮುಖ್ಯಮಂತ್ರಿ ಮತ್ತು ಇತರೆ ಅಂಶಗಳನ್ನು ನಿರ್ಧರಿಸಲು ಎನ್‌ಡಿಎ ಸಭೆ ಸೇರಿದೆ. ನಿತೀಶ್‌ ಕುಮಾರ್ ಅವರೇ ಮುಖ್ಯಮಂತ್ರಿ ಎಂಬುದನ್ನು ಬಿಜೆಪಿಯ ಉನ್ನತ ನಾಯಕರು ಸೇರಿದಂತೆ ಬಹುಪಾಲು ನಾಯಕರು ಖಚಿತಪಡಿಸಿದ್ದಾರೆ. ಇದೀಗ ಎನ್‌ಡಿಎ ವತಿಯಿಂದ ಮೈತ್ರಿಕೂಟದ ಎಲ್ಲಾ ಪಕ್ಷಗಳೂ ಸಭೆ ಸೇರಿ ಒಮ್ಮತ ನಿರ್ಧಾರಕ್ಕೆ ಬಂದಿದ್ದು, ನಿತೀಶ್‌ ಕುಮಾರ್ ಬಿಹಾರದ ಮುಖ್ಯಮಂತ್ರಿ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಇದರ ಕುರಿತು ಇಂದು 12.30ಕ್ಕೆ ನಿತೀಶ್‌ ಕುಮಾರ್ ಅವರ ನಿವಾಸದಲ್ಲಿ ಎಲ್ಲಾ ಮುಖಂಡರು ಸಭೆ ಸೇರಿದ್ದರು. ಈ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಮೂಲಕ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಇದ್ದ ಗೊಂದಲ ಮತ್ತು ಊಹಾಪೋಹಗಳಿಗೆ ತೆರೆ ಬಿದ್ದಿದೆ.

ಇದನ್ನೂ ಓದಿ: ಬಿಹಾರ: ಕೇವಲ 40 ಸ್ಥಾನ ಪಡೆದ ಜನಾದೇಶವಿಲ್ಲದವರು ಹೇಗೆ ಸಿಎಂ ಆಗುತ್ತಾರೆ?- RJD ಪ್ರಶ್ನೆ

ಈ ನಡುವೆ ಆರ್‌ಜೆಡಿ ಮುಖಂಡರಾದ ಮನೋಜ್ ಝಾ ಮಾತನಾಡಿ, “ಕೇವಲ 40 ಸ್ಥಾನ ಪಡೆದ, ಜನಾದೇಶ ಇಲ್ಲದವರು ಹೇಗೆ ಮುಖ್ಯಮಂತ್ರಿ ಆಗಲು ಸಾಧ್ಯ” ಎಂದು ಪ್ರಶ್ನೆ ಮಾಡಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಆರ್‌ಜೆಡಿ ಪಕ್ಷವು ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 75 ಸ್ಥಾನಗಳನ್ನು ಗೆದ್ದುಕೊಂಡಿದೆ. ನಂತರದ ಸ್ಥಾನದಲ್ಲಿ ಬಿಜೆಪಿಯು 74 ಸ್ಥಾನಗಳನ್ನು ಗೆದ್ದುಕೊಂಡಿದೆ. ನಿತೀಶ್‌ ಕುಮಾರ್ ನೇತೃತ್ವದ ಜೆಡಿಯು ಪಕ್ಷವು ಕೇವಲ 43 ಸ್ಥಾನಗಳನ್ನು ಗೆದ್ದುಕೊಂಡಿದೆ. ಆದರೆ ಎನ್‌ಡಿಎ ಮೈತ್ರಿ ಪಕ್ಷವು 125 ಸ್ಥಾನಗಳನ್ನು ಗೆದ್ದುಕೊಂಡು ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ 110 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಬಹುಮತದ ಅಂಚಿಗೆ ಬಂದು ಕೆಳಗಿಳಿದಿತ್ತು. ಇದರ ನಡುವೆ ಬಿಹಾರದಲ್ಲಿ ಎಡ ಪಕ್ಷಗಳಾದ ಸಿಪಿಐ (ಎಂ-ಎಲ್) ಬಹುತೇಕ ಮುಂಚೂಣಿಯ ಪಕ್ಷಗಳಾಗಿ ಹೊರಹೊಮ್ಮಿವೆ. ಇನ್ನು ಓವೈಸಿ ನೇತೃತ್ವದ ಪಕ್ಷವು ಸುಮಾರು 5 ಸ್ಥಾನಗಳನ್ನು ಗೆದ್ದುಕೊಂಡಿದೆ.

ಈ ನಡುವೆ ತೇಜಸ್ವಿ ಯಾದವ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮತ ಮರು ಎಣಿಕೆಗೆ ಒತ್ತಾಯಿಸಿ ಅಭಿಯಾನವನ್ನು ಆರಂಭಿಸಿದ್ದಾರೆ. ಮತ್ತೊಂದು ಕಡೆ ಈ ಬಾರಿ ನಿತೀಶ್‌ ಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.


ಇದನ್ನೂ ಓದಿ: ಉತ್ತಮ ಬೆಳೆಯಾದರೂ ಖರೀದಿ ಕೇಂದ್ರ ತೆರೆಯದ ಸರ್ಕಾರದ ವಿರುದ್ಧ ರೈತರ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...