Homeಮುಖಪುಟಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

- Advertisement -
- Advertisement -

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್ ಆಗಿದೆ. ಮುಖ್ಯಮಂತ್ರಿಗಳ ಈ ನಡೆ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ಹೊಸದಾಗಿ ನೇಮಕಗೊಂಡ ಆಯುಷ್ ವೈದ್ಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗುತ್ತಿತ್ತು. ಆಯ್ಕೆಯಾದ ವೈದ್ಯರಲ್ಲಿ ಒಬ್ಬರಾದ ನುಸ್ರತ್ ಪರ್ವೀನ್ ಅವರು ಮುಖ್ಯಮಂತ್ರಿಯಿಂದ ತಮ್ಮ ನೇಮಕಾತಿ ಪತ್ರವನ್ನು ಸ್ವೀಕರಿಸಲು ಮುಂದಾದರು.

ಪತ್ರವನ್ನು ಹಸ್ತಾಂತರಿಸಿದ ನಂತರ, ನಿತೀಶ್ ಕುಮಾರ್ ಮಹಿಳೆಯ ಹಿಜಾಬ್‌ ಕಡೆಗೆ ಸನ್ನೆ ಮಾಡಿ, ಅದರ ಬಗ್ಗೆ ಕೇಳಿದರು. ನಂತರ ಅದನ್ನು ತೆಗೆದುಹಾಕಲು ಸೂಚಿಸಿದರು. ವೈದ್ಯೆ ತಕ್ಷಣಕ್ಕೆ ಪ್ರತಿಕ್ರಿಯಿಸದಿದ್ದಾಗ, ಅವರು ಸ್ವತಃ ಹಿಜಾಬ್ ಅನ್ನು ಕೈಚಾಚಿ ತೆಗೆದಿರುವುದು ಕಂಡುಬಂದಿದೆ. ಇದರಿಂದ ಮಹಿಳೆ ಕೆಲವು ಕ್ಷಣಗಳ ಕಾಲ ಗೊಂದಲಕ್ಕೆ ಒಳಗಾದರು. ಅವರು ಅಸಮಾಧಾನಗೊಂಡಂತೆ ಕಾಣಿಸಿಕೊಂಡರು. ಕಾರ್ಯಕ್ರಮದಲ್ಲಿದ್ದ ಭಾಗವಹಿಸಿದ್ದ ಕೆಲವರು ಇದನ್ನು ಕಂಡು ನಗುತ್ತಿರುವುದು ಸೆರೆಯಾಗಿದೆ.

ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ತ್ವರಿತವಾಗಿ ಹರಡಿತು. ವಿರೋಧ ಪಕ್ಷಗಳಿಂದ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ಉಂಟುಮಾಡಿತು. ವಿಡಿಯೋ ಆನ್‌ಲೈನ್‌ನಲ್ಲಿ ಹಂಚಿಕೊಂಡ ನೆಟ್ಟಿಗರು ಮುಖ್ಯಮಂತ್ರಿಯ ನಡವಳಿಕೆಯನ್ನು ಪ್ರಶ್ನಿಸಿದರು. ಒಂದು ಪೋಸ್ಟ್‌ನಲ್ಲಿ, “ನಿತೀಶ್ ಜಿ ಅವರಿಗೆ ಏನಾಯಿತು? ಅವರ ಮಾನಸಿಕ ಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದೆಯೇ ಅಥವಾ ನಿತೀಶ್ ಬಾಬು ಈಗ 100 ಪ್ರತಿಶತ ಸಂಘಿಯಾಗಿದ್ದಾರೆಯೇ?” ಎಂದು ಬರೆದಿದ್ದಾರೆ.

ಕಾಂಗ್ರೆಸ್ ಪಕ್ಷವು ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿ, ನಿತೀಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿತು. ಈ ಘಟನೆಯನ್ನು “ಅಸಹ್ಯಕರ ಮತ್ತು ನಾಚಿಕೆಗೇಡಿನ ಕೃತ್ಯ” ಎಂದು ಕರೆದ ಪಕ್ಷವು, ಮುಖ್ಯಮಂತ್ರಿಯ ಇಂತಹ ನಡವಳಿಕೆಯು ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕುತ್ತದೆ ಎಂದು ಹೇಳಿದೆ.

“ಈ ನಾಚಿಕೆಯಿಲ್ಲದ ಕೃತ್ಯವನ್ನು ನೋಡಿ. ಮಹಿಳಾ ವೈದ್ಯೆಯೊಬ್ಬರು ತಮ್ಮ ನೇಮಕಾತಿ ಪತ್ರವನ್ನು ಸ್ವೀಕರಿಸಲು ಬಂದಾಗ, ನಿತೀಶ್ ಕುಮಾರ್ ತಮ್ಮ ಹಿಜಾಬ್ ಅನ್ನು ತೆಗೆಸಿದರು” ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

“ರಾಜ್ಯದ ಅತ್ಯುನ್ನತ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಸಾರ್ವಜನಿಕವಾಗಿ ಇಷ್ಟೊಂದು ಅವಮಾನಕರ ರೀತಿಯಲ್ಲಿ ವರ್ತಿಸಿದರೆ, ಬಿಹಾರದಲ್ಲಿ ಮಹಿಳೆಯರು ಎಷ್ಟು ಸುರಕ್ಷಿತರಾಗಿದ್ದಾರೆಂದು ಊಹಿಸಬಹುದು. ಈ ಖಂಡನೀಯ ಕೃತ್ಯಕ್ಕಾಗಿ ನಿತೀಶ್ ಕುಮಾರ್ ತಕ್ಷಣ ರಾಜೀನಾಮೆ ನೀಡಬೇಕು. ಈ ರೀತಿಯ ದುಷ್ಕೃತ್ಯ ಕ್ಷಮಿಸಲಾಗದು” ಎಂದಿದ್ದಾರೆ.

ರಾಷ್ಟ್ರೀಯ ಜನತಾ ದಳ ಸೇರಿದಂತೆ ಇತರ ವಿರೋಧ ಪಕ್ಷದ ನಾಯಕರು ಸಹ ಮುಖ್ಯಮಂತ್ರಿಯನ್ನು ಟೀಕಿಸಿದರು. ಅವರು ಮಹಿಳೆಯರನ್ನು ಅಗೌರವಿಸಿದ್ದಾರೆ, ವೈಯಕ್ತಿಕ ಮತ್ತು ಧಾರ್ಮಿಕ ಘನತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.

ಈ ಕಾರ್ಯಕ್ರಮದಲ್ಲಿ 685 ಆಯುರ್ವೇದ, 393 ಹೋಮಿಯೋಪತಿ ಮತ್ತು 205 ಯುನಾನಿ ವೈದ್ಯರು ಸೇರಿದಂತೆ 1,283 ಆಯುಷ್ ವೈದ್ಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ಅಧಿಕಾರಿಗಳ ಪ್ರಕಾರ, ವೈದ್ಯರನ್ನು ಆಯುಷ್ ವೈದ್ಯಕೀಯ ಸೇವೆಗಳು ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ನಿಯೋಜಿಸಲಾಗುವುದು. ಅಲ್ಲಿ ಅವರು ಹೊರರೋಗಿ ವಿಭಾಗ ಸೇವೆಗಳನ್ನು ಒದಗಿಸುತ್ತಾರೆ. ರಾಜ್ಯದಲ್ಲಿ ಆರೋಗ್ಯ ವಿತರಣೆಯನ್ನು ಬಲಪಡಿಸಲು ರಾಷ್ಟ್ರೀಯ ಮಕ್ಕಳ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಕೆಲಸ ಮಾಡುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...