Homeಮುಖಪುಟಬಿಹಾರ: ನನ್ನವರೇ ನನಗೆ ದ್ರೋಹ ಬಗೆದಿದ್ದಾರೆ ಎಂದ ಚಿರಾಗ್ ಪಾಸ್ವಾನ್

ಬಿಹಾರ: ನನ್ನವರೇ ನನಗೆ ದ್ರೋಹ ಬಗೆದಿದ್ದಾರೆ ಎಂದ ಚಿರಾಗ್ ಪಾಸ್ವಾನ್

- Advertisement -
- Advertisement -

ಲೋಕ್ ಜನಶಕ್ತಿ ಪಕ್ಷದ (LJP) ನಾಯಕ ಚಿರಾಗ್ ಪಾಸ್ವಾನ್ ಸೋಮವಾರ ತಮ್ಮ ತಂದೆ ರಾಮ್ ವಿಲಾಸ್ ಪಾಸ್ವಾನ್ ಜನ್ಮ ದಿನದಂದು ‘ಆಶೀರ್ವಾದ್ ಯಾತ್ರೆ’ ‌ಆರಂಭಿಸಿದ್ದಾರೆ. ಈ ವೇಳೆ ಆಶೀರ್ವಾದ್ ಯಾತ್ರೆ ಪ್ರದರ್ಶನವಲ್ಲ. ಜನರ ಆಶೀರ್ವಾದ ಪಡೆಯುವ ಗುರಿಯನ್ನು ಮಾತ್ರ ಹೊಂದಿದೆ. ನನ್ನ ಸ್ವಂತ ಜನರೇ ನನಗೆ ದ್ರೋಹ ಬಗೆದಿದ್ದಾರೆ ಎಂದು ಹೇಳಿದ್ದಾರೆ.

“ನಾನು ಆಶೀರ್ವಾದ್ ಯಾತ್ರೆಯನ್ನು ಹಾಜಿಪುರದಿಂದ ಪ್ರಾರಂಭಿಸುತ್ತಿದ್ದೇನೆ. ಏಕೆಂದರೆ ಅದು ನನ್ನ ತಂದೆಯ  ಕರ್ಮ ಭೂಮಿ. ನಾವು ಬಿಹಾರದ ಪ್ರತಿ ಜಿಲ್ಲೆಯಲ್ಲೂ ಈ ಯಾತ್ರೆಯನ್ನು ನಡೆಸುತ್ತೇವೆ. ಎಲ್ಲರ ಆಶೀರ್ವಾದವನ್ನು ಪಡೆದುಕೊಳ್ಳುವುದು ನಮ್ಮ ಏಕೈಕ ಗುರಿ. ಯಾರಿಗೂ ನನ್ನ ಸ್ಥಾನಮಾನ ಪ್ರದರ್ಶಿಸುವ ಅವಶ್ಯಕತೆ ನನಗೆ ಇಲ್ಲ. ನನ್ನ ಸ್ವಂತ ಜನರೇ ನನಗೆ ದ್ರೋಹ ಬಗೆದಿದ್ದಾರೆ” ಎಂದು ಚಿರಾಗ್ ಹೇಳಿದ್ದಾರೆ.

ಎರಡು ದಶಕಗಳ ಹಿಂದೆ ರಾಮ್ ವಿಲಾಸ್ ಪಾಸ್ವಾನ್ ಲೋಕ್ ಜನಶಕ್ತಿ ಪಕ್ಷವನ್ನು ಕಟ್ಟಿದ್ದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ರಾಮ್ ವಿಲಾಸ್ ಪಾಸ್ವಾನ್ ನಿಧನರಾದರು. ಅವರ ನಿಧನದ ನಂತರ ಪಕ್ಷದಲ್ಲಿ ಬಿರುಕು ಉಂಟಾಗಿದೆ. ಚಿರಾಗ್ ಪಾಸ್ವಾನ್ ಮತ್ತು ಅವರು ಚಿಕ್ಕಪ್ಪ ಪಶುಪತಿ ಕುಮಾರ್ ಪರಾಸ್ ನಡುವೆ ಪಕ್ಷದ ನಿಯಂತ್ರಣ ಕುರಿತು ಸಂಘರ್ಷ ಉಂಟಾಗಿದೆ. ಹೀಗಾಗಿ ಈಗ ಚಿರಾಗ್ ಪಾಸ್ವಾನ್ ಆಶೀರ್ವಾದ್ ಯಾತ್ರೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಉದ್ಯೋಗ ಕೇಳಿದ ಯುವಜನರ ಮೇಲೆ ಲಾಠಿ ಪ್ರಯೋಗಿಸಿದ ಬಿಹಾರ ಸರ್ಕಾರ

“ನಾನು ಸಿಂಹದ ಮರಿ, ಎಷ್ಟು ಜನರು ನಮ್ಮನ್ನು ತುಳಿಯಲು ಎಷ್ಟೇ ಪ್ರಯತ್ನಿಸಿದರೂ ನಾನು ಎಂದಿಗೂ ಹೆದರುವುದಿಲ್ಲ” ಎಂದು ಚಿರಾಗ್ ಯಾತ್ರೆ ಆರಂಭಿಸುವ ಮೊದಲು ಹೇಳಿದ್ದಾರೆ. ಜೊತೆಗೆ ‘ಪಾಸ್ವಾನ್’ ಎಂಬ ಪುಸ್ತಕವನ್ನೂ ಬಿಡುಗಡೆ ಮಾಡಿದ್ದಾರೆ.

ಪಕ್ಷದ ಆರು ಸಂಸದರಲ್ಲಿ ಐವರು ಪಶುಪತಿ ಕುಮಾರ್ ಪರಾಸ್ ಬೆಂಬಲವಾಗಿ ಜೂನ್ 13 ರಂದು ಬೆಂಬಲ ಪತ್ರ ನೀಡಿದ ನಂತರ ಚಿರಾಗ್ ಬದಲಿಗೆ ಪರಾಸ್ ಅವರನ್ನು ಲೋಕಸಭೆಯಲ್ಲಿ ಎಲ್‌ಜೆಪಿ ನಾಯಕರಾಗಿ ಗುರುತಿಸಲಾಗಿದೆ.

“ಬಿಜೆಪಿ ಮಧ್ಯಸ್ಥಿಕೆ ವಹಿಸಿ ಪಕ್ಷದ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಾರೆ ಎಂದು ನಾನು ನಿರೀಕ್ಷಿಸಿದ್ದೆ. ಆದರೆ, ಅವರ ಮೌನದಿಂದ ಖಂಡಿತವಾಗಿಯೂ ನೋವುಂಟಾಗಿದೆ” ಎಂದು ಚಿರಾಗ್ ಈ ಹಿಂದೆ ಹೇಳಿದ್ದರು. ಲೋಕ ಜನಶಕ್ತಿ ಪಕ್ಷದ ಬಿಕ್ಕಟ್ಟು ಪ್ರಾದೇಶಿಕ ಪಕ್ಷದ ಆಂತರಿಕ ವಿಷಯವಾಗಿದೆ ಎಂದು ಬಿಜೆಪಿ ಸಮರ್ಥಿಸಿಕೊಂಡಿದೆ.


ಇದನ್ನೂ ಓದಿ: ಬಿಜೆಪಿಯ ಮೌನದಿಂದ ನೋವಾಗುತ್ತಿದೆ: ಲೋಕ ಜನಶಕ್ತಿ ಪಕ್ಷದ ನಾಯಕ ಚಿರಾಗ್ ಪಾಸ್ವಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...