Homeಮುಖಪುಟಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು 

ಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು 

- Advertisement -
- Advertisement -

ಪಾಟ್ನಾ: ಪಾಟ್ನಾದ ಗಾಂಧಿ ಮೈದಾನದಲ್ಲಿ ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್‌ಸಿ) ಆಕಾಂಕ್ಷಿಗಳು ನಡೆಸುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಚುನಾವಣಾ ತಂತ್ರಗಾರ-ರಾಜಕಾರಣಿ ಪ್ರಶಾಂತ್ ಕಿಶೋರ್ ಮತ್ತು ಇತರರ ವಿರುದ್ಧ ಬಿಹಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಿಶೋರ್ ಮತ್ತು ಅವರ ಪಕ್ಷ ಜನ್ ಸೂರಾಜ್ ಪಾರ್ಟಿಯ ಇತರ ಸದಸ್ಯರು ಬಿಪಿಎಸ್‌ಸಿ ಆಕಾಂಕ್ಷಿಗಳನ್ನು ಪ್ರಚೋದಿಸಿ, ಅವರನ್ನು ಬೀದಿಗಿಳಿಸಿ ನಗರದ ವಿವಿಧ ಭಾಗಗಳಲ್ಲಿ ಗಲಭೆ ಸೃಷ್ಟಿಸಲು ಕಾರಣಕರ್ತರಾಗಿದ್ದಾರೆ. ಜಿಲ್ಲಾಡಳಿತ ತಮ್ಮ ಮನವಿಯನ್ನು ತಿರಸ್ಕರಿಸಿದ್ದರೂ ಗಾಂಧಿ ಮೈದಾನದ ಬಳಿ ಪ್ರತಿಭಟನೆ ನಡೆಸಿದೆ ಎಂದು ಆರೋಪಿಸಿ ಜನ್ ಸೂರಾಜ್ ಪಕ್ಷದ ಬಿಹಾರ ಮುಖ್ಯಸ್ಥರ ವಿರುದ್ಧವೂ ಪ್ರಕರಣ ದಾಖಲಾಗಿದೆ.

70ನೇ ಬಿಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯ ಮರುಪರೀಕ್ಷೆ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರನ್ನು ಭೇಟಿ ಮಾಡುವಂತೆ ಆಗ್ರಹಿಸಿ ಸಾವಿರಾರು ಆಕಾಂಕ್ಷಿಗಳು ಭಾನುವಾರ ಗಾಂಧಿ ಮೈದಾನದಲ್ಲಿ ಪ್ರತಿಭಟನೆ ಮುಂದುವರಿಸಿದ್ದರು. ಪ್ರತಿಭಟನೆಯು ಡಿಸೆಂಬರ್ 13ರಿಂದ ಪ್ರಾರಂಭವಾಗಿದೆ ಮತ್ತು ಅಂದಿನಿಂದ, ಹಲವಾರು ಪ್ರಮುಖ ರಾಜಕಾರಣಿಗಳು, ಶಿಕ್ಷಣ ತಜ್ಞರು ಇದನ್ನು ಬೆಂಬಲಿಸುತ್ತಾ ಬಂದಿದ್ದಾರೆ.

ಕಿಶೋರ್ ಅವರ ಜನ್ ಸೂರಾಜ್ ಪಾರ್ಟಿಯು ಗಾಂಧಿ ಮೈದಾನದಲ್ಲಿ ಛತ್ರ ಸಂಸದ್ (ವಿದ್ಯಾರ್ಥಿ ಸಂಸತ್ತು) ನಡೆಸುವ ಉದ್ದೇಶವನ್ನು ಜಿಲ್ಲಾಡಳಿತಕ್ಕೆ ಶನಿವಾರದಂದು ತಿಳಿಸಿತ್ತು ಎಂದು ಬಿಹಾರ ಪೊಲೀಸ್ ಹೇಳಿಕೆ ತಿಳಿಸಿದ್ದು, ಜಿಲ್ಲಾಡಳಿತ ಈ ಮನವಿಯನ್ನು ತಿರಸ್ಕರಿಸಿ ಪಕ್ಷಕ್ಕೆ ತನ್ನ ನಿರ್ಧಾರವನ್ನು ತಿಳಿಸಿತ್ತು.

ಇದರ ಹೊರತಾಗಿಯೂ, ಭಾನುವಾರ, ಪಕ್ಷವು ಗಾಂಧಿ ಪ್ರತಿಮೆ ಬಳಿ ಅನಧಿಕೃತ ಗುಂಪನ್ನು ಜಮಾಯಿಸಿ ಪ್ರತಿಭಟನೆಯನ್ನು ಜನ್ ಸೂರಾಜ್ ಪಾರ್ಟಿಯು ಪ್ರಚೋದಿಸಿತು ಮತ್ತು ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ಸೃಷ್ಟಿಸಿತು ಎಂದು ಪೊಲೀಸರು ಹೇಳಿದ್ದಾರೆ.

ಜನ್ ಸುರಾಜ್ ಪಕ್ಷದ ಅಧ್ಯಕ್ಷ ಮನೋಜ್ ಭಾರ್ತಿ, ಕೋಚಿಂಗ್ ಇನ್‌ಸ್ಟಿಟ್ಯೂಟ್ ನಿರ್ವಾಹಕರಾದ ರಹಮಾನ್ಶು ಮಿಶ್ರಾ, ನಿಖಿಲ್ ಮಣಿ ತಿವಾರಿ, ಸುಭಾಷ್ ಕುಮಾರ್ ಠಾಕೂರ್, ಶುಭಂ ಸ್ನೇಹಿಲ್; ಪ್ರಶಾಂತ್ ಕಿಶೋರ್, ಅವರೊಂದಿಗೆ ಇಬ್ಬರು ಬೌನ್ಸರ್‌ಗಳು – ಆನಂದ್ ಮಿಶ್ರಾ ಮತ್ತು ರಾಕೇಶ್ ಕುಮಾರ್ ಮಿಶ್ರಾ ಮತ್ತು ಇತರರು ಸೇರಿದಂತೆ 19ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.

ಹೆಚ್ಚುವರಿಯಾಗಿ, 600ಕ್ಕೂ ಹೆಚ್ಚು ಅಪರಿಚಿತ ಜನರ ಮೇಲೆ ಆರೋಪ ಪಟ್ಟಿ ಮಾಡಲಾಗಿದೆ. ಈ ಬೆಳವಣಿಗೆಯನ್ನು ದೃಢಪಡಿಸಿದ ಪಾಟ್ನಾದ ಜಿಲ್ಲಾ ಮ್ಯಾಜಿಸ್ಟ್ರೇಟ್, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಭಾನುವಾರ ಮುಂಜಾನೆ, ಕಿಶೋರ್ ಅವರು ಬಿಹಾರದ ಪರೀಕ್ಷೆಯಲ್ಲಿನ ಭ್ರಷ್ಟಾಚಾರವನ್ನು ಕೊನೆಗಾಣಿಸುವಂತೆ ಒತ್ತಾಯಿಸಿ ಪ್ರತಿಭಟನಾನಿರತ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದರು. ನಿತೀಶ್ ಕುಮಾರ್ ಅವರು ಖಾಸಗಿ ಭೇಟಿಗಾಗಿ ದೆಹಲಿಗೆ ಹೋಗಿದ್ದಾರೆ. ಆದರೆ ತಮ್ಮದೇ ರಾಜ್ಯದ ಯುವಕರ ಭೇಟಿಗೆ ಸಮಯವಿಲ್ಲ ಎಂದು ಟೀಕಿಸಿದ್ದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಪಾಟ್ನಾದಲ್ಲಿ ಪ್ರತಿಭಟನಾ ನಿರತ ಅಭ್ಯರ್ಥಿಗಳನ್ನುದ್ದೇಶಿಸಿ ಮಾತನಾಡಿದ ಕಿಶೋರ್, ”ಮುಖ್ಯಮಂತ್ರಿಗಳಿಗೆ ಪ್ರತಿಭಟನಾ ನಿರತ ಆಕಾಂಕ್ಷಿಗಳ ಅಹವಾಲನ್ನು ಆಲಿಸಲು ಸಮಯವಿಲ್ಲದೇ ದಿಲ್ಲಿಗೆ ತೆರಳಿದ್ದಾರೆ. ಪರೀಕ್ಷೆ ರದ್ದುಗೊಳಿಸಬೇಕೆಂಬ ಅಕಾಂಕ್ಷಿಗಳ ಬೇಡಿಕೆಯನ್ನು ಈಡೇರಿಸುವವರೆಗೆ ಪ್ರತಿಭಟನೆ ಮುಂದುವರಿಯಲಿದೆ. ಪ್ರತಿಭಟಿಸುವ ವಿದ್ಯಾರ್ಥಿಗಳ ಜೊತೆ ನಾನು ಸದಾ ಇರುತ್ತೇನೆ ಎಂದಿದ್ದಾರೆ.

ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಶಿಕ್ಷಣ ಕ್ಷೇತ್ರದ ಅಧಿಕಾರಿಗಳೊಂದಿಗೆ ವಿಸ್ತೃತ ಮಾತುಕತೆ ನಡೆಸಿದ ಕಿಶೋರ್ ಅವರು,  “ಬಿಹಾರದಲ್ಲಿ ಯಾವುದೇ ಪರೀಕ್ಷೆಯು ಭ್ರಷ್ಟಾಚಾರ ಅಥವಾ ಪೇಪರ್ ಸೋರಿಕೆ ಇಲ್ಲದೆ ನಡೆದಿಲ್ಲ. ಇದು ಕೊನೆಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಾವು ಒಂದಾಗಬೇಕು” ಎಂದು ಹೇಳಿದ್ದಾರೆ.

ಡಿಸೆಂಬರ್ ಮಧ್ಯಭಾಗದಲ್ಲಿ ಆರಂಭವಾದ ಆಂದೋಲನವು ಪೂರ್ವಭಾವಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಇತರ ಹಲವು ಅಕ್ರಮಗಳ ಆರೋಪದಿಂದ ಕಿಡಿ ಹೊತ್ತಿಸಿದೆ.

ಹಲವಾರು ಅಭ್ಯರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ತಡವಾಗಿ ನೀಡಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಕೆಲವರು ಪರೀಕ್ಷೆಯು ಪ್ರಾರಂಭವಾಗುವ ಸುಮಾರು ಒಂದು ಗಂಟೆಯ ನಂತರ ಪತ್ರಿಕೆಗಳನ್ನು ಪಡೆದಿದ್ದೇವೆ ಎಂದು ಹೇಳಿದ್ದಾರೆ. ಇನ್ನು ಕೆಲವರು ಉತ್ತರ ಪತ್ರಿಕೆಗಳು ಹರಿದಿದ್ದು, ಅವ್ಯವಹಾರದ ಭೀತಿ ಮತ್ತಷ್ಟು ಹೆಚ್ಚಿದೆ ಎಂದು ಆರೋಪಿಸಿದ್ದಾರೆ.

ಪ್ರಶಾಂತ್ ಕಿಶೋರ್ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರು, ಘರ್ಷಣೆಗೆ ಬಿಹಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಆಂದೋಲನವನ್ನು ವಿದ್ಯಾರ್ಥಿಗಳು ಪ್ರಾರಂಭಿಸಿದ್ದಾರೆ. ನಾನು ಇತ್ತೀಚೆಗೆ ಹೋಗಿದ್ದ ಗರ್ದಾನಿ ಬಾಗ್‌ನಲ್ಲಿ ಸುಮಾರು ಎರಡು ವಾರಗಳ ಕಾಲ ನಡೆದ ಧರಣಿಯು ಸರ್ಕಾರವನ್ನು ನಡುಗುವಂತೆ ಮಾಡಿದೆ ಎಂದು ಅವರು ಭಾನುವಾರ ತಡರಾತ್ರಿ ವಿಡಿಯೋ ಸಂದೇಶದಲ್ಲಿ ತೇಜಸ್ವಿ ತಿಳಿಸಿದ್ದಾರೆ.

ಆಡಳಿತದ ಎಚ್ಚರಿಕೆಯ ಹೊರತಾಗಿಯೂ ಪ್ರತಿಭಟನಾಕಾರರನ್ನು ಗಾಂಧಿ ಮೈದಾನದಲ್ಲಿ ಮೆರವಣಿಗೆ ಮಾಡಲು ದಾರಿ ತಪ್ಪಿಸಲಾಗಿದೆ ಮತ್ತು ಲಾಠಿ ಚಾರ್ಜ್ ಮತ್ತು ನೀರಿನ ಫಿರಂಗಿಗಳನ್ನು ಪ್ರಯೋಗಿಸಿದಾಗ ಪ್ರತಿಭಟನೆಯ ನೇತೃತ್ವ ವಹಿಸಿದ್ದವರು ಓಡಿಹೋಗಲು ನಿರ್ಧರಿಸಿದರು ಎಂದು ಅವರು ಆರೋಪಿಸಿದ್ದಾರೆ.

ರಾಜ್ಯಾದ್ಯಂತ 900ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಐದು ಲಕ್ಷ ಅಭ್ಯರ್ಥಿಗಳು ಡಿಸೆಂಬರ್ 13ರಂದು ನಡೆದ ಬಿಪಿಎಸ್‌ಸಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಪ್ರತಿಭಟನಾಕಾರರ ಬೇಡಿಕೆಯನ್ನು ಆರ್ ಜೆಡಿ ಬೆಂಬಲಿಸುತ್ತದೆ ಎಂದು ತೇಜಸ್ವಿ ಯಾದವ್ ಭರವಸೆ ನೀಡಿದ್ದಾರೆ.

ಆದರೆ ನೀವು ಪೊಳ್ಳು ಭರವಸೆಗಳಿಗೆ ಮಣಿಯಬಾರದು. ಜನವರಿ 4ಕ್ಕೆ ಇನ್ನೂ ಕೆಲವೇ ದಿನಗಳು ಬಾಕಿಯಿದೆ. ಸರ್ಕಾರವನ್ನು ಮಂಡಿಯೂರಿಸಲು ಸಾಕಷ್ಟು ಸಮಯವಿದೆ. ಬಿಪಿಎಸ್‌ಸಿ ಪರೀಕ್ಷೆ ಸರ್ಕಾರದ ಅಡಿಯಲ್ಲಿ ಬರುವುದಿಲ್ಲ ಎಂದು ಹೇಳುವುದು ಅಸಂಬದ್ಧ ಎಂದು ಟೀಕಿಸಿದ್ದಾರೆ.

15 ಅಡಿ ಎತ್ತರದ ವೇದಿಕೆಯಿಂದ ಬಿದ್ದ ಕಾಂಗ್ರೆಸ್‌ ಶಾಸಕಿ : ಗಂಭೀರ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...