Homeಮುಖಪುಟಬಿಹಾರ: ಬಹುಮತ ಸಾಬೀತುಪಡಿಸಲು 2 ವಾರ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್ - ಕಾರಣ?

ಬಿಹಾರ: ಬಹುಮತ ಸಾಬೀತುಪಡಿಸಲು 2 ವಾರ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್ – ಕಾರಣ?

ಸದ್ಯಕ್ಕೆ ಮಹಾಘಟಬಂಧನ್ ಸರ್ಕಾರಕ್ಕೆ 164 ಶಾಸಕರ ಬೆಂಬಲವಿದೆ. 243 ಸದಸ್ಯಬಲದ ಬಿಹಾರ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 122 ಶಾಸಕರ ಅಗತ್ಯವಿದೆ.

- Advertisement -
- Advertisement -

ಬಿಹಾರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಅಂತ್ಯಗೊಳಿಸಿ ಆರ್‌ಜೆಡಿ ಮತ್ತು ಇತರ ಪಕ್ಷಗಳ ಜೊತೆಗೂಡಿ ಸರ್ಕಾರ ರಚಿಸಿ ಮುಖ್ಯಮಂತ್ರಿಯಾಗಿರುವ ನಿತೀಶ್‌ ಕುಮಾರ್‌ರವರು ಆಗಸ್ಟ್ 24ರ ನಂತರ ಬಹುಮತ ಸಾಬೀತುಪಡಿಸುವುದಾಗಿ ಸಮಯ ಕೇಳಿದ್ದಾರೆ.

ಆಗಸ್ಟ್ 24ರಿಂದ ವಿಧಾನಸಭಾ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಅವರು 160ಕ್ಕೂ ಹೆಚ್ಚು ಶಾಸಕರ ಬೆಂಬಲವಿದ್ದರೂ ಸಹ ಬಹುಮತ ಸಾಬೀತಪಡಿಸಲು ಎರಡು ವಾರಗಳ ಸಮಯ ಕೇಳಿದ್ದಾರೆ.

ವಿಧಾನಸಭೆಯ ಸ್ಪೀಕರ್ ಈಗಲೂ ಬಿಜೆಪಿಯವರೆ ಆಗಿರುವುದರಿಂದ ಬಹುಮತ ಇದ್ದರೂ ಸಹ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ನಿತೀಶ್ ಕುಮಾರ್ ಸದ್ಯಕ್ಕೆ ವಿಶ್ವಾಸಮತ ಯಾಚಿಸಲು ಮುಂದಾಗುತ್ತಿಲ್ಲ ಎನ್ನಲಾಗುತ್ತಿದೆ. ಸ್ಪೀಕರ್ ಬದಲಾವಣೆ ನಂತರವಷ್ಟೆ ಅವರು ವಿಶ್ವಾಸಮತ ಯಾಚಿಸಲು ನಿರ್ಧರಿಸಿದ್ದಾರೆ.

ಬಿಜೆಪಿಯ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ವಿರುದ್ಧ ಮಹಾಘಟಬಂಧನ್‌ 55 ಶಾಸಕರು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದಾರೆ. ನಿಯಮಗಳ ಪ್ರಕಾರ ಗೊತ್ತುವಳಿ ಮಂಡಿಸಿದ ಎರಡು ವಾರಗಳ ನಂತರವಷ್ಟೇ ಸ್ಪೀಕರ್‌ ಅನ್ನು ಬದಲಾಯಿಸಬಹುದಾಗಿದೆ. ಹಾಗಾಗಿ ಆಗಸ್ಟ್ 24ರವರೆಗೆ ಕಾಯಲು ಸರ್ಕಾರ ಸಿದ್ದವಾಗಿದೆ.

ಸದ್ಯಕ್ಕೆ ಮಹಾಘಟಬಂಧನ್ ಸರ್ಕಾರಕ್ಕೆ 164 ಶಾಸಕರ ಬೆಂಬಲವಿದೆ. 243 ಸದಸ್ಯಬಲದ ಬಿಹಾರ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 122 ಶಾಸಕರ ಅಗತ್ಯವಿದೆ. ಆದರೂ ವಿಧಾನಸಭಾ ಅಧಿವೇಶನದ ಮೊದಲ ದಿನ ಸ್ಪೀಕರ್‌ ಅನ್ನು ಕೆಳಗಿಳಿಸಿ ಒಪ್ಪಂದದಂತೆ ಆರ್‌ಜೆಡಿ ಪಕ್ಷದ ನೂತನ ಸ್ಪೀಕರ್ ಆಯ್ಕೆಯಾದ ನಂತರ ನಿತೀಶ್ ಕುಮಾರ್ ವಿಶ್ವಾಸಮತ ಯಾಚಿಸಲಿದ್ದಾರೆ.

ನಿತೀಶ್ ಕುಮಾರ್ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಳ್ಳಲು ಹಾಲಿ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಕೂಡ ಕಾರಣರಾಗಿದ್ದರು. ಅವರು ನಿತೀಶ್ ಕುಮಾರ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಇದು ನಿತೀಶ್ ಕುಮಾರ್‌ರವರಿಗೆ ಸಿಟ್ಟು ತರಿಸಿತ್ತು. ಹಾಗಾಗಿ ಅವರಿಬ್ಬರ ನಡುವೆ ವೈಮನಸ್ಸು ಬೆಳೆದಿತ್ತು. ಈ ಹಿಂದೆ ಜೆಡಿಯು ಪಕ್ಷವು ಅಧಿವೇಶನವನ್ನು ಬಾಯ್ಕಾಟ್ ಮಾಡಿತ್ತು. ಅದೇ ಸಂದರ್ಭದಲ್ಲಿ ಅಗ್ನಿಪಥ್ ಯೋಜನೆ ಕುರಿತು ಚರ್ಚೆಗೆ ಅವಕಾಶ ನೀಡದಿರುವುದನ್ನು ವಿರೋಧಿಸಿ ಆರ್‌ಜೆಡಿ ಮತ್ತು ಕಾಂಗ್ರೆಸ್ ಪಕ್ಷಗಳು ಕೂಡ ಅಧಿವೇಶನ ಬಹಿಷ್ಕರಿಸಿದ್ದವು.

ಸ್ಪೀಕರ್ ಸಿನ್ಹಾ ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದಾಗಿದೆ. ಏಕೆಂದರೆ ಬಿಜೆಪಿ ಬಹುಮತ ಕಳೆದುಕೊಂಡಿದೆ ಎಂಬುದು ಅವರ ಅರಿವಿಗೆ ಬಂದಿದೆ. ಆದರೂ ಅವರು ಬಿಜೆಪಿ ನಾಯಕತ್ವ ಏನು ಹೇಳುತ್ತದೆ ಎಂದು ಎದುರು ನೋಡುತ್ತಿದ್ದಾರೆ. ಒಂದು ವೇಳೆ ಅವರು ರಾಜೀನಾಮೆ ನೀಡಿದರೆ ಹೊಸ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ; 2014 ರಲ್ಲಿ ಗೆದ್ದಂತೆ 2024 ಗೆಲ್ಲುತ್ತಾರೆಯೆ?: ಮೋದಿಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...