Homeಮುಖಪುಟಬಿಹಾರ ಸಿಎಂ ನಿತೀಶ್‌ ಕುಮಾರ್‌ ಮೇಲೆ ದಾಳಿ; ವ್ಯಕ್ತಿ ಸೆರೆ

ಬಿಹಾರ ಸಿಎಂ ನಿತೀಶ್‌ ಕುಮಾರ್‌ ಮೇಲೆ ದಾಳಿ; ವ್ಯಕ್ತಿ ಸೆರೆ

- Advertisement -
- Advertisement -

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸ್ವಗ್ರಾಮ ಭಕ್ತಿಯಾರ್‌ಪುರದಲ್ಲಿ ಭಾರಿ ಭದ್ರತಾ ಲೋಪ ಉಂಟಾಗಿದ್ದು, ವ್ಯಕ್ತಿಯೊಬ್ಬ ನಿತೀಶ್‌ಕುಮಾರ್‌‌ ಮೇಲೆ ದಾಳಿ ಮಾಡಿರುವ ಘಟನೆ ಭಾನುವಾರ ನಡೆದಿದೆ.

ದಾಳಿ ನಡೆಸಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವ್ಯಕ್ತಿಯನ್ನು ಬಂಧಿಸಲಾಗಿದೆ. ವ್ಯಕ್ತಿಯು ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾನೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಘಟನೆಯನ್ನು ದುರದೃಷ್ಟಕರ ಎಂದು ಕರೆದಿರುವ ರಾಜ್ಯ ಸಚಿವ ಅಶೋಕ್ ಚೌಧರಿ, “ಮುಖ್ಯಮಂತ್ರಿ ಭದ್ರತೆಯ ಉಸ್ತುವಾರಿ ವಹಿಸಿರುವವರ ಕಡೆಯಿಂದ ಲೋಪವಾಗಿದೆ. ತನಿಖೆಯಾಗಬೇಕು” ಎಂದು ಹೇಳಿದ್ದಾರೆ.

ಸ್ಥಳೀಯ ಸಫರ್ ಆಸ್ಪತ್ರೆ ಸಂಕೀರ್ಣದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಶಿಲಭದ್ರ ಯಾಜಿ ಅವರ ಪ್ರತಿಮೆಗೆ ಮುಖ್ಯಮಂತ್ರಿ ಮಾಲಾರ್ಪಣೆ ಮಾಡಲಿರುವಾಗ ದಾಳಿ ನಡೆದಿರುವುದನ್ನು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳು ತೋರಿಸಿವೆ.

ಹಿಂದಿನಿಂದ ಬಂದ ವ್ಯಕ್ತಿ, ವೇಗವಾಗಿ ವೇದಿಕೆಯ ಮೇಲೆ ಏರುತ್ತಾನೆ. ಪ್ರತಿಮೆಗೆ ಪುಷ್ಪನಮನ ಸಲ್ಲಿಸಲು ಬಾಗಿದ ನಿತೀಶ್‌ ಕುಮಾರ್ ಅವರಿಗೆ ಹಿಂದಿನಿಂದ ಹೊಡೆಯುತ್ತಾನೆ. ತಕ್ಷಣ ಆತನನ್ನು ಮುಖ್ಯಮಂತ್ರಿ ಭದ್ರತಾ ಸಿಬ್ಬಂದಿ ಎಳೆದೊಯ್ದರು.

“ಅವನನ್ನು ಹೊಡೆಯಬೇಡಿ. ಅವನು ಏನು ಹೇಳುತ್ತಿದ್ದಾನೆ ಎಂಬುದನ್ನು ಮೊದಲು ಕಂಡುಹಿಡಿಯಿರಿ” ಎಂದು ಮುಖ್ಯಮಂತ್ರಿಗಳು ತಮ್ಮ ಭದ್ರತಾ ಸಿಬ್ಬಂದಿಗೆ ಹೇಳಿದರು ಎಂದು ಮೂಲಗಳು ತಿಳಿಸಿವೆ.

ಆ ವ್ಯಕ್ತಿಯನ್ನು ಶಂಕರ್ ಸಾಹ್ ಎಂದು ಗುರುತಿಸಲಾಗಿದೆ. ಭಕ್ತಿಯಾರ್‌ಪುರದ ಅಬು ಮಹಮದ್‌ ಪುರ ನಿವಾಸಿ ಶಂಕರ್‌ ಆಭರಣ ಮಳಿಗೆ ಹೊಂದಿದ್ದಾರೆ.

ಹಲ್ಲೆ ನಡೆಸಿದ ವ್ಯಕ್ತಿ ಮಾನಸಿಕವಾಗಿ ಅಸ್ವಸ್ಥನಾಗಿದ್ದಾನೆ. ಅವರ ಕುಟುಂಬದವರು ಆತನನ್ನು ಹೆಚ್ಚಾಗಿ ಮನೆಯಲ್ಲಿಯೇ ಇರಿಸಿದ್ದರು ಎಂದು ಮೂಲಗಳು ತಿಳಿಸಿವೆ. ಕುಟುಂಬದ ಸದಸ್ಯರು ಹೊರಗಿದ್ದ ಕಾರಣ ಶಂಕರ್‌ ಮನೆಯಿಂದ ಹೊರ ಬಂದು ಈ ರೀತಿ ವರ್ತಿಸಿದ್ದಾರೆ ಎಂದು ಪಾಟ್ನಾ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ. ಭದ್ರತಾ ಲೋಪದ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿಯವರು ತಮ್ಮ ಹಳೆಯ ಲೋಕಸಭಾ ಕ್ಷೇತ್ರವಾದ ಬರ್ಹ್‌ನ ವಿವಿಧ ಭಾಗಗಳಲ್ಲಿ ಪ್ರವಾಸ ಕೈಗೊಂಡಿದ್ದರು. ನಿತೀಶ್‌ ಕುಮಾರ್ ಅವರು 1989ರಿಂದ 1999 ರವರೆಗೆ ಬಾರ್ಹ್‌ನಿಂದ ಐದು ಬಾರಿ ಆಯ್ಕೆಯಾಗಿದ್ದಾರೆ.

2020ರ ನವೆಂಬರ್‌ನಲ್ಲಿ ಬಿಹಾರದ ಮಧುಬನಿಯಲ್ಲಿ ರಾಜ್ಯ ಚುನಾವಣೆಗಳಿಗಾಗಿ ಪ್ರಚಾರ ನಡೆಸುತ್ತಿದ್ದಾಗ ನಿತೀಶ್‌ ಕುಮಾರ್ ದಾಳಿಗೊಳಗಾಗಿದ್ದರು.

ಕುಮಾರ್ ಅವರು ಹರ್ಲಖಿಯಲ್ಲಿ ನಡೆದ ರ್ಯಾಲಿಯಲ್ಲಿ ಉದ್ಯೋಗಗಳ ಕುರಿತು ಮಾತನಾಡುತ್ತಿದ್ದರು, ಜನಸಮೂಹದಿಂದ ಈರುಳ್ಳಿಯನ್ನು ಎಸೆಯಲಾಗಿತ್ತು. “ಖುಬ್ ಫೆಕೋ, ಖುಬ್ ಫೆಕೋ, ಖುಬೇ ಫೆಕೋ (ಎಸೆಯುತ್ತಲೇ ಇರು)” ಎಂದು ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ಆದರೆ ದಾಳಿಕೋರನು ಭದ್ರತಾ ಸಿಬ್ಬಂದಿಯ ಕೈಗೆ ಸಿಕ್ಕಿಬಿದ್ದಾಗ ನಿತೀಶ್‌, “ಅವನು ಹೋಗಲಿ, ಅವನತ್ತ ಗಮನ ಹರಿಸಬೇಡ” ಎಂದಿದ್ದರು.

ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ದಾಳಿಯನ್ನು ಖಂಡಿಸಿದ್ದು, ಪ್ರಜಾಪ್ರಭುತ್ವದ ಮೂಲಕ ಪ್ರತಿಭಟಿಸುವಂತೆ ಜನರಿಗೆ ಸೂಚಿಸಿದ್ದಾರೆ.


ಇದನ್ನೂ ಓದಿರಿ: ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...