Homeಮುಖಪುಟಲಲನ್ ಸಿಂಗ್ ನಿರ್ಗಮನ ಬೆನ್ನಲ್ಲೇ ಜೆಡಿಯು ಅಧ್ಯಕ್ಷರಾಗಿ ನಿತೀಶ್ ಕುಮಾರ್ ಆಯ್ಕೆ

ಲಲನ್ ಸಿಂಗ್ ನಿರ್ಗಮನ ಬೆನ್ನಲ್ಲೇ ಜೆಡಿಯು ಅಧ್ಯಕ್ಷರಾಗಿ ನಿತೀಶ್ ಕುಮಾರ್ ಆಯ್ಕೆ

- Advertisement -
- Advertisement -

ಜನತಾದಳ ಯುನೈಟೆಡ್ (ಜೆಡಿಯು) ಪಕ್ಷದ ಅಧ್ಯಕ್ಷರಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದಾರೆ. ಪಕ್ಷದ ಅಧ್ಯಕ್ಷರಾಗಿದ್ದ ಲಲನ್ ಸಿಂಗ್ ನಿರ್ಗಮನ ಬೆನ್ನಲ್ಲೇ ನಿತೀಶ್ ಕುಮಾರ್ ಅವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ದೇಶ ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿರುವಾಗ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.

ಇಂದು (ಡಿಸೆಂಬರ್ 29) ದೆಹಲಿಯಲ್ಲಿ ನಡೆದ ಜೆಡಿಯು ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಲಲನ್ ಸಿಂಗ್ ಸ್ಪರ್ಧೆಯಿಂದ ದೂರ ಸರಿದ ಬೆನ್ನಲ್ಲೇ ನಿತೀಶ್ ಕುಮಾರ್ ಆಯ್ಕೆಯಾಗಿದ್ದಾರೆ. ಈ ಮೂಲಕ ವಾರಗಳ ಕಾಲ ಮುಂದುವರಿದಿದ್ದ ಜೆಡಿಯು ಅಧ್ಯಕ್ಷರ ಆಯ್ಕೆ ಕುತೂಹಲಕ್ಕೆ ತೆರೆ ಬಿದ್ದಿದೆ.

ಲಲನ್ ಸಿಂಗ್ ಅವರು ಬಿಹಾರದಲ್ಲಿ ಜೆಡಿಯುನ ಮಿತ್ರ ಪಕ್ಷ ರಾಷ್ಟ್ರೀಯ ಜನತಾದಳ (ಆರ್‌ಜೆಡಿ)ಕ್ಕೆ ಹತ್ತಿರವಾಗುತ್ತಿದ್ದಾರೆ ಎಂಬ ವದಂತಿಗಳ ಹಿನ್ನೆಲೆ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೈ ಬಿಡಲಾಗಿದೆ ಎಂದು ಹೇಳಲಾಗ್ತಿದೆ.

ಕೆಲವೊಂದು ವರದಿಗಳು, ಜೆಡಿಯು ಲಾಲು ಪ್ರಸಾದ್ ಯಾದವ್ ಅವರ ಆರ್‌ಜೆಡಿ ಜೊತೆ ವಿಲೀನವಾಗುವ ಸಾಧ್ಯತೆ ಇದೆ ಎಂದಿದೆ. ಆರ್‌ಜೆಡಿಯ ಮುಖ್ಯಸ್ಥ, ಲಾಲು ಯಾದವ್ ಅವರ ಮಗ ತೇಜಸ್ವಿ ಯಾದವ್ ಪ್ರಸ್ತುತ ಬಿಹಾರದ ಉಪ ಮುಖ್ಯಮಂತ್ರಿಯಾಗಿದ್ದಾರೆ.

ಜೆಡಿಯು ಕಾರ್ಯಕಾರಿ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಿರ್ಗಮಿತ ಅಧ್ಯಕ್ಷ ಲಲನ್ ಸಿಂಗ್ ಪಕ್ಷದ ನಾಯಕರ ಮೇಲೆ ಅವರು ಮುನಿಸಿಕೊಂಡಿದ್ದಾರೆ ಎಂಬ ವರದಿಗಳನ್ನು ಅಲ್ಲಗಳೆದಿದ್ದಾರೆ. ನಿಮಗೆ ಪಕ್ಷದ ಮೇಲೆ ಕೋಪ ಇದೆಯಾ? ಎಂದು ಪ್ರಶ್ನಿಸಿದ್ದಕ್ಕೆ, “ನನಗ್ಯಾಕೆ ಕೋಪ, ಆ ತರಹದ ಪದವನ್ನು ನಾನು ಇದೇ ಮೊದಲ ಬಾರಿ ಕೇಳುತ್ತಿರುವುದು” ಎಂದಿದ್ದಾರೆ.

ಲಲನ್ ಸಿಂಗ್ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿರುವ ಕುರಿತು ಬಿಹಾರ ವಿಧಾನಸಭೆಯ ಪ್ರತಿಪಕ್ಷ ನಾಯಕ, ಬಿಜೆಪಿಯ ವಿಜಯ್ ಕುಮಾರ್ ಸಿನ್ಹಾ ಪ್ರತಿಕ್ರಿಯಿಸಿದ್ದು, “ಸ್ವಾಭಿಮಾನ ಇರುವ ವ್ಯಕ್ತಿ ಈ ರೀತಿಯ ವಿದಾಯವನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಪಕ್ಷ ಮತ್ತು ನಾಯಕತ್ವದಲ್ಲಿ ವಿಶ್ವಾಸವಿಲ್ಲದಿರುವಾಗ ಹುದ್ದೆಯನ್ನು ಅಲಂಕರಿಸುವುದರಲ್ಲಿ ಅರ್ಥವಿಲ್ಲ. ಮೊದಲೇ ರಾಜೀನಾಮೆ ಕೊಡಬೇಕಿತ್ತು” ಎಂದಿದ್ದಾರೆ.

ಲಲನ್ ಸಿಂಗ್ ಅವರು ಬಿಹಾರದ ಮುಂಗೇರ್‌ನಿಂದ ಸ್ಪರ್ಧಿಸಿ ಎರಡು ಬಾರಿ ಲೋಕಸಭಾ ಸಂಸದರಾಗಿದ್ದರು. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಅವರು ತಮ್ಮ ಕ್ಷೇತ್ರದ ಮೇಲೆ ಗಮನ ಹರಿಸಬೇಕಾಗಿದೆ. ಈ ಕಾರಣಕ್ಕೆ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂದು ಕೆಲವೊಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಉತ್ತರ ಪ್ರದೇಶ: ಬಿಜೆಪಿ ನಾಯಕಿ, ನಟಿ ಜಯಪ್ರದಾ ಪತ್ತೆಗೆ ವಿಶೇಷ ತಂಡ ರಚಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...