Homeಮುಖಪುಟಲಾಲು ಯಾದವ್‌ ಹಾಗೂ ರಾಹುಲ್ ಗಾಂಧಿ ಭೇಟಿ ಮಾಡಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌‌

ಲಾಲು ಯಾದವ್‌ ಹಾಗೂ ರಾಹುಲ್ ಗಾಂಧಿ ಭೇಟಿ ಮಾಡಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌‌

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಪಾಟ್ನಾದಲ್ಲಿರುವ ಅವರ ನಿವಾಸದಲ್ಲಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಮಾಜಿ ಸಿಎಂ ರಾಬ್ರಿ ದೇವಿ ಅವರ ಸಮ್ಮುಖದಲ್ಲಿ ಸೋಮವಾರ ಭೇಟಿಯಾಗಿದ್ದಾರೆ. ಇದರ ನಂತರ ಅವರು ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು 2024ರ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಮಾತುಕತೆಗಾಗಿ ಭೇಟಿ ಮಾಡಿದ್ದಾರೆ.

“ನಾನು ಲಾಲು ಯಾದವ್ ಅವರೊಂದಿಗೆ ಮಾತನಾಡಿದ್ದೇನೆ. ನಂತರ ದೆಹಲಿಗೆ ಭೇಟಿ ನೀಡಲಿದ್ದು ಅಲ್ಲಿ ರಾಷ್ಟ್ರಪತಿ ಮತ್ತು ಉಪಾ ರಾಷ್ಟ್ರಪತಿಯನ್ನು ಭೇಟಿ ಮಾಡಲಿದ್ದೇನೆ. ಇದರ ನಂತರ ನಾವು ಸಂಜೆ ರಾಹುಲ್ ಗಾಂಧಿಯನ್ನು ಭೇಟಿ ಮಾಡುತ್ತೇವೆ” ಎಂದು ನಿತೀಶ್‌ ಕುಮಾರ್ ದೆಹಲಿಗೆ ತೆರಳುವ ಮೊದಲು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನಕ್ಕಾಗಿ ಅವರು ರಾಷ್ಟ್ರ ರಾಜಧಾನಿಯಲ್ಲಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್‌‌: ‘ಬಿಜೆಪಿ ಮುಕ್ತ ಭಾರತ’ಕ್ಕೆ ಕರೆ

ಬಿಹಾರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡು ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ, ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಕೈಜೋಡಿಸಿದ ನಂತರ ನಿತೀಶ್ ಕುಮಾರ್ ಅವರು ವಿಪಕ್ಷಗಳ ನಾಯಕರನ್ನು ಇದೇ ಮೊದಲ ಬಾರಿಗೆ ಭೇಟಿಯಾಗಿದ್ದಾರೆ.

ರಾಹುಲ್ ಗಾಂಧಿ ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿತೀಶ್‌ ಕುಮಾರ್‌, ಉನ್ನತ ಹುದ್ದೆ ಬಗ್ಗೆ ಯಾವುದೇ ಆಕಾಂಕ್ಷೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ಪ್ರತಿಪಕ್ಷಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆದಿದೆ. ಈ ನಿಟ್ಟಿನಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆ ವೇಳೆಗೆ ಪ್ರತಿಪಕ್ಷಗಳನ್ನು ಒಗ್ಗೂಡಿಸಲಾಗುತ್ತಿದೆ. ನನಗೆ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಿಕೊಳ್ಳುವ ಯಾವುದೇ ಉದ್ದೇಶವಿಲ್ಲ” ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

ಈ ಭೇಟಿಗೂ ಮೊದಲು ಜೆಡಿಯು ತನ್ನ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಮತ್ತು ರಾಷ್ಟ್ರೀಯ ಮಂಡಳಿ ಸಭೆಯನ್ನು ನಡೆಸಿತ್ತು.

ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿದ ನಿತೀಶ್‌ ಕುಮಾರ್,“ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಹೋರಾಡಿದರೆ, ಬಿಜೆಪಿಯನ್ನು ಪ್ಯಾಕ್ ಮಾಡಬಹುದು ಅಥವಾ ಸುಮಾರು 50 ಸ್ಥಾನಗಳಿಗೆ ಸೀಮಿತಗೊಳಿಸಬಹುದು. ನಾವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಬಿಜೆಪಿ ಸಾಮಾಜಿಕವಾಗಿ ಮತ್ತು ಕೋಮು ಸೌಹಾರ್ದತೆಗೆ ಭಂಗ ತಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ವಿಧಾನಸಭೆಯಿಂದ ಹೊರನಡೆದ ಬಿಜೆಪಿ: ವಿಶ್ವಾಸಮತ ಗೆದ್ದ ನಿತೀಶ್ ಕುಮಾರ್

ಎನ್‌ಡಿಎ ವಿರುದ್ಧ ವಾಗ್ದಾಳಿ ನಡೆಸಿದ ನಿತೀಶ್‌ ಕುಮಾರ್,“ನಾವು ಮೊದಲು ಎನ್‌ಡಿಎ ಮೈತ್ರಿಯನ್ನು ಮುರಿದ ನಂತರ ಎಲ್ಲವೂ ಚೆನ್ನಾಗಿತ್ತು. ಆದರೆ ನಂತರ ನಾವು 2017 ರಲ್ಲಿ ಮತ್ತೆ ಅವರೊಂದಿಗೆ ಕೈಜೋಡಿಸಿ ತಪ್ಪು ಮಾಡಿದೆವು. ಇದರಿಂದಾಗಿ ಕೆಲವು ರಾಜ್ಯಗಳ ಜನರು ನಮ್ಮಿಂದ ಬೇರ್ಪಟ್ಟರು. ಆದರೆ ಈಗ ನಾವು ಮತ್ತೆ ಅವರಿಂದ ಬೇರ್ಪಟ್ಟಿದ್ದು, ಈ ಬಗ್ಗೆ ಅವರು ಒಳ್ಳೆಯ ಮಾತನಾಡಿದ್ದಾರೆ” ಎಂದು ಹೇಳಿದ್ದಾರೆ.

ಈ ಮಧ್ಯೆ ನಿತೀಶ್ ಕುಮಾರ್ ಅವರನ್ನು 2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವ ವಿವಿಧ ಪೋಸ್ಟರ್‌ಗಳು ಗುರುವಾರ ಪಾಟ್ನಾದಲ್ಲಿ ಕಂಡುಬಂದಿವೆ. ಜೆಡಿಯು ಹಾಕಿರುವ ಪೋಸ್ಟರ್‌ಗಳಲ್ಲಿ ಉತ್ತಮ ಆಡಳಿತದ ಭರವಸೆ ನೀಡಲಾಗಿವೆ.

ಇದರ ಜೊತೆಗೆ ತೇಜಸ್ವಿ ಯಾದವ್ ಕೂಡಾ 2024 ರ ಚುನಾವಣೆಯಲ್ಲಿ ಪ್ರಧಾನಿ ಹುದ್ದೆಗೆ ನಿತೀಶ್‌ ಕುಮಾರ್ ಅವರು ‘ಪ್ರಬಲ ಅಭ್ಯರ್ಥಿ’ ಆಗಿರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರದಲ್ಲಿ ಇಂದು ವಿಶ್ವಾಸಮತ ಯಾಚನೆ ಬೆನ್ನಲ್ಲೆ RJD ಹಿರಿಯ ನಾಯಕರ ಮನೆ ಮೇಲೆ CBI ದಾಳಿ

2020ರಲ್ಲಿ ಬಿಜೆಪಿ-ಜೆಡಿ(ಯು) ಮೈತ್ರಿಯಲ್ಲಿ ಚುನಾವಣೆ ಎದುರಿಸಿ ನಿತೀಶ್‌ ಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡುವುದರೊಂದಿಗೆ ಎನ್‌ಡಿಎ ಮೈತ್ರಿ ಸರ್ಕಾರ ರಚನೆಯಾಗಿತ್ತು. ಇದಾಗಿ ಎರಡು ವರ್ಷಗಳ ಅಂತರದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿಯನ್ನು ತೊರೆದು ಜೆಡಿಯು ಮತ್ತು ಕಾಂಗ್ರೆಸ್ ಪಕ್ಷಗಳ ಜೊತೆಗೆ ಮೈತ್ರಿ ಮಾಡಿಕೊಂಡು ಹೊಸ ಸರ್ಕಾರ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...