Homeಮುಖಪುಟದೇಶದ ಎಲ್ಲಾ ಪ್ರಮುಖ ವಿಪಕ್ಷಗಳ ನಾಯಕರ ಭೇಟಿಯಾದ ಬಿಹಾರ ಸಿಎಂ ನಿತೀಶ್ ಕುಮಾರ್‌‌

ದೇಶದ ಎಲ್ಲಾ ಪ್ರಮುಖ ವಿಪಕ್ಷಗಳ ನಾಯಕರ ಭೇಟಿಯಾದ ಬಿಹಾರ ಸಿಎಂ ನಿತೀಶ್ ಕುಮಾರ್‌‌

- Advertisement -
- Advertisement -

2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ. ಕಳೆದ ತಿಂಗಳು ಬಿಜೆಪಿಯೊಂದಿಗೆ ಮೈತ್ರಿಯನ್ನು ಕೊನೆಗೊಳಿಸಿದ ಜನತಾ ದಳ ಯುನೈಟೆಡ್‌ನ ನಾಯಕರೂ ಆಗಿರುವ ನಿತೀಶ್‌‌ ಸೋಮವಾರದಿಂದ ದೆಹಲಿಯಲ್ಲಿ ಭೇಟಿಯಾಗಲು ಬಯಸಿದ ನಾಯಕರ ಸುದೀರ್ಘ ಪಟ್ಟಿಯನ್ನು ಹೊಂದಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಜಾತ್ಯಾತೀತ ಜನತಾದಳದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಸಿಪಿಐ ನಾಯಕ ಡಿ.ರಾಜಾ, ಭಾರತೀಯ ರಾಷ್ಟ್ರೀಯ ಲೋಕದಳದ ಓಂ ಪ್ರಕಾಶ್ ಚೌತಾಲಾ ಮತ್ತು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರು ಈಗಾಗಲೆ ಭೇಟಿಯಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂದು ಬೆಳಿಗ್ಗೆ ಅವರು ರಾಜ್ಯದ ಮಿತ್ರ ಪಕ್ಷವಾಗಿರುವ ಸಿಪಿಐಎಂಎಲ್ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಅವರನ್ನು ಕೂಡಾ ಭೇಟಿಯಾಗಿದ್ದಾರೆ. ಇದರ ಜೊತೆಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು  ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ಅವರನ್ನು ಭೇಟಿಯಾಗಲಿದ್ದಾರೆ.

ಇದನ್ನೂ ಓದಿ: ಲಾಲು ಯಾದವ್‌ ಹಾಗೂ ರಾಹುಲ್ ಗಾಂಧಿ ಭೇಟಿ ಮಾಡಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌‌

“ನಾನು ನಾಯಕನಾಗುವುದಿಲ್ಲ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತೇನೆ. ಬಿಜೆಪಿಯು ದೇಶವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಎಲ್ಲರೂ ಒಟ್ಟಾಗಿ ಚುನಾವಣೆಗಳನ್ನು ಎದುರಿಸಿದಾಗ ಚಿತ್ರಣವು ವಿಭಿನ್ನವಾಗಿರುತ್ತದೆ. ಇದಕ್ಕಾಗಿ ನಾವು ಎಲ್ಲಾ ಜನರೊಂದಿಗೆ ಮಾತನಾಡುತ್ತಿದ್ದೇವೆ” ಎಂದು ಸಭೆಯ ನಂತರ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನಾವು ಬಿಜೆಪಿ ವಿರುದ್ಧ ಪ್ರಮುಖ ರಂಗವನ್ನು ರಚಿಸುತ್ತೇವೆ, ತೃತೀಯ ರಂಗವಲ್ಲ” ಎಂದು ನಿತೀಶ್‌‌ ಕುಮಾರ್ ಸಂಜೆ ಸುದ್ದಿಗಾರರೊಂದಿಗೆ ನಡೆಸಿದ ಸಂವಾದದ ಸಮಯದಲ್ಲಿ ಪುನರುಚ್ಚರಿಸಿದ್ದಾರೆ. ವಿರೋಧ ಪಕ್ಷದ ನಾಯಕರೊಂದಿಗಿನ ತಮ್ಮ ಮಾತುಕತೆಗಳು ಸಕಾರಾತ್ಮಕವಾಗಿರುತ್ತವೆ ಎಂದು ಘೋಷಿಸಿದ ಅವರು, 2024 ರ ಸಾರ್ವತ್ರಿಕ ಚುನಾವಣೆಯು ತುಂಬಾ ಒಳ್ಳೆಯದು’’ ಎಂದು ಹೇಳಿದ್ದಾರೆ. “ಚುನಾವಣೆಯು ಇಲ್ಲಿಯವರೆಗೆ ಏಕಪಕ್ಷೀಯ ಸ್ಪರ್ಧೆಯಾಗಿತ್ತು” ಎಂದು ಅವರು ಹೇಳಿದ್ದಾರೆ.

“ನನಗೆ ಯಾವುದೇ ವೈಯಕ್ತಿಕ ಆಯ್ಕೆ ಇಲ್ಲ. ಎಲ್ಲರನ್ನೂ ಭೇಟಿಯಾಗಬೇಕು ಎಂಬುದು ನನ್ನ ಏಕೈಕ ಆಸೆ. ನಾವು ಒಟ್ಟಾಗಿ ನಮ್ಮ ನಾಯಕನನ್ನು ಆಯ್ಕೆ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಿತೀಶ್‌ ಕುಮಾರ್‌ ಬೆಂಗಾವಲು ವಾಹನದ ಮೇಲೆ ದಾಳಿ; 13 ಜನರ ಬಂಧನ

ಸದ್ಯಕ್ಕೆ ನಿತೀಶ್‌ ಕುಮಾರ್ ಅವರ ಯೋಜನೆಯು ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟದ ಅಗತ್ಯವನ್ನು ಪ್ರತಿಪಕ್ಷಗಳ ಮೇಲೆ ಪ್ರಭಾವಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. 2019 ರ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷಗಳು ಪ್ರದರ್ಶಿಸಿದ ಒಗ್ಗಟ್ಟಿನ ಕೊರತೆಯ ದೃಷ್ಟಿಯಿಂದ ಇದು ಅತ್ಯಗತ್ಯವಾಗಿ ಎಂದು ಅವು ಉಲ್ಲೇಖಿಸಿದೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾರು ಮುಖಾಮುಖಿಯಾಗುತ್ತಾರೆ ಎಂಬ ಬಗ್ಗೆ ವಿಪಕ್ಷಗಳ ನಡುವೆ ಒಮ್ಮೆಯೂ ಒಮ್ಮತ ಮೂಡಿಲ್ಲ. ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ಅವರ ಪ್ರತಿಪಾದನೆಯ ಹೊರತಾಗಿಯೂ, ನಿತೀಶ್ ಕುಮಾರ್ ಸೇರಿದಂತೆ ಹಲವಾರು ನಾಯಕರನ್ನು ಸಂಭವನೀಯ ಮುಖಗಳಾಗಿ ನೋಡಲಾಗುತ್ತದೆ.

ನಿತೀಶ್‌ ಕುಮಾರ್ ಅವರೊಂದಿಗಿನ ಭೇಟಿಯ ನಂತರ ಸಂದರ್ಶನವೊಂದರಲ್ಲಿ ಮಾತನಾಡಿದ ಸಿಪಿಎಂನ ಸೀತಾರಾಂ ಯೆಚೂರಿ ಚುನಾವಣೆಯ ನಂತರ ಅಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: 2014 ರಲ್ಲಿ ಗೆದ್ದಂತೆ 2024 ಗೆಲ್ಲುತ್ತಾರೆಯೆ?: ಮೋದಿಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಸವಾಲು

ಕಳೆದ ಮೂರು ದಶಕಗಳಲ್ಲಿ ರೂಪುಗೊಂಡ ವಿವಿಧ ಮೈತ್ರಿಗಳನ್ನು ಸೂಚಿಸಿದ ಅವರು, ಯುಪಿಎ ಮತ್ತು ಎನ್‌ಡಿಎ ಒಕ್ಕೂಟಗಳು ಸಹ ಚುನಾವಣೆಯ ನಂತರ ರೂಪುಗೊಂಡವು ಎಂದು ಅವರು ಹೇಳಿದ್ದಾರೆ.

“ಈ ರೀತಿಯ ಮೈತ್ರಿ ಸಂಭವಿಸುತ್ತದೆ. ಆದರೆ ಮೊದಲು ಬಿಜೆಪಿಯನ್ನು ಅಧಿಕಾರದ ಹಿಡಿತದಿಂದ ಬೇರ್ಪಡಿಸಬೇಕು. ಎಲ್ಲಾ ಪಕ್ಷಗಳು ಅದನ್ನು ಮಾಡುತ್ತಿವೆ ನಂತರ ಒಟ್ಟಾಗಿ ನಾಯಕರನ್ನು ಆಯ್ಕೆ ಮಾಡುತ್ತಾರೆ” ಎಂದು ಸೀತಾರಾಮ್‌ ಯೆಚೂರಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...