Homeಮುಖಪುಟಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ರಾಜಕೀಯ ಪ್ರವೇಶ; ಊಹಾಪೋಹವೆಂದ ಜೆಡಿಯು

ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ರಾಜಕೀಯ ಪ್ರವೇಶ; ಊಹಾಪೋಹವೆಂದ ಜೆಡಿಯು

- Advertisement -
- Advertisement -

ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಸಕ್ರಿಯ ರಾಜಕೀಯಕ್ಕೆ ಸೇರುತ್ತಿದ್ದಾರೆ ಎಂಬ ವದಂತಿಗಳನ್ನು ಜೆಡಿಯು ಹಿರಿಯ ನಾಯಕ ಮತ್ತು ಪಕ್ಷದ ವಕ್ತಾರ ನೀರಜ್ ಕುಮಾರ್ ಮಂಗಳವಾರ ತಳ್ಳಿಹಾಕಿದ್ದಾರೆ. ಅವುಗಳನ್ನು ಆಧಾರರಹಿತ ಮತ್ತು ದಾರಿತಪ್ಪಿಸುವಂತದ್ದು ಎಂದು ಹೇಳಿರುವ ಅವರು, ಅಂತಹ ಸುದ್ದಿಗಳನ್ನು ನಿತೀಶ್ ಅವರ ರಾಜಕೀಯ ಪ್ರತಿಸ್ಪರ್ಧಿಗಳು ಹರಡುತ್ತಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ.

“ನಿತೀಶ್ ಅವರ ಮಗ ರಾಜಕೀಯ ಪ್ರವೇಶಿಸುವ ಬಗ್ಗೆ ರಾಜಕೀಯ ವಲಯದಲ್ಲಿ ಹರಡುತ್ತಿರುವ ವದಂತಿಗಳು ಕೇವಲ ಆಧಾರರಹಿತ ವದಂತಿಯಾಗಿದೆ. ನಿತೀಶ್ ಕುಮಾರ್ ಅಥವಾ ನಿಶಾಂತ್ ಈ ವಿಷಯದಲ್ಲಿ ಯಾವುದೇ ಆಸಕ್ತಿಯನ್ನು ವ್ಯಕ್ತಪಡಿಸಿಲ್ಲ” ಎಂದು ಅವರು ಒತ್ತಿ ಹೇಳಿದ್ದಾರೆ. ನಿತೀಶ್ ಕುಮಾರ್ ಅವರನ್ನು ಗುರಿಯಾಗಿಸಲು ಮಾಧ್ಯಮದ ಕೆಲವು ವಿಭಾಗಗಳು ನಿಯತಕಾಲಿಕವಾಗಿ ಈ ವದಂತಿಗಳನ್ನು ಹರಡುತ್ತಿವೆ ಎಂದು ಅವರು ಹೇಳಿದ್ದಾರೆ. ಬಿಹಾರ ಸಿಎಂ ನಿತೀಶ್ ಕುಮಾರ್

  ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಖ್ಯಮಂತ್ರಿಯವರ ಪ್ರಾಮಾಣಿಕತೆ, ಸರಳತೆ ಮತ್ತು ರಾಜಕೀಯ ಚಾಣಾಕ್ಷತನದ ಭಯದಿಂದ ನಿತೀಶ್ ಅವರ ವಿರೋಧಿಗಳು ಇಂತಹ ಊಹಾಪೋಹಗಳನ್ನು ಹರಡುತ್ತಿದ್ದಾರೆ ಎಂದು ನೀರಜ್ ಆರೋಪಿಸಿದ್ದಾರೆ. ಈ ನಿರಾಕರಣೆಗಳ ಹೊರತಾಗಿಯೂ, ಜೆಡಿಯು ನಾಯಕರ ಒಂದು ವಿಭಾಗವು ನಿಶಾಂತ್ ಅವರ ರಾಜಕೀಯ ಪ್ರವೇಶಕ್ಕೆ ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸಿದೆ.

“ನಿತೀಶ್ ಬಯಸಿದರೆ, ನಿಶಾಂತ್ ರಾಜಕೀಯಕ್ಕೆ ಸೇರಬಹುದು. ನನ್ನ ಮಗಳು ಶಾಂಭವಿ ಚೌಧರಿ ಕೂಡ ರಾಜಕೀಯದಲ್ಲಿದ್ದಾರೆ. ಹಾಗಾದರೆ ಅದರಲ್ಲಿ ತಪ್ಪೇನು? ನಿಶಾಂತ್ ರಾಜಕೀಯಕ್ಕೆ ಸೇರಿದರೆ ನಾನು ಸ್ವಾಗತಿಸುತ್ತೇನೆ” ಎಂದು ಬಿಹಾರ ಗ್ರಾಮೀಣ ಕಾಮಗಾರಿ ಖಾತೆ ಸಚಿವ ಮತ್ತು ಹಿರಿಯ ಜೆಡಿಯು ನಾಯಕ ಅಶೋಕ್ ಚೌಧರಿ ಸೋಮವಾರ ಹೇಳಿದ್ದಾರೆ.

ನಿತೀಶ್ ಅವರ ಹುಟ್ಟೂರು ನಳಂದ ಜಿಲ್ಲೆಯವರಾದ ಹಿರಿಯ ಜೆಡಿಯು ನಾಯಕ ಶ್ರವಣ್ ಕುಮಾರ್ ಕೂಡ ಇದೇ ರೀತಿಯ ಭಾವನೆಗಳನ್ನು ಪ್ರತಿಧ್ವನಿಸಿದ್ದಾರೆ. ಆದಾಗ್ಯೂ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಕುಟುಂಬ ಸದಸ್ಯರನ್ನು ರಾಜಕೀಯ ಸ್ಥಾನಮಾನಗಳಲ್ಲಿ ಬಡ್ತಿ ನೀಡುತ್ತಿರುವುದನ್ನು ನಿತೀಶ್ ಕುಮಾರ್ ಆಗಾಗ್ಗೆ ಟೀಕಿಸುತ್ತಿದ್ದರು.

ನಿಶಾಂತ್ ರಾಜಕೀಯದ ಬಗ್ಗೆ ಹೆಚ್ಚಾಗಿ ಪ್ರತಿಕ್ರಿಯಿಸುವುದಿಲ್ಲ. ಆದರೆ, ಇತ್ತೀಚೆಗಷ್ಟೆ ಪಾಟ್ನಾ ಜಿಲ್ಲೆಯ ಭಕ್ತಿಯಾರ್‌ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸ್ವಾತಂತ್ರ್ಯ ಹೋರಾಟಗಾರರಿಗೆ ತಮ್ಮ ತಂದೆ ಮತ್ತು ತಮ್ಮ ಪಕ್ಷ ಗೌರವ ಸಲ್ಲಿಸಿದ ಸಂದರ್ಭದಲ್ಲಿ, ನಿಶಾಂತ್ ಮತದಾರರನ್ನು ಉದ್ದೇಶಿಸಿ, “ಸಾಧ್ಯವಾದರೆ, ದಯವಿಟ್ಟು ಜೆಡಿ(ಯು) ಮತ್ತು ನನ್ನ ತಂದೆಗೆ ಮತ ಹಾಕಿ, ಅವರನ್ನು ಮರಳಿ ಕರೆತನ್ನಿ. ನನ್ನ ತಂದೆ ಬಿಹಾರಕ್ಕಾಗಿ ಉತ್ತಮ ಕೆಲಸ ಮಾಡಿದ್ದಾರೆ” ಎಂದು ಮನವಿ ಮಾಡಿದ್ದರು. ಜನವರಿ 17 ರಂದು ನೀಡಿದ್ದ ಅವರ ಹೇಳಿಕೆಗಳು ಸಂಭಾವ್ಯ ರಾಜಕೀಯ ಪ್ರವೇಶದ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿತ್ತು.

ನಿತೀಶ್ ನಿವೃತ್ತರಾದ ನಂತರ ಪಕ್ಷವು ಆಂತರಿಕ ಸಂಘರ್ಷಗಳನ್ನು ಎದುರಿಸಬಹುದು ಎಂಬ ಭಯದಿಂದ ಕೆಲವು ಪಕ್ಷದ ನಾಯಕರು ನಿಶಾಂತ್ ರಾಜಕೀಯಕ್ಕೆ ಸೇರಲು ಉತ್ಸುಕರಾಗಿದ್ದಾರೆ ಎಂದು ಜೆಡಿ(ಯು) ಮೂಲಗಳು ಬಹಿರಂಗಪಡಿಸಿವೆ. ಆದಾಗ್ಯೂ, ನಿತೀಶ್ ರಾಜಕೀಯದಲ್ಲಿ ಸಕ್ರಿಯರಾಗಿರುವವರೆಗೆ ನಿಶಾಂತ್ ಅವರ ಪ್ರವೇಶ ಅಸಂಭವ ಎಂದು ಇತರರು ನಂಬುತ್ತಾರೆ ಎಂದು TNIE ವರದಿ ಮಾಡಿದೆ.

ಇದನ್ನೂಓದಿ:ಬಾಬಾ ಸಿದ್ದೀಕಿ ಹತ್ಯೆ ತನಿಖೆ | ಬಿಲ್ಡರ್‌ಗಳು, ರಾಜಕಾರಣಿಗಳನ್ನು ಹೆಸರಿಸಿದ ಪುತ್ರ ಜೀಶನ್  

ಬಾಬಾ ಸಿದ್ದೀಕಿ ಹತ್ಯೆ ತನಿಖೆ | ಬಿಲ್ಡರ್‌ಗಳು, ರಾಜಕಾರಣಿಗಳನ್ನು ಹೆಸರಿಸಿದ ಪುತ್ರ ಜೀಶನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...