Homeಮುಖಪುಟಬಿಹಾರ: ರಾಮನವಮಿ ಮೆರವಣಿಗೆ ವೇಳೆ ಕೋಮು ಉದ್ವಿಗ್ನತೆ; 13 ಜನರಿಗೆ ಗಾಯ

ಬಿಹಾರ: ರಾಮನವಮಿ ಮೆರವಣಿಗೆ ವೇಳೆ ಕೋಮು ಉದ್ವಿಗ್ನತೆ; 13 ಜನರಿಗೆ ಗಾಯ

- Advertisement -
- Advertisement -

ಬಿಹಾರದ ನಳಂದಾ ಮತ್ತು ರೋಹ್ತಾಸ್ ಜಿಲ್ಲೆಗಳಲ್ಲಿ ರಾಮನವಮಿ ಮೆರವಣಿಗೆ ವೇಳೆ ಹಿಂದೂ-ಮುಸ್ಲಿಮರ ನಡುವೆ ಘರ್ಷಣೆ ಸಂಭವಿಸಿ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ 13 ಜನರು ಗಾಯಗೊಂಡಿದ್ದಾರೆ ಎಂದು ಶುಕ್ರವಾರ ಪಿಟಿಐ ವರದಿ ಮಾಡಿದೆ.

ನಳಂದದ ಬಿಹಾರ ಷರೀಫ್ ಪಟ್ಟಣದಲ್ಲಿ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ 20 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಮಿಶ್ರಾ ತಿಳಿಸಿದ್ದಾರೆ.

ಶುಕ್ರವಾರ ನಡೆದ ಘರ್ಷಣೆಯಲ್ಲಿ ಮೂವರಿಗೆ ಗುಂಡು ತಗುಲಿದ್ದು, 11 ಜನರು ಗಾಯಗೊಂಡಿದ್ದಾರೆ. ಹಲವು ವಾಹನಗಳು ಮತ್ತು ಅಂಗಡಿಗಳು ಸುಟ್ಟು ಕರಕಲಾಗಿವೆ. ಆ ಬಳಿಕ ಪೊಲೀಸರು ಸೆಕ್ಷನ್ 144ರ ಸೆಕ್ಷನ್‌ ಜಾರಿ ಮಾಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

”ಜನರಿಗೆ ಶಾಂತವಾಗಿರಲು ನಾವು ಮನವಿ ಮಾಡುತ್ತೇವೆ. ತೊಂದರೆ ಉಂಟುಮಾಡುವವರನ್ನು ಗುರುತಿಸಲು ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸುತ್ತಿದ್ದೇವೆ” ಎಂದು ನಳಂದಾ ಮ್ಯಾಜಿಸ್ಟ್ರೇಟ್ ಶಶಾಂಕ್ ಶುಭಂಕರ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ನಮಾಜ್ ವೇಳೆ ಮಸೀದಿ ಮುಂದೆ ಮೈಕ್‌ ಬಳಸಿ ಮೆರವಣಿಗೆ ಮಾಡಿದ ಹಿಂದುತ್ವ ಗುಂಪು: ಕಲ್ಲು ತೂರಾಟ

ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹರಡುವುದನ್ನು ತಡೆಯಲು ತೀವ್ರ ನಿಗಾ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೋಹ್ತಾಸ್‌ನ ಸಸಾರಾಮ್‌ನಲ್ಲಿ, ಗುರುವಾರ ಸಂಜೆ ರಾಮನವಮಿ ಮೆರವಣಿಗೆಯಲ್ಲಿ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಘರ್ಷಣೆ ನಡೆಯಿತು. ಮರುದಿನ ಬೆಳಗ್ಗೆ ಶುಕ್ರವಾರ ಮತ್ತೆ ಘರ್ಷಣೆ ನಡೆದಿದ್ದು, ಎರಡೂ ಸಮುದಾಯಗಳ ಸದಸ್ಯರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

”ಶಹಜಲಾಲ್ ಪೀರ್, ಸೋನಾ ಪಟ್ಟಿ, ಖಾದಿರ್ ಗಂಜ್ ಮತ್ತು ನವರತ್ನ ಪೀರ್‌ನಂತಹ ಪ್ರದೇಶಗಳಲ್ಲಿ ಹಲವಾರು ಅಂಗಡಿಗಳು ಮತ್ತು ವಾಹನಗಳನ್ನು ಸುಟ್ಟುಹಾಕಲಾಗಿದೆ. ಇದರಿಂದ ಕೋಪಗೊಂಡ ಅಲ್ಲಿಯ ಗುಂಪುಗಳು ಭಾರೀ ಕಲ್ಲು ತೂರಾಟದಲ್ಲಿ ತೊಡಗಿವೆ, ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ ಅನೇಕ ಜನರು ಗಾಯಗೊಂಡಿದ್ದಾರೆ” ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಹೇಳಿದರು.

ನಗರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದ್ದು, ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನ ಜನ ಸೇರುವುದು, ಸಭೆ ನಡೆಸುವುದಕ್ಕೆ ನಿಷೇಧ ವಿಧಿಸಲಾಗಿದೆ. ಆ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ನಮಗೆ ಸಮಾಧಾನವಾಗಿದೆ. ಪೊಲೀಸ್ ಇಲಾಖೆ ಹೆಚ್ಚು ಜಾಗರೂಕರಾಗಿರಬೇಕು ಮತ್ತು ಪೂರ್ವಭಾವಿಯಾಗಿ ಇಂತಹ ಘಟನೆಗಳು ತೀವ್ರಗೋಳ್ಳದಂತೆ ಎಚ್ಚರವಹಿಸಬೇಕು ಎಂದು ಬಿಜೆಪಿ ಶಾಸಕ ಛೇಡಿ ಪಾಸ್ವಾನ್ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಪಟ್ಟಣಕ್ಕೆ ಭೇಟಿ ನೀಡುವ ಮುನ್ನ ಸಸಾರಾಮ್‌ನಲ್ಲಿ ಈ ಹಿಂಸಾಚಾರ ಸಂಭವಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...