Homeಮುಖಪುಟಕರ್ತವ್ಯ ನಿರತ ಪೊಲೀಸ್‌ ಅಧಿಕಾರಿಯನ್ನು ಟ್ರಾಕ್ಟರ್‌ ಹರಿಸಿ ಹತ್ಯೆ

ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿಯನ್ನು ಟ್ರಾಕ್ಟರ್‌ ಹರಿಸಿ ಹತ್ಯೆ

- Advertisement -
- Advertisement -

ಮರಳು ಮಾಫಿಯಾ ಗ್ಯಾಂಗ್‌ ಪೊಲೀಸ್ ಅಧಿಕಾರಿಯನ್ನು ಟ್ರಾಕ್ಟರ್‌ ಹರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಜಮುಯಿ ಜಿಲ್ಲೆಯ ಗರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

2018ರ ಬ್ಯಾಚ್‌ನ ಸಬ್ ಇನ್ಸ್‌ಪೆಕ್ಟರ್ ಪ್ರಭಾತ್ ರಂಜನ್ ಅವರನ್ನು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರಕ್ ಹರಿಸಿ ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಮುಯಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಟ್ರ್ಯಾಕ್ಟರ್‌ನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಚಾಲಕನನ್ನು ಹಿಡಿಯಲು ವಿಶೇಷ ತಂಡವನ್ನು ರಚಿಸಲಾಗಿದೆ.

ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಗರ್ಹಿ ಪೊಲೀಸ್ ಠಾಣೆ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ. ಹಲವಾರು ಮರಳು ಮಾಫಿಯಾ ಮತ್ತು ಅಕ್ರಮ ಟ್ರ್ಯಾಕ್ಟರ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇಂದು ಬೆಳಗ್ಗೆ ಮರಳು ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ಮಾಹಿತಿ ಮೇರೆಗೆ ಎಸ್‌ಐ ಪ್ರಭಾತ್‌ ರಂಜನ್‌ ತಂಡದೊಂದಿಗೆ ದಾಳಿಗೆ ತೆರಳಿದ್ದರು. ಈ ವೇಳೆ ಅಕ್ರಮ ಮರಳು ಕೊಂಡೊಯ್ಯುತ್ತಿದ್ದ ಟ್ರ್ಯಾಕ್ಟರ್‌ ವಶಪಡಿಸಿಕೊಳ್ಳುತ್ತಿದ್ದಾಗ ಅದರ ಚಾಲಕ ಕೊಲೆ ಮಾಡುವ ಉದ್ದೇಶದಿಂದ ಪೊಲೀಸ್‌ ವಾಹನಕ್ಕೆ ಟ್ರ್ಯಾಕ್ಟರ್‌ನಿಂದ ಹಲವು ಬಾರಿ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಪ್ರಭಾತ್ ರಂಜನ್ ಅವರ ಮೇಲೆ ಟ್ರ್ಯಾಕ್ಟರ್‌ ಹರಿಸಲಾಗಿದೆ. ಗಂಭೀರವಾಗಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅವರು ಈ ವೇಳೆ ಮೃತಪಟ್ಟಿದ್ದರು. ಘಟನೆಯಲ್ಲಿ ಓರ್ವ ಗೃಹರಕ್ಷಕ ದಳದ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರು ಜಮುಯಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಟ್ರ್ಯಾಕ್ಟರ್‌ ಚಾಲಕನನ್ನು ಬಂಧಿಸಲು ವಿಶೇಷ ಪೊಲೀಸ್‌ ತಂಡವನ್ನು ರಚಿಸಲಾಗಿದೆ. ಆತ ನಾವಡಾ ಜಿಲ್ಲೆಯ ನಿವಾಸಿ ಎಂದು ಗುರುತಿಸಲಾಗಿದೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು. ಘಟನೆಯ ಹಿಂದಿರುವ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಸ್ಥಳದಿಂದ ಟ್ರಾಕ್ಟರ್ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ದಲಿತರಿಗೆ ಬಿಜೆಪಿಯಲ್ಲಿ ಅವಕಾಶ ಸಿಗುವುದಿಲ್ಲ: ಅಸಮಾಧಾನ ಹೊರಹಾಕಿದ ಬಿಜೆಪಿ ಸಂಸದ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ಮಾಡಿದ್ದಾರೆ ಎಂಬುವುದು ಸುಳ್ಳು

0
"ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದವರು ರಸ್ತೆ ಮಧ್ಯೆಯೇ ಬಹಿರಂಗವಾಗಿ ಗೋಹತ್ಯೆ ಮಾಡಿದ್ದಾರೆ" ಎಂದು ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಜೀಪ್‌ ಒಂದರ ಮುಂಭಾಗದಲ್ಲಿ ಹಸುವಿನ ಕಳೇಬರ ಕಟ್ಟಿದಂತೆ ಕಾಣುತ್ತಿದೆ. ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆಯನ್ನು ನಾವು...