Homeಮುಖಪುಟಬಿಹಾರ: ಮಗನ ಮೃತದೇಹ ನೀಡಲು ಸರ್ಕಾರಿ ಆಸ್ಪತ್ರೆಯಲ್ಲಿ 50 ಸಾವಿರಕ್ಕೆ ಬೇಡಿಕೆ, ಹಣಕ್ಕಾಗಿ ಭಿಕ್ಷೆ ಎತ್ತಿದ...

ಬಿಹಾರ: ಮಗನ ಮೃತದೇಹ ನೀಡಲು ಸರ್ಕಾರಿ ಆಸ್ಪತ್ರೆಯಲ್ಲಿ 50 ಸಾವಿರಕ್ಕೆ ಬೇಡಿಕೆ, ಹಣಕ್ಕಾಗಿ ಭಿಕ್ಷೆ ಎತ್ತಿದ ವೃದ್ಧ ದಂಪತಿ

- Advertisement -
- Advertisement -

ನಾಪತ್ತೆಯಾಗಿದ್ದ ಮಗನನ್ನು ಕಳೆದುಕೊಂಡು ನೊಂದಿದ್ದ ವೃದ್ಧ ತಂದೆ ತಾಯಿಗೆ ಆತನ ಮೃತದೇಹ ಆಸ್ಪತ್ರೆಯಲ್ಲಿದೆ ಎಂದು ತಿಳಿದು ಎದೆ ಬೀರಿಯುವಷ್ಟು ನೋವಾಗಿತ್ತು. ಆದರೆ, ಅದಿನ್ನು ಮೊದಲ ಹಂತ. ಮಗನ ಅಗಲಿಕೆಯ ನೋವಿನಲ್ಲಿದ್ದ ಅವರಿಗೆ ಆಸ್ಪತ್ರೆ ಸಿಬ್ಬಂದಿ ಮೃತದೇಹ ನೀಡಲು 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ. ಮಗನ ಮೃತದೇಹ ಪಡೆಯಲು ಈ ದಂಪತಿ ಭಿಕ್ಷೆ ಬೇಡುತ್ತಾ ಊರೂರು ಅಲೆಯುತ್ತಿರುವ ಹೃದಯ ವಿದ್ರಾವಕ ಘಟನೆ ಬಿಗಾರದ ಸಮಸ್ತಿಪುರದಲ್ಲಿ ನಡೆದಿದೆ.

ಈ ವೃದ್ಧ ದಂಪತಿ ಬಿಹಾರದ ಸಮಸ್ತಿಪುರದ ಬೀದಿಗಳಲ್ಲಿ “ತಮ್ಮ ಮಗನ ದೇಹವನ್ನು ಸರ್ಕಾರಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲು” ಹಣ ನೀಡಿ ಎಂದು ಭಿಕ್ಷೆ ಬೇಡುತ್ತಿದ್ದು, ಇವರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

“ಕೆಲವು ಸಮಯದ ಹಿಂದೆ ನನ್ನ ಮಗ ನಾಪತ್ತೆಯಾಗಿದ್ದನು, ಈಗ, ನನ್ನ ಮಗನ ಶವ ಸಮಸ್ತಿಪುರದ ಸದರ್ ಆಸ್ಪತ್ರೆಯಲ್ಲಿದೆ ಎಂದು ನಮಗೆ ಕರೆ ಬಂದಿದೆ, ನನ್ನ ಮಗನ ಮೃತದೇಹವನ್ನು ನೀಡಲು ಆಸ್ಪತ್ರೆಯ ಉದ್ಯೋಗಿ 50,000 ರೂಪಾಯಿ ಕೇಳಿದ್ದಾರೆ, ನಾವು ಬಡವರು, ಹೇಗೆ ನಾವು ಈ ಮೊತ್ತವನ್ನು ನೀಡುವುದು? ”ಎಂದು ಮೃತರ ತಂದೆ ಮಹೇಶ್ ಠಾಕೂರ್ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ದಲಿತ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೆ ಕತ್ತುಹಿಸುಕಿ ಕೊಂದ ತಂದೆ

 

ಸಾಮಾಜಿಕ ಮಾಧ್ಯಮಗಳಲ್ಲಿ ಜಿಲ್ಲಾಡಳಿತವನ್ನು ಗುರಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ ವಿಡಿಯೋ ಪೋಟೋಗಳು ವೈರಲ್ ಆದ ಮೇಲೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಸ್ತಿಪುರದ ಸಿವಿಲ್ ಸರ್ಜನ್ ಡಾ.ಎಸ್.ಕೆ.ಚೌಧರಿ, “ಪ್ರಕರಣದ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಈ ಘಟನೆಗೆ ಕಾರಣವಾಗಿರುವವರನ್ನು ಬಿಡುವುದಿಲ್ಲ. ಇದು ನಾಚಿಕೆಗೇಡಿನ ಸಂಗತಿ” ಎಂದಿದ್ದಾರೆ.

ಈ ಆಸ್ಪತ್ರೆಯಲ್ಲಿನ ಬಹುತೇಕ ಆರೋಗ್ಯ ಕಾರ್ಯಕರ್ತರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದು, ಸಮಯಕ್ಕೆ ಸರಿಯಾಗಿ ಸಂಬಳ ಸಿಗುತ್ತಿಲ್ಲ. ರೋಗಿಗಳ ಸಂಬಂಧಿಕರ ಬಳಿ ಸಿಬ್ಬಂದಿ ಹಣ ಪಡೆದಿರುವ, ಹಣಕ್ಕೆ ಬೇಡಿಕೆಯಿಟ್ಟಿರುವ ಹಲವಾರು ನಿದರ್ಶನಗಳಿವೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಡಿಎಂ ವಿನಯ್ ಕುಮಾರ್ ರೈ, ನಾ”ನು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ದಂಪತಿಗಳ ಆರೋಪಗಳು ತಪ್ಪು ಎಂದು ತಿಳಿದುಬಂದಿದೆ. ಯಾವುದೇ ಉದ್ಯೋಗಿ ತಪ್ಪಿತಸ್ಥರೆಂದು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಪಬ್‌ಜಿ ಆಡುವುದನ್ನು ತಡೆದ ತಾಯಿಯನ್ನು ಕೊಲೆ ಮಾಡಿದ ಬಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...