Homeಮುಖಪುಟಬಿಹಾರ | ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ಸಿಪಿಐ-ಎಂಎಲ್

ಬಿಹಾರ | ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ಸಿಪಿಐ-ಎಂಎಲ್

- Advertisement -
- Advertisement -

ಬಿಹಾರ ಚುನಾವಣೆಗೆ ಸಿಪಿಐ-ಎಂಎಲ್ (ಲಿಬರೇಷನ್) ‘ಬದ್ಲೋ ಬಿಹಾರ’ ರ‍್ಯಾಲಿಯನ್ನು ಆಯೋಜಿಸುವ ಮೂಲಕ ತನ್ನ ಚುನಾವಣಾ ಪ್ರಚಾರವನ್ನು ಆರಂಭಿಸಿದೆ. ಈ ವೇಳೆ ಮಾತನಾಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುವಂತೆ ಜನರನ್ನು ಕೇಳಿಕೊಂಡಿದ್ದಾರೆ. ಎನ್‌ಡಿಎ ಸರ್ಕಾರವನ್ನು

ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ದೀಪಂಕರ್ ಅವರು, ಬಿಹಾರದಲ್ಲಿಯೂ ಜಾರ್ಖಂಡ್‌ನ ಚುನಾವಣಾ ಇತಿಹಾಸವನ್ನು ಪುನರಾವರ್ತಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಇತ್ತೀಚಿನ ಸಮೀಕ್ಷೆಯ ಪ್ರಕಾರ, ಸುಮಾರು 75 ಪ್ರತಿಶತದಷ್ಟು ಜನರು ಪ್ರಸ್ತುತ ಸರ್ಕಾರವು ತಮಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಎನ್‌ಡಿಎ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಎನ್‌ಡಿಎ ಸರ್ಕಾರವನ್ನು

“ಬಿಜೆಪಿ ಮತ್ತು ಎನ್‌ಡಿಎ ಹಗಲುಗನಸು ಕಾಣಲಿ. ಮಹಾರಾಷ್ಟ್ರ ಮತ್ತು ದೆಹಲಿಯ ನಂತರ, ಬಿಹಾರದಲ್ಲಿ ಕೂಡಾ ಚುನಾವಣೆಗಳನ್ನು ಗೆಲ್ಲುತ್ತೇವೆ ಎಂದು ಅವರು ಭಾವಿಸಲಿ. ಆದರೆ, ನೆರೆಯ ಜಾರ್ಖಂಡ್‌ನಲ್ಲಿ ಬಿಜೆಪಿ ಹೀನಾಯ ಸೋಲನ್ನು ಎದುರಿಸಿತು. ಅಲ್ಲಿ ಜೆಎಂಎಂ, ಕಾಂಗ್ರೆಸ್ ಮತ್ತು ಸಿಪಿಐ-ಎಂಎಲ್ (ಲಿಬರೇಷನ್) ಒಟ್ಟಿಗೆ ಸೇರಿದವು. ಅದೇ ರೀತಿ, ಬಿಹಾರ ಕೂಡಾ ಮಾಡಲಿದೆ” ಎಂದು ಅವರು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆದ ಜಾರ್ಖಂಡ್‌ನಂತೆಯೇ ಬಿಹಾರ ಕೂಡ ಅದೇ ಮಾರ್ಗವನ್ನು ಅನುಸರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ ದೀಪಂಕರ್, “ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಕಳೆದ ವರ್ಷ ಬಿಹಾರದಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸಿದ ನಂತರ ನಾವು ಲೋಕಸಭೆಯಲ್ಲಿ ಹಲವಾರು ಸ್ಥಾನಗಳನ್ನು ಗೆದ್ದಿದ್ದೇವೆ. ಮುಂಬರುವ ಚುನಾವಣೆಯಲ್ಲಿ ಆಡಳಿತ ಪಕ್ಷಕ್ಕೆ ಸೂಕ್ತ ಉತ್ತರ ನೀಡಲು ವಿರೋಧ ಪಕ್ಷಗಳು ಸಿದ್ಧರಾಗಿರುವುದರಿಂದ ಇಂದಿನ ಒಗ್ಗಟ್ಟು ಎನ್‌ಡಿಎ ಪಕ್ಷಗಳಲ್ಲಿ ಆಘಾತದ ಅಲೆಗಳನ್ನು ಎಬ್ಬಿಸಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಪಿತೂರಿ ನಡೆಸುವುದರಲ್ಲಿ ನಂಬಿಕೆ ಇಟ್ಟಿದೆ ಎಂದು ದೀಪಂಕರ್ ಹೇಳಿದ್ದಾರೆ. ಪ್ರದೇಶದಲ್ಲಿ ಎನ್‌ಡಿಎ ಮತದಾರರನ್ನು ಒಟ್ಟುಗೂಡಿಸಲು ಕೋಮು ಗಲಭೆಯನ್ನು ಪ್ರಚೋದಿಸಲು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಇತ್ತೀಚಿನ ಸೀಮಾಂಚಲ್‌ಗೆ ನೀಡಿದ್ದ ಭೇಟಿಯನ್ನು ಅವರು ಉಲ್ಲೇಖಿಸಿದ್ದಾರೆ.

ಆದಾಗ್ಯೂ, ವಿರೋಧ ಪಕ್ಷಗಳು ಜನರ ಗಮನವನ್ನು ಬೇರೆಡೆಗೆ ತಿರುಗುವುದಿಲ್ಲ ಮತ್ತು ಬಹಳ ಹಿಂದಿನಿಂದಲೂ ಬಿಹಾರವನ್ನು ಕಾಡುತ್ತಿರುವ ನಿಜವಾದ ಸಮಸ್ಯೆಗಳ ಮೇಲೆ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸುತ್ತವೆ ಎಂದು ಅವರು ಪ್ರತಿಪಾದಿಸಿದ್ದಾರೆ. ನಿರುದ್ಯೋಗ ಮತ್ತು ವಲಸೆಗಳು ಸೇರಿದಂತೆ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಮುಖ ವಿಚಾರಗಳನ್ನು ಎತ್ತಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಸಮಸ್ಯೆಗಳು ಮತ್ತು ನೋವುಗಳು ಹಲವು ಆದರೂ, ಆದರೆ ಪರಿಹಾರವು ಒಂದೇ ಒಂದು ಇದ್ದು, ಅದು ಬಿಹಾರವನ್ನು ಬದಲಾಯಿಸುವುದಾಗಿದೆ ಎಂದು ಅವರು ಹೇಳಿದ್ದಾರೆ. “ರಾಜ್ಯ ರಾಜಧಾನಿಯ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಇಂದು ಬೃಹತ್ ಜನಸಮೂಹದೊಂದಿಗೆ ಬದಲಾವಣೆಗಾಗಿ ನಾವು ಕಹಳೆ ಮೊಳಗಿಸಿದ್ದೇವೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೋಳಿ ಸಮಯದಲ್ಲಿ ಮುಸ್ಲಿಮರ ಪ್ರವೇಶ ನಿಷೇಧಕ್ಕೆ ಹಿಂದೂ ಪುರೋಹಿತರ ಆದೇಶ

ಹೋಳಿ ಸಮಯದಲ್ಲಿ ಮುಸ್ಲಿಮರ ಪ್ರವೇಶ ನಿಷೇಧಕ್ಕೆ ಹಿಂದೂ ಪುರೋಹಿತರ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...