Homeಫ್ಯಾಕ್ಟ್‌ಚೆಕ್ಬಿಹಾರ ಚುನಾವಣೆ: CPI(ML) ಅಭ್ಯರ್ಥಿಯನ್ನು ಬಾಂಬ್ ದಾಳಿ ಆರೋಪಿಯೆಂದು ಸುಳ್ಳು ಹರಡಿದ ಬಿಜೆಪಿ!

ಬಿಹಾರ ಚುನಾವಣೆ: CPI(ML) ಅಭ್ಯರ್ಥಿಯನ್ನು ಬಾಂಬ್ ದಾಳಿ ಆರೋಪಿಯೆಂದು ಸುಳ್ಳು ಹರಡಿದ ಬಿಜೆಪಿ!

2013ರಲ್ಲಿ ಪಾಟ್ನಾದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಪಾಲ್ಗೊಂಡ ಉಗ್ರವಾದಿ ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿರುವಾಗ ಬಂಧಿಸಿದ ಪೋಲೀಸರು ಎಂದು ಬಿಜೆಪಿ ಬಿಹಾರ್ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

- Advertisement -
- Advertisement -

ನಾಮಪತ್ರ ಸಲ್ಲಿಸಲು ಬಂದ ವ್ಯಕ್ತಿಯನ್ನು ಪೋಲೀಸರು ಬಂಧಿಸಿ ಕರೆದೊಯ್ಯುತ್ತಿರುವ ಫೋಟೋದೊಂದಿಗೆ ‘ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿದ್ದ ಪಾಕಿಸ್ತಾನದ ಉಗ್ರವಾದಿಯನ್ನು ನಾಮಪತ್ರ ಸಲ್ಲಿಸುವ ಕಚೇರಿಯಲ್ಲಿಯೇ ಬಂಧಿಸಿದ NIA’ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವ್ಯಕ್ತಿಯು 2014ರಲ್ಲಿ ನರೇಂದ್ರ ಮೋದಿಯವರು  ಪಾಲ್ಗೊಂಡ ಬಹಿರಂಗ ಸಭೆಯೊಂದರಲ್ಲಿ ಬಾಂಬ್ ದಾಳಿ ಮಾಡಿದ ಭಯೊತ್ಪಾದಕರಲ್ಲಿ ಒಬ್ಬನಾಗಿದ್ದು, ಆ ಪ್ರಕರಣದಲ್ಲಿ ಜಾಮೀನು ಸಿಕ್ಕಕೂಡಲೇ ಪಾಕಿಸ್ತಾನಕ್ಕೆ ಓಡಿ ಹೋಗಿದ್ದಾನೆಂದು ಬಿಜೆಪಿ ಪಕ್ಷ ಮತ್ತು ನ್ಯೂಸ್ 18 ಹಿಂದಿ ಚಾನೆಲ್ ವರದಿ ಮಾಡಿದೆ. ಇದು ನಿಜವೆ ಪರಿಶೀಲಿಸೋಣ ಬನ್ನಿ.

2013ರಲ್ಲಿ ಪಾಟ್ನಾದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಪಾಲ್ಗೊಂಡ ಉಗ್ರವಾದಿ ಕಾಂಗ್ರೆಸ್ ಪಕ್ಷದ ಪರವಾಗಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುತ್ತಿರುವಾಗ ಬಂಧಿಸಿದ ಪೋಲೀಸರು ಎಂದು ಬಿಜೆಪಿ ಬಿಹಾರ್ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್

ಪೋಟೋದಲ್ಲಿ ಕಾಣಿಸುತ್ತಿರುವ ವ್ಯಕ್ತಿ  ಬಿಹಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಲ್ಲ. ಅವರು ಮಹಾಘಟಬಂಧನ್ ಮೈತ್ರಿಕೂಟದ ಸಿಪಿಐ-ಎಂಎಲ್ ಪಕ್ಷದ ಅಭ್ಯರ್ಥಿ ಆಫ್ತಾಬ್ ಆಲಂ ಆಗಿದ್ದಾರೆ.  ಸರ್ಕಾರಿ ಕೆಲಸದಲ್ಲಿ ಮಧ್ಯಪ್ರವೇಶ ಮಾಡಿದ ಆರೋಪದ ಮೇಲೆ ಮುಝಾಪುರ್ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಅಪ್ತಾಬ್ ಆಲಂರನ್ನು ಪೋಲೀಸರು ಬಂಧಿಸಿದರು. 2013ರಲ್ಲಿ ಪಾಟ್ನಾ ನಗರದಲ್ಲಿ ನಡೆದ ಬಾಂಬ್ ದಾಳಿಗೂ, ಆಫ್ತಾಬ್ ಆಲಂಗೂ ಯಾವುದೇ ಸಂಬಂಧವಿಲ್ಲ.

ಪೋಸ್ಟ್‌ನಲ್ಲಿ ಹಂಚಿಕೊಂಡ ಪೋಟೋಗಳನ್ನು ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ, ಇದೆ ಫೋಟೊ ‘Nav Bharat Times’ ನ್ಯೂಸ್ ವೆಬ್ ಸೈಟ್ 16 ಅಕ್ಟೋಬರ್ 2020 ರಂದು ಪ್ರಕಟಿಸಿದ ಲೇಖನ ಕಂಡುಬಂದಿದೆ. ಆ ಲೇಖನದ ಪ್ರಕಾರ, ಆ ವ್ಯಕ್ತಿಯು CPI-ML ಪಕ್ಷಕ್ಕೆ ಸೇರಿದ ಆಫ್ತಾಬ್ ಆಲಂ ಆಗಿದ್ದು, ಬಿಹಾರದ ಔರಾಯ್ ವಿಧಾನಸಭಾ ಕ್ಷೇತ್ರ ಸ್ಥಾನಕ್ಕಾಗಿ ನಾಮಪತ್ರ ಸಲ್ಲಿಸಲು ಬಂದಾಗ ಅವರನ್ನು ಪೋಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಸರ್ಕಾರಿ ಕಾರ್ಯಕಲಾಪದಲ್ಲಿ ಮಧ್ಯಪ್ರವೆಶಿಸಿದ ಕಾರಣದಿಂದ ಜಿಲ್ಲಾಧಿಕಾರಿ ಆಧೇಶದ ಮೇರೆಗೆ ಆಪ್ತಭ್ ಆಲಂರನ್ನು ಬಂಧಿಸಿದ್ದೇವೆಂದು ಪೋಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆಗಸ್ಟ್ 2020ರಲ್ಲಿ ಜರುಗಿದ ದೀಪಕ್ ರಾಯ್ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ನಾನು ಮಾಡಿದ ಶಾಂತಿಯುತ ಹೋರಾಟಗಳನ್ನು ಕೆಲವರು ರಾಜಕೀಯಗೊಳಿಸುತ್ತಿದ್ದಾರೆಂದು ಆಫ್ತಾಬ್ ಆಲಂ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದೇ ವಿಷಯವನ್ನು ಒಳಗೊಂಡಿರುವ ‘Hindustan Times’ ಸುದ್ದಿ ಸಂಸ್ಥೆ ಪ್ರಕಟಿಸಿದ ಲೇಖನವನ್ನು ಇಲ್ಲಿ ನೋಡಬಹುದು. ಈ ವಿವರಗಳ ಆಧಾರದ ಮೇಲೆ ಪೋಟೋದಲ್ಲಿನ ವ್ಯಕ್ತಿ ಕಾಂಗ್ರೆಸ್ ನಾಯಕನಲ್ಲ ಎಂದು ಖಚಿತವಾಗಿ ಹೇಳಬಹುದು. ಇನ್ನು, ಆತ ವಿಧಾನಸಭಾ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿದ  ವಿವರಗಳಲ್ಲಿಯೂ ಸಹ ಅವರ ಹೆಸರು ಮತ್ತು ಫೋಟೋವನ್ನು ಸ್ಪಷ್ಟವಾಗಿ ನೋಡಬಹುದು.

2013ರಲ್ಲಿ ಪಾಟ್ನಾ ನಗರದಲ್ಲಿ ನಡೆದ ಸರಣಿ ಬಾಂಬ್ ದಾಳಿಗಳಿಗೂ ಸಂಬಂಧಿಸಿದ ಸುದ್ದಿ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈ ದಾಳಿಗಳಿಗೆ ಸಂಬಂಧಿಸಿದಂತೆ NIA ದಾಖಲಿಸಿದ ಚಾರ್ಜ್‍ಶೀಟ್‍ನ ವರದಿ ಇಲ್ಲಿ ನೋಡಬಹುದು. ಈ ಘಟನೆಗೆ ಸಂಬಂಧಿಸಿದ ಮುಖ್ಯ ಅಪರಾಧಿಗಳ ಹೆಸರಗಳನ್ನು ತಿಳಿಸುತ್ತಾ NIA ಕೊಟ್ಟ ಪತ್ರಿಕಾ ಹೇಳಿಕೆಯಲ್ಲಿ ಆಫ್ತಬ್ ಆಲಂ ಹೆಸರು ಎಲ್ಲಿಯೂ ಪ್ರಸ್ತಾಪಿಸಿಲ್ಲ. ಇತ್ತೀಚೆಗೆ ಬಂಧನಕ್ಕೊಳಗಾದ ಆಫ್ತಬ್ ಆಲಂಗೂ ಸರಣಿ ಬಾಂಬ್ ದಾಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಈ ವಿವರಗಳ ಆಧಾರದ ಮೇಲೆ ಹೇಳಬಹುದು.

ಒಟ್ಟಿನಲ್ಲಿ ಬಿಹಾರದಲ್ಲಿ ನಾಮಪತ್ರ ಸಲ್ಲಿಸುವ ಕಚೇರಿಯಲ್ಲಿ ಬಂಧಿತನಾದ ಆಫ್ತಾಬ್ ಆಲಂಗೂ 2013ರಲ್ಲಿ ಪಾಟ್ನಾದಲ್ಲಿ ನಡೆದ ಸರಣಿ ಬಾಂಬ್ ದಾಳಿಗೂ ಸಂಬಂಧವಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...