Homeಮುಖಪುಟಬಿಹಾರದಲ್ಲಿ ಯುವಕನ ಲಾಕಪ್‌ ಡೆತ್: ಜನರ ಆಕ್ರೋಶಕ್ಕೆ ಮಹಿಳಾ ಪೇದೆ ಸಾವು, ಹಲವರಿಗೆ ಗಾಯ

ಬಿಹಾರದಲ್ಲಿ ಯುವಕನ ಲಾಕಪ್‌ ಡೆತ್: ಜನರ ಆಕ್ರೋಶಕ್ಕೆ ಮಹಿಳಾ ಪೇದೆ ಸಾವು, ಹಲವರಿಗೆ ಗಾಯ

- Advertisement -
- Advertisement -

ಬಿಹಾರದಲ್ಲಿ ಯುವಕನ ಲಾಕಪ್ ಡೆತ್ ವಿರೋಧಿಸಿ ಪ್ರತಿಭಟನೆ ನಡೆಸಿದ ಉದ್ರಿಕ್ತ ಗುಂಪಿನಿಂದಾಗಿ ಮಹಿಳಾ ಪೇದೆ ಸಾವನ್ನಪ್ಪಿದ್ದು, ಹಲವು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಜನರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ, ಗುಂಡಿನ ದಾಳಿ ನಡೆಸಿದೆ ಎನ್ನಲಾಗಿದೆ.

ಜೆಹನಾಬಾದ್ ಜಿಲ್ಲೆಯ ಪರಾಸ್ಬಿಘಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾಗ ಪೊಲೀಸ್ ಮಹಿಳಾ ಪೇದೆ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿಯಲ್ಲೇ ಮೃತ ಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಲ್ಲು ತೂರಾಟದಲ್ಲಿ ಅನೇಕ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಕಲ್ಲು ತೂರಾಟ ನಡೆಸಿದ್ದರಿಂದ ಅವರನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಪ್ರತಿಭಟನೆಯಿಂದಾಗಿ ಜೆಹಾನಾಬಾದ್-ಅರ್ವಾಲ್ ಹೆದ್ದಾರಿಯಲ್ಲಿ ಗಂಟೆಗಟ್ಟಲೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಜೆಹಾನಾಬಾದ್) ಅಶೋಕ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

ಗೋವಿಂದ್ ಮಾಂಝಿ ಎಂಬಾತ ಮದ್ಯ ವ್ಯಾಪಾರದಲ್ಲಿ ತೊಡಗಿದ್ದಕ್ಕಾಗಿ ಸ್ವಲ್ಪ ಸಮಯದ ಹಿಂದೆ ಪೊಲೀಸರು ಬಂಧಿಸಿದ್ದರು. ಬಂಧಿತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಪಕ್ಕದ ಔರಂಗಾಬಾದ್ ಜಿಲ್ಲೆಯ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂಬ ಸುದ್ದಿ ಆತನ ಗ್ರಾಮಸ್ಥರಿಗೆ ತಲುಪಿತ್ತು. ಇದರಿಂದ ಗ್ರಾಮಸ್ಥರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ.

“ಮಾಂಝಿ ಶುಕ್ರವಾರ ಜೈಲಿನಲ್ಲಿ ನಿಧನರಾದರು. ಸುದ್ದಿ ಗ್ರಾಮಸ್ಥರಿಗೆ ತಲುಪುತ್ತಿದ್ದಂತೆ, ಅವರ ಹಳ್ಳಿಯ ಜನರ ಗುಂಪು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರು ಕಲ್ಲು ತೂರಾಟ ತಡೆಯಲು ಪ್ರಯತ್ನಿಸಿದಾಗ ಹಿಂಸಾಚಾರ ಆರಂಭವಾಯಿತು” ಎಂದು ಅಶೋಕ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಆರು ವರ್ಷಗಳ ಹಿಂದೆ ನಿತೀಶ್ ಕುಮಾರ್ ಸರ್ಕಾರ ಕಠಿಣ ನಿಷೇಧ ಕಾನೂನು ತಂದಿದ್ದ ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

“ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಪರವಾನಗಿ ಪಡೆಯದ ಬಂದೂಕುಗಳಿಂದ ಗುಂಡು ಹಾರಿಸಿದ್ದಾರೆ. ಹಲವಾರು ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಈ ಸಂಬಂಧ ನಾವು ಐದು ಜನರನ್ನು ಬಂಧಿಸಿದ್ದೇವೆ” ಎಂದು ಪಾಂಡೆ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ‘ಎರಡು ವರ್ಷಗಳಲ್ಲಿ 157 ಲಾಕಪ್ ಡೆತ್’- ಆಘಾತಕಾರಿ ಮಾಹಿತಿ ನೀಡಿದ ಗುಜರಾತ್ ಸರ್ಕಾರ‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೂಡಾ ಹಗರಣ ಆರೋಪ : ಸಿಎಂ ಸಿದ್ದರಾಮಯ್ಯ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ...

0
ಆಪಾದಿತ ಮೂಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ.ಎಂ ಪಾರ್ವತಿ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಇವರ ಸಹೋದರ ಬಿ.ಎಂ ಮಲ್ಲಿಕಾರ್ಜುನಸ್ವಾಮಿ,...