Homeದಲಿತ್ ಫೈಲ್ಸ್ಕೂಲಿ ಕೇಳಿದ ದಲಿತ ಕಾರ್ಮಿಕನಿಗೆ ಹಲ್ಲೆ : ದೇಹದ ಮೇಲೆ ಉಗುಳಿ, ಮೂತ್ರ ವಿಸರ್ಜಿಸಿ ವಿಕೃತಿ

ಕೂಲಿ ಕೇಳಿದ ದಲಿತ ಕಾರ್ಮಿಕನಿಗೆ ಹಲ್ಲೆ : ದೇಹದ ಮೇಲೆ ಉಗುಳಿ, ಮೂತ್ರ ವಿಸರ್ಜಿಸಿ ವಿಕೃತಿ

- Advertisement -
- Advertisement -

ಬಾಕಿ ಕೂಲಿ ಕೇಳಿದ್ದಕ್ಕೆ ಪ್ರಬಲ ಜಾತಿಯ ಗುಂಪೊಂದು ದಲಿತ ಕಾರ್ಮಿಕನಿಗೆ ಅಮಾನುಷವಾಗಿ ಥಳಿಸಿ, ದೇಹದ ಮೇಲೆ ಉಗುಳಿ, ಮೂತ್ರ ವಿಸರ್ಜನೆ ಮಾಡಿದ ಅಮಾನವೀಯ ಘಟನೆ ಬಿಹಾರದ ಮುಝಾಫರ್‌ಪುರದಲ್ಲಿ ನಡೆದಿದೆ.

ಸಂತ್ರಸ್ತ ಮೂವರ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಮುಝಾಫರ್‌ಪುರದ ಬೋಚಹಾನ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ.

ಪ್ರಾಥಮಿಕ ತನಿಖೆಯಲ್ಲಿ ದೂರುದಾರನಿಗೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿರುವುದು ದೃಢಪಟ್ಟಿದೆ. ಆದರೆ, ದೇಹದ ಮೇಲೆ ಉಗುಳಿ, ಮೂತ್ರ ವಿಸರ್ಜಿಸಿರುವ ಬಗ್ಗೆ ಯಾವುದೇ ಪುರಾವೆಗಳು ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

“ರಮೇಶ್ ಪಟೇಲ್ ಎಂಬವರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ದಿನಗೂಲಿ ಕಾರ್ಮಿಕ ರಿಂಕು ಮಾಂಜಿಗೆ ಸಂಬಂಧಿಸಿದ ದೂರನ್ನು ನಾವು ಸ್ವೀಕರಿಸಿದ್ದೇವೆ. ಅಕ್ಟೋಬರ್ 4 ರಂದು ನಡೆದ ಘಟನೆಯ ಬಗ್ಗೆ ಬೋಚಹಾ ಪೊಲೀಸ್ ಠಾಣೆಗೆ ಅಕ್ಟೋಬರ್ 8 ರಂದು ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ರಮೇಶ್ ಪಟೇಲ್ ಎಂಬಾತ ದೂರುದಾರ ರಿಂಕು ಮಾಂಜಿಗೆ ಜಾತಿ ನಿಂದನೆ ಮಾಡಿ ದೈಹಿಕ ಹಲ್ಲೆ ನಡೆಸಿದ್ದಾರೆ ಎಂಬುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ” ಎಂದು ಮುಝಾಫರ್‌ಪುರ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ವಿದ್ಯಾ ಸಾಗರ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪೊಲೀಸ್ ದೂರಿನ ಪ್ರಕಾರ, ಕಾರ್ಮಿಕ ರಿಂಕು ಮಾಂಜಿ ತನ್ನ ಸೈಕಲ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಆರೋಪಿಗಳಾದ ರಮೇಶ್ ಪಟೇಲ್, ಅರುಣ್ ಪಟೇಲ್ ಮತ್ತು ಗೌರವ್ ಪಟೇಲ್ ಅವರನ್ನು ಅಡ್ಡಗಟ್ಟಿದ್ದಾರೆ. ಸುಖಾಸುಮ್ಮನೆ ಆತನ ಮೇಲೆ ಹಲ್ಲೆ ನಡೆಸಿ, ಉಗುಳಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೆ ನೆಲಕ್ಕೆ ಕೆಡವಿ ಆರೋಪಿ ಗೌರವ್ ಪಟೇಲ್ ರಿಂಕು ದೇಹದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ವರದಿಯಾಗಿದೆ.

ರಿಂಕು ಸಿಂಗ್ ಆರೋಪಿಗಳ ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ. ದುರ್ಗಾಪೂಜೆಯ ಕಾರಣ ಎರಡು ದಿನಗಳ ಬಾಕಿ ಸಂಬಳ ಕೇಳಿದ್ದ. ಈ ಕಾರಣಕ್ಕೆ ದೌರ್ಜನ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ದೂರು ದಾಖಲಿಸಿದಾಗಿನಿಂದ ನನಗೆ ಕೊಲೆ ಬೆದರಿಕೆಗಳು ಬರುತ್ತಿವೆ. ಮನೆಗೆ ಮರಳಲೂ ತುಂಬಾ ಭಯವಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿದ್ದರೂ ಪೊಲೀಸರು ಇನ್ನೂ ಯಾರನ್ನೂ ಬಂಧಿಸಿಲ್ಲ. ಆದರೆ, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ರಿಂಕು ಮಾಂಜಿ ಹೇಳಿಕೊಂಡಿದ್ದಾರೆ.

ರಿಂಕು ಮಾಂಜಿಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಬಂಧಿಸಲು ಹುಡುಕಾಟ ನಡೆಸುತ್ತಿದ್ದೇವೆ ಎಂದು ಬೋಚಹಾನ್ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ರಾಕೇಶ್ ಕುಮಾರ್ ಯಾದವ್ ತಿಳಿಸಿದ್ದಾರೆ.

ಇದನ್ನೂ ಓದಿ : ತಮಿಳುನಾಡು | ಸ್ಯಾಮ್‌ಸಂಗ್ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಕೆ; 10 ಕಾರ್ಮಿಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...