Homeಮುಖಪುಟಬಿಹಾರ: ದಲಿತ ಮಹಿಳೆಗೆ ಸಾರ್ವಜನಿಕವಾಗಿ ಥಳಿಸಿದ ಪೊಲೀಸ್ ಅಧಿಕಾರಿ

ಬಿಹಾರ: ದಲಿತ ಮಹಿಳೆಗೆ ಸಾರ್ವಜನಿಕವಾಗಿ ಥಳಿಸಿದ ಪೊಲೀಸ್ ಅಧಿಕಾರಿ

- Advertisement -
- Advertisement -

ಬಿಹಾರದ ಸೀತಾಮರ್ಹಿಯಲ್ಲಿ ದಲಿತ ಮಹಿಳೆಯೊಬ್ಬರನ್ನು ಸಾರ್ವಜನಿಕರ ಮುಂದೆಯೆ ಪೊಲೀಸರು ಥಳಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಮವಸ್ತ್ರದಲ್ಲಿಯೇ ಪೋಲೀಸರು ಹೊಡೆಯುತ್ತಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ.

ಪೊಲೀಸರ ವರ್ತನೆಯ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ದೌರ್ಜನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮಹಿಳೆಯನ್ನು ಥಳಿಸಿದವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಪ್ರಕರಣ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೆ ಸಮಜಾಯಿಷಿ ನೀಡಿರುವ ಪೊಲೀಸರು, ‘ಅಪಹರಣ ಪ್ರಕರಣದಲ್ಲಿ ಎರಡು ಗುಪುಗಳ ನಡುವೆ ಮಾರಾಮಾರಿ ನಡೆದಿದ್ದು, ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಯತ್ನಿಸುತ್ತಿದ್ದರು’ ಎಂದು ಹೇಳಿದ್ದಾರೆ.

ಸುರಸಂದ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಜ್‌ಕಿಶೋರ್ ಸಿಂಗ್ ಮಹಿಳೆಯನ್ನು ರಸ್ತೆಯಲ್ಲಿ ದೊಣ್ಣೆಯಿಂದ ಥಳಿಸಿದ್ದಾರೆ. ಸುರಸಂದ್ ಮಾರುಕಟ್ಟೆಯಲ್ಲಿ ನಡೆದ ಗಲಾಟೆಯಿಂದ ಕೋಪಗೊಂಡ ಪೊಲೀಸ್ ಅಧಿಕಾರಿ, ಮಹಿಳೆಯನ್ನು ಅನೇಕ ಬಾರಿ ದೊಣ್ಣೆಯಿಂದ ಥಳಿಸಿದ್ದಾರೆ.

ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಸೀತಾಮರ್ಹಿ ಪೊಲೀಸರು ಹೇಳಿದ್ದು, ರಸ್ತೆಯಲ್ಲಿ ಜಗಳವಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಬೇರ್ಪಡಿಸುವ ಉದ್ದೇಶದಿಂದ ಪೊಲೀಸರ ಥಳಿಸಿದ್ದಾರೆ ಎನ್ನಲಾಗಿದೆ.

ಬಾಲಕಿಯ ಅಪಹರಣಕ್ಕೆ ಸಂಬಂಧಿಸಿದ ಗಲಾಟೆಯಲ್ಲಿ ಘಟನೆ ನಡೆದಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್ಡಿಪಿಒ) ವಿನೋದ್ ಕುಮಾರ್ ತಿಳಿಸಿದ್ದಾರೆ.

‘ಬಾಲಕಿಯನ್ನು ರಕ್ಷಿಸಲಾಯಿತು. ಆದರೆ ಎರಡೂ ಕಡೆಯವರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಠಾಣೆ ಆವರಣದಲ್ಲಿ ತಮ್ಮತಮ್ಮಲ್ಲೇ ಜಗಳವಾಡಿದರು. ಇದರಿಂದ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದರು’ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ; ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿ ಹೂಡಿಕೆ ವಿವರಗಳನ್ನು ಕೋರಿ ಜೈಹಿಂದ್ ಚಾನೆಲ್‌ಗೆ ಸಿಬಿಐ ನೋಟಿಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...