Homeಮುಖಪುಟಬಿಹಾರ | ಮೃತದೇಹದ ಕಣ್ಣೆ ನಾಪತ್ತೆ; ಇಲಿ ಕಚ್ಚಿ ತೆಗೆದಿದೆ ಎಂದ ವೈದ್ಯರು!

ಬಿಹಾರ | ಮೃತದೇಹದ ಕಣ್ಣೆ ನಾಪತ್ತೆ; ಇಲಿ ಕಚ್ಚಿ ತೆಗೆದಿದೆ ಎಂದ ವೈದ್ಯರು!

- Advertisement -
- Advertisement -

ಗುಂಡೇಟಿಗೊಳಗಾಗಿ ಮೃತಪಟ್ಟ ವ್ಯಕ್ತಿಯ ಶವ ಸರ್ಕಾರಿ ಆಸ್ಪತ್ರೆಯಲ್ಲಿ ಇದ್ದಾಗಲೆ ಒಂದು ಕಣ್ಣು ಕಾಣೆಯಾಗಿರುವ ಘಟನೆ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಸಂಭವಿಸಿದೆ. ವ್ಯಕ್ತಿಯು ಮೃತಪಟ್ಟ ಕೆಲವೆ ಗಂಟೆಗಳಲ್ಲಿ ಇದು ನಡೆದಿದ್ದು, ಮೃತ ಶರೀರದಿಂದ ಇಲಿಗಳು ಕಚ್ಚಿ ತೆಗೆದಿದೆ ಎಂದು ವೈದ್ಯರು ದೂಷಿಸಿದ್ದಾಗಿ ಹೇಳಿದ್ದು, ಕುಟುಂಬ ಸದಸ್ಯರು ವೈದ್ಯರ ನಿರ್ಲಕ್ಷ್ಯ ಎಂದು ಹೇಳಿದ್ದಾರೆ. ಬಿಹಾರ

ನವೆಂಬರ್ 15 ರಂದು ಅಪರಿಚಿತ ದುಷ್ಕರ್ಮಿಗಳಿಂದ ಗುಂಡೇಟಿಗೊಳಗಾಗಿ ಪಾಟ್ನಾದ ನಳಂದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (NMCH) ದಾಖಲಾಗಿದ್ದ ಫಂತುಷ್ ಕುಮಾರ್ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದರು. ರಾತ್ರಿ ಮರಣೋತ್ತರ ಪರೀಕ್ಷೆ ನಡೆಸಲು ಸಾಧ್ಯವಾಗದ ಕಾರಣ ಅವರ ಶವವನ್ನು ಐಸಿಯು ಬೆಡ್ ಮೇಲೆ ಇಡಲಾಗಿತ್ತು. ಶನಿವಾರ ಬೆಳಗ್ಗೆ ಶವ ಪರೀಕ್ಷೆ ನಡೆಸಲಾಗಿತ್ತು. ಬಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದರೆ ಮೃತದೇಹವನ್ನು ಶವಾಗಾರದಿಂದ ತರುತ್ತಿದ್ದಾಗ ಎಡಗಣ್ಣು ಕಾಣೆಯಾಗಿದ್ದು, ಶವದ ಪಕ್ಕದಲ್ಲಿ ಸ್ಟ್ರೆಚರ್ ಮೇಲೆ ಸರ್ಜಿಕಲ್ ಬ್ಲೇಡ್ ಬಿದ್ದಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ವೈದ್ಯರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಕುಟುಂಬಿಕರು ಆರೋಪಿಸಿದ್ದು, ಕೆಲವು ವೈದ್ಯರು ಇಲಿಗಳು ಕಣ್ಣನ್ನು ಕಚ್ಚಿರಬಹುದು ಎಂದು ಶಂಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಎನ್‌ಎಂಸಿಎಚ್ ವೈದ್ಯಕೀಯ ಅಧೀಕ್ಷಕ ಬಿನೋದ್ ಕುಮಾರ್ ಸಿಂಗ್, ಈ ಬಗ್ಗೆ ತನಿಖೆ ನಡೆಸಲು ವೈದ್ಯಕೀಯ ತಂಡವನ್ನು ರಚಿಸಲಾಗಿದೆ, ಇದು ಗಂಭೀರ ಸಮಸ್ಯೆಯಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

“ವೈದ್ಯರ ಗುಂಪು ಇಲಿಗಳು ಕಣ್ಣನ್ನು ಕಚ್ಚಿರಬಹುದು ಎಂದು ಶಂಕಿಸಲಾಗಿದೆ. ಘಟನೆಗೆ ಸಂಬಂಧಿಸಿದ ಎಲ್ಲಾ ಆಯಾಮಗಳನ್ನು ತನಿಖೆ ಮಾಡಲಾಗುತ್ತಿದೆ. ನಾವು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ” ಎಂದು ಅವರು ಹೇಳಿದರು.

“ಕಣ್ಣು ಹೇಗೆ ಹೋಗಿದೆ ಎಂಬುದು ಶವಪರೀಕ್ಷೆ ವರದಿ ಬಂದ ನಂತರವಷ್ಟೇ ತಿಳಿಯಬಹುದು. ಈ ಬಗ್ಗೆ ಆಸ್ಪತ್ರೆ ಆಡಳಿತವು ಅಲಂಗಂಜ್ ಪೊಲೀಸ್ ಠಾಣೆಗೆ ಔಪಚಾರಿಕ ದೂರು ಸಲ್ಲಿಸಿದೆ” ಎಂದು ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

ಭಾನುವಾರ ಪಿಟಿಐ ಜೊತೆ ಮಾತನಾಡಿದ ಅಲಂಗಂಜ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ರಾಜೀವ್ ಕುಮಾರ್, “ಆಸ್ಪತ್ರೆ ಆಡಳಿತ ಮಂಡಳಿ ನೀಡಿದ ಔಪಚಾರಿಕ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ನಾವು ಆಸ್ಪತ್ರೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದೇವೆ. ಜೊತೆಗೆ, ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರಿಂದ ಸ್ಪಷ್ಟೀಕರಣವನ್ನು ಕೋರಿದ್ದೇವೆ. ನಾವು ಮೃತರ ಕುಟುಂಬ ಸದಸ್ಯರನ್ನು ಮತ್ತು ಇತರ ಆಸ್ಪತ್ರೆಯ ಸಿಬ್ಬಂದಿಯನ್ನು ವಿಚಾರಣೆ ನಡೆಸುತ್ತೇವೆ” ಎಂದು ಹೇಳಿದ್ದಾರೆ. ಮೃತರ ಕುಟುಂಬಸ್ಥರು ಇದುವರೆಗೆ ಯಾವುದೇ ದೂರು ದಾಖಲಿಸಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಚುನಾವಣೆ ಹೊತ್ತಿನಲ್ಲಿ ‘ಎಎಪಿ’ಗೆ ಭಾರೀ ಹಿನ್ನಡೆ; ಪಕ್ಷ ತೊರೆದ ದೆಹಲಿ ಸಚಿವ ಕೈಲಾಶ್ ಗಹ್ಲೋಟ್

ಚುನಾವಣೆ ಹೊತ್ತಿನಲ್ಲಿ ‘ಎಎಪಿ’ಗೆ ಭಾರೀ ಹಿನ್ನಡೆ; ಪಕ್ಷ ತೊರೆದ ದೆಹಲಿ ಸಚಿವ ಕೈಲಾಶ್ ಗಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...