Homeಮುಖಪುಟಮೂರೇ ದಿನದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಹಾರದ ಶಿಕ್ಷಣ ಸಚಿವ!

ಮೂರೇ ದಿನದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಹಾರದ ಶಿಕ್ಷಣ ಸಚಿವ!

ಇಂದು ಕೂಡ ಧ್ವಜಾರೋಹಣ ಸಮಾರಂಭದಲ್ಲಿ ರಾಷ್ಟ್ರಗೀತೆಯ ಸಾಲುಗಳನ್ನು ಹೇಳಲು ಹೆಣಗಾಡುತ್ತಿದ್ದ  ಮೇವಲಾಲ್ ಚೌಧರಿ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

- Advertisement -
- Advertisement -

ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಬಿಹಾರದ ಹೊಸ ಶಿಕ್ಷಣ ಸಚಿವ ಮೇವಲಾಲ್ ಚೌಧರಿ ಅಧಿಕಾರ ವಹಿಸಿಕೊಂಡ ಕೆಲವೇ ಮೂರೇ ದಿನಗಳಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸೋಮವಾರ ನಡೆದ ಪ್ರಮಾಣವಚನ ಸಮಾರಂಭದ ನಂತರ, ಪ್ರತಿಪಕ್ಷ ರಾಷ್ಟ್ರೀಯ ಜನತಾ ದಳದಿಂದ ತೀವ್ರ ಟೀಕೆಗೆ ಒಳಗಾಗಿದ್ದರು. 2017 ರಲ್ಲಿ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಕೆದಕಿ ಆರ್‌ಜೆಡಿ ಪಕ್ಷವು ನಿತೀಶ್ ಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸದ್ಯ ನೂತನ ಸಚಿವ ಮೇವಾಲಾಲ್ ಚೌಧರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಭಾಗಲ್ಪುರ್ ಜಿಲ್ಲೆಯ ಬಿಹಾರ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದ ಅವಧಿಯಲ್ಲಿ ನೇಮಕಾತಿಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ 67 ವರ್ಷದ ಮೇವಾಲಾಲ್ ಚೌಧರಿ ಅವರನ್ನು 2017 ರಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯುನಿಂದ ಅಮಾನತುಗೊಳಿಸಲಾಗಿತ್ತು.

ಇದನ್ನೂ ಓದಿ: ಬಿಹಾರ: ರಾಷ್ಟ್ರಗೀತೆ ಹೇಳಲು ಹೆಣಗಾಡಿದ ನೂತನ ಶಿಕ್ಷಣ ಸಚಿವನ ವಿಡಿಯೋ ವೈರಲ್

ಭಾಗಲ್ಪುರ್ ಕೃಷಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಮತ್ತು ಕಿರಿಯ ವಿಜ್ಞಾನಿಗಳ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದೆ.

ಆಗಿನ ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಅವರ ಅನುಮೋದನೆಯ ನಂತರ ಆಗಿನ ತಾರಾಪುರದ ಜೆಡಿಯು ಶಾಸಕರಾಗಿದ್ದ ಮೇವಾಲಾಲ್ ಚೌಧರಿ  ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿತ್ತು. ಆದರೆ ಅವರ ವಿರುದ್ಧ ಇನ್ನೂ ಯಾವುದೇ ಚಾರ್ಜ್‌ಶೀಟ್ ದಾಖಲಾಗಿಲ್ಲ.

ಇಂದು ಕೂಡ ಧ್ವಜಾರೋಹಣ ಸಮಾರಂಭದಲ್ಲಿ ರಾಷ್ಟ್ರಗೀತೆಯ ಸಾಲುಗಳನ್ನು ಹೇಳಲು ಹೆಣಗಾಡುತ್ತಿದ್ದ  ಮೇವಲಾಲ್ ಚೌಧರಿ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಿಹಾರದ ಪ್ರತಿಪಕ್ಷ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ತನ್ನ ಟ್ವಿಟರ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ವಾಗ್ದಾಳಿ ನಡೆಸಿತ್ತು.

ಬಿಹಾರ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ನಿತೀಶ್ ಕುಮಾರ್ “ಅಪರಾಧಿಗಳನ್ನು” ನೇಮಕ ಮಾಡಿದ್ದಾರೆ ಎಂದು ರಾಷ್ಟ್ರೀಯ ಜನತಾದಳದ ತೇಜಶ್ವಿ ಯಾದವ್ ಸರಣಿ ಟ್ವೀಟ್‌ಗಳಲ್ಲಿ ಆರೋಪಿಸಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ಹಸುಗಳ ಕಲ್ಯಾಣಕ್ಕಾಗಿ ‘ಗೋವು ಸಚಿವ ಸಂಪುಟ’ ರಚಿಸಿದ ಮುಖ್ಯಮಂತ್ರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...