Homeಮುಖಪುಟಬಿಹಾರ; ಎನ್‌ಡಿಎ ಗೆದ್ದರೂ, ನಿತೀಶ್ ಮುಖ್ಯಮಂತ್ರಿ ಪಟ್ಟ ಬಿಜೆಪಿ ಕೈಯಲ್ಲಿ!

ಬಿಹಾರ; ಎನ್‌ಡಿಎ ಗೆದ್ದರೂ, ನಿತೀಶ್ ಮುಖ್ಯಮಂತ್ರಿ ಪಟ್ಟ ಬಿಜೆಪಿ ಕೈಯಲ್ಲಿ!

ಸಂಜೆಯ ಹೊತ್ತಿಗೆ, ನಾವು ಸರ್ಕಾರ ರಚನೆ ಮತ್ತು ನಾಯಕತ್ವದ ವಿಷಯಗಳ ಬಗ್ಗೆ ನಿರ್ಧರಿಸುತ್ತೇವೆ ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.

- Advertisement -
- Advertisement -

ಬಿಹಾರ ಮುಖ್ಯಮಂತ್ರಿಯಾಗಿ ಮತ್ತೆ ಪಟ್ಟಕ್ಕೇರುವ ನಿತೀಶ್ ಕುಮಾರ್ ಅವರ ಕನಸು ಈಗ ಸಂಪೂರ್ಣವಾಗಿ ಅವರ ಮಿತ್ರ ಪಕ್ಷ ಬಿಜೆಪಿಯ ಮೇಲೆ ಅವಲಂಬಿತವಾಗಿದೆ. ಮತ ಎಣಿಕೆ ಇನ್ನು ಮುಂದುವರೆಯುತ್ತಿರುವ ಸಂದರ್ಭದಲ್ಲೇ ಈಗಾಗಲೇ ಬಿಜೆಪಿ ಬಿಹಾರದಲ್ಲಿ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಮೊದಲ ಬಾರಿಗೆ ಅವರು ಪ್ರಧಾನ ಮಂತ್ರಿ ಪಕ್ಷದೊಂದಿಗಿನ ಎನ್‌ಡಿಎನಲ್ಲಿ ಕಿರಿಯ ಪಾಲುದಾರರಾಗುವ ಸಂಭವ ಹೆಚ್ಚಾಗಿದೆ. ನಿತೀಶ್ ಕುಮಾರ್ ಅವರ ಆಪ್ತ ನಾಯಕರು “ಬ್ರಾಂಡ್ ನಿತೀಶ್” ಅನ್ನು ದೂಷಿಸದಿದ್ದರೂ ಸಹ, ಬಿಹಾರದ ಫಲಿತಾಂಶವು ಪ್ರಬಲ ಆಡಳಿತ ವಿರೋಧಿ ತತ್ವವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಒಪ್ಪಿಕೊಂಡಿದ್ದಾರೆ.

“ಈ ಚುನಾವಣೆಯಲ್ಲಿ ಮೋದಿಯವರ ಇಮೇಜ್  ನಮ್ಮನ್ನು ಮುನ್ನುಗ್ಗಿಸಿದೆ” ಎಂದು ಬಿಜೆಪಿಯ ಹಿರಿಯ ಮುಖಂಡ ಕೈಲಾಶ್ ವಿಜಯವರ್ಗಿಯಾ ಹೇಳಿದರು. “ಸಂಜೆಯ ಹೊತ್ತಿಗೆ, ನಾವು ಸರ್ಕಾರ ರಚನೆ ಮತ್ತು ನಾಯಕತ್ವದ ವಿಷಯಗಳ ಬಗ್ಗೆ ನಿರ್ಧರಿಸುತ್ತೇವೆ” ಎಂದು ಅವರು ಎನ್‌ಡಿಟಿವಿಗೆ ತಿಳಿಸಿದರು.

ಇದನ್ನೂ ಓದಿ: 11 ರಾಜ್ಯಗಳಲ್ಲಿ ಉಪಚುನಾವಣೆ: 58 ಕ್ಷೇತ್ರಗಳಲ್ಲಿ 28 ರಲ್ಲಿ ಮುನ್ನಡೆಯಲ್ಲಿರುವ ಬಿಜೆಪಿ

ಕೈಲಾಶ್ ವಿಜಯವರ್ಗಿಯಾ ಹೇಳಿಕೆ, ಬಿಹಾರದಲ್ಲಿ ಸರ್ಕಾರದ ಮುಖ್ಯಸ್ಥರಾಗಲು ಹೊಸ ಅಭ್ಯರ್ಥಿಯ ಬಗ್ಗೆ ಬಿಜೆಪಿ ಯೋಚಿಸಬಹುದು ಎಂಬುದನ್ನು ಸೂಚಿಸುತ್ತದೆ. ಆದರೆ ಇದರ ಬಗ್ಗೆ ಪ್ರಶ್ನಿಸಿದರೇ, ಎನ್‌ಡಿಎ ಗೆಲುವು ಸಾಧಿಸಿದರೇ, ನಿತೀಶ್ ಕುಮಾರ್‌ಗೆ ಮತ್ತೊಮ್ಮೆ ಮುಖ್ಯಮಂತ್ರಿ ಪಟ್ಟ ನೀಡುವ ತನ್ನ ಭರವಸೆಗೆ ಬಿಜೆಪಿ ಬದ್ಧವಾಗಿದೆ ಎಂದು ವಿಜಯವರ್ಗಿಯಾ ಹೇಳಿದರು.

ಬಿಹಾರ ಚುನಾವಣೆಯಲ್ಲಿ ಇಷ್ಟು ಕಳಪೆ ಫಲಿತಾಂಶ ಬರಲು ನಿತೀಶ್ ಕುಮಾರ್ ಅವರ ತಂಡವು ಕೊರೊನಾ ಮತ್ತು ಚಿರಾಗ್ ಪಾಸ್ವಾನ್  ಕಾರಣ ಎಂದಿದ್ದಾರೆ. 38 ವರ್ಷದ ಯುವ ರಾಜಕಾರಣಿ ಚಿರಾಗ್ ಪಾಸ್ವಾನ್ ಚುನಾವಣೆಯುದ್ದಕ್ಕೂ ನಿತೀಶ್ ಕುಮಾರ್ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ನಿತೀಶ್ ಕುಮಾರ್‌ ತಂಡ ಆರೋಪಿಸಿದೆ.

ವಾಸ್ತವವಾಗಿ, ಚಿರಾಗ್ ಪಾಸ್ವಾನ್ ಅವರನ್ನು ಈ ರೀತಿಯಾಗಿ ಹೊರಬರಲು, ನಿತೀಶ್ ಕುಮಾರ್‌ ವಿರುದ್ಧ ನಿಲ್ಲಲು ಬಿಜೆಪಿಯೇ ಅವಕಾಶ ನೀಡಿತ್ತು ಎಂದು ವಿಮರ್ಶಕರು ಮತ್ತು ನಿತೀಶ್ ಕುಮಾರ್ ಅವರ ಸಹಾಯಕರು ಹೇಳುತ್ತಾರೆ. ಚಿರಾಗ್ ಪಾಸ್ವಾನ್ ಬಿಜೆಪಿ ಬತ್ತಳಿಕೆಯಿಂದ ಬಂದ ಸಣ್ಣ ಆಟಗಾರ. ಆತನನ್ನು ಮುಂದಿಟ್ಟುಕೊಂಡು ತಮ್ಮ ಹಳೆಯ ಮಿತ್ರ ನಿತೀಶ್ ಕುಮಾರ್‌ ಭವಿಷ್ಯ ನಿರ್ಧರಿಸಲು ಬಿಜೆಪಿ  ಸಿದ್ಧವಾಗಿತ್ತು ಎಂದಿದ್ದಾರೆ.


ಇದನ್ನೂ ಓದಿ: ಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...