ಇಡೀ ದೇಶದ ಗಮನ ಸೆಳೆದಿರುವ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕಾಗಿ ಮತ ಎಣಿಕೆ ಆರಂಭವಾಗಿದ್ದು, ಇದೇ ತಿಂಗಳಿನಲ್ಲಿ 3 ಹಂತಗಳಲ್ಲಿ ಮತದಾನ ನಡೆದಿತ್ತು. ಕೊರೊನಾ ಸಾಂಕ್ರಾಮಿಕದ ನಡುವೆ ದೇಶದಲ್ಲಿ ನಡೆದ ಅತ್ಯಂತ ದೊಡ್ಡ ಚುನಾವಣಾ ಪ್ರಕ್ರಿಯೆ ಇದಾಗಿದ್ದು, ಪ್ರಮುಖ ರಾಷ್ಟ್ರೀಯ ಪಕ್ಷಗಳಿಗೂ ಇದು ಅತ್ಯಂತ ಮಹತ್ವದ್ದೆನಿಸಿದೆ.
ಮತ ಎಣಿಕೆಯ ಭಾಗವಾಗಿ ಮೊದಲು ಅಂಚೆ ಮತಗಳ ಎಣಿಕೆಯನ್ನು ಆರಂಭಿಸಿರುವ ಬಿಹಾರ ಚುನಾವಣಾ ಆಯೋಗ, ಇದು ಮುಗಿದ ನಂತರ ಇವಿಎಂ ಮತಗಳನ್ನು ಎಣಿಸಲಿದೆ.
ಆರ್‌ಜೆಡಿಗೆ 20 ಕ್ಷೇತ್ರಗಳಲ್ಲಿ ಮುನ್ನಡೆಯಿದ್ದರೆ, ಎನ್‌ಡಿಎ ಗೆ 11 ಕ್ಷೇತ್ರಗಳಲ್ಲಿ ಮುನ್ನಡೆಯಿದೆ. ಇತರೆ ಪಕ್ಷಕ್ಕೆ 1 ಕ್ಷೇತ್ರದಲ್ಲಿ ಮುನ್ನಡೆಯಿದೆ.
ಇದನ್ನೂ ಓದಿ: ದೇಶದ ರಾಜಕೀಯಕ್ಕೆ ತಿರುವು ನೀಡುವುದೇ ಬಿಹಾರ ಚುನಾವಣೆ?
ಬಿಹಾರದಲ್ಲಿ 243 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್ 122 ಸ್ಥಾನಗಳನ್ನು ಗೆಲ್ಲಬೇಕಾಗಿದೆ.
ಬಿಹಾರ ರಾಜಕೀಯ ವಲಯದಲ್ಲಿ ತೇಜಸ್ವಿ ಯಾದವ್, ಚಿರಾಗ್ ಪಾಸ್ವಾನ್ ಮತ್ತು ನಿತೀಶ್ ಕುಮಾರ್ ನಡುವೆ ಮಹಾ ಪೈಪೋಟಿ ನಡೆಯುತ್ತಿದೆ. ಎನ್‌ಡಿಎ ಮೈತ್ರಿಯಲ್ಲಿ ಬಿಜೆಪಿ, ಜೆಡಿಯು ಮತ್ತು ಎಲ್‌ಜೆಪಿ ಪಕ್ಷಗಳಿದ್ದವು. ಆದರೆ ನಿತೀಶ್ ಕುಮಾರ್ ಅವರೊಂದಿಗಿನ ಭಿನ್ನಾಭಿಪ್ರಾಯದಿಂದ ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ ಪಕ್ಷವು ಎನ್‌ಡಿಎ ಮೈತ್ರಿಕೂಟದಿಂದ ಹೊರಗುಳಿದಿದೆ. ಇದು ಬಿಜೆಪಿ ಮತ್ತು ನಿತೀಶ್ ಕುಮಾರ್‌ಗೆ ಹಿನ್ನಡೆಯನ್ನುಂಟುಮಾಡಿದೆ. ಇನ್ನು ತೇಜಸ್ವಿಯವರ ಆರ್‌ಜೆಡಿ ಮತ್ತು ಎಲ್ಲಾ ಎಡ ಪಕ್ಷಗಳೂ ಸೇರಿ ಮಹಾಘಟಬಂಂಧನ್ ರಚಿಸಿಕೊಂಡಿವೆ. ರಾಜ್ಯದಲ್ಲಿ ಇದಕ್ಕೆ ಉತ್ತಮ ಬೆಂಬಲವಿದೆ ಎನ್ನಲಾಗಿದೆ.
ಏನೇ ಇದ್ದರೂ ಇಂದು ಮತದಾರನ ನಿಖರ ತೀರ್ಪು ಬಹಿರಂಗವಾಗಲಿದೆ.
ಇದನ್ನೂ ಓದಿ: ಬಿಹಾರ ಚುನಾವಣೆ: ಕಣದಲ್ಲಿರುವ 1157 ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿ!