Homeಮುಖಪುಟಬಿಹಾರ ಚುನಾವಣಾ ಕಾರ್ಯತಂತ್ರ | ದೆಹಲಿಯಲ್ಲಿ ಸಭೆ ನಡೆಸಿದ ಆರ್‌ಜೆಡಿ, ಕಾಂಗ್ರೆಸ್

ಬಿಹಾರ ಚುನಾವಣಾ ಕಾರ್ಯತಂತ್ರ | ದೆಹಲಿಯಲ್ಲಿ ಸಭೆ ನಡೆಸಿದ ಆರ್‌ಜೆಡಿ, ಕಾಂಗ್ರೆಸ್

- Advertisement -
- Advertisement -

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯ ಕಾರ್ಯತಂತ್ರದ ಕುರಿತು ಚರ್ಚಿಸಲು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡುವೆ ಮಂಗಳವಾರ ದೆಹಲಿಯಲ್ಲಿ ಮಹತ್ವದ ಸಭೆ ನಡೆಯಿತು. ಬಿಹಾರ ಚುನಾವಣಾ ಕಾರ್ಯತಂತ್ರ

ಕಾಂಗ್ರೆಸ್ ಮತ್ತು ಆರ್‌ಜೆಡಿ ಎರಡೂ ಪಕ್ಷಗಳ ನಾಯಕರು ಸೀಟು ಹಂಚಿಕೆ ಸೂತ್ರ ಸೇರಿದಂತೆ ವಿವಿಧ ಚುನಾವಣಾ ಪೂರ್ವ ವಿಷಯಗಳ ಕುರಿತು ಗಂಟೆಗಟ್ಟಲೆ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ತೇಜಸ್ವಿ ಯಾದವ್, ಚರ್ಚೆಗಳು ಸಕಾರಾತ್ಮಕವಾಗಿ ನಡೆದಿವೆ ಮತ್ತು ಏಪ್ರಿಲ್ 17 ರಂದು ಪಾಟ್ನಾದಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ನಡೆಯುವ ಮುಂದಿನ ಸಭೆಯಲ್ಲಿ ಹೆಚ್ಚಿನ ವಿವರಗಳನ್ನು ತಿಳಿಸಲಾಗುವುದು ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಎನ್‌ಡಿಎ ಸರ್ಕಾರವನ್ನು ಟೀಕಿಸಿದ ತೇಜಸ್ವಿ ಯಾದವ್, ರಾಜ್ಯದಲ್ಲಿ ಸಿಎಂ ನಿತೀಶ್ ಕುಮಾರ್ ಅವರನ್ನು ಬಿಜೆಪಿ ಹೈಜಾಕ್ ಮಾಡಿದೆ ಮತ್ತು ಎನ್‌ಡಿಎ ಆಳ್ವಿಕೆಯಲ್ಲಿ ಯಾವುದೇ ಅರ್ಥಪೂರ್ಣ ಬೆಳವಣಿಗೆ ನಡೆದಿಲ್ಲ ಎಂದು ಹೇಳಿದ್ದಾರೆ.

ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳು ಸೇರಿದಂತೆ ಇತರ ಪಕ್ಷಗಳನ್ನು ಒಳಗೊಂಡ ಮಹಾಘಟಬಂಧನ್ ಮೈತ್ರಿಯು ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಸರ್ಕಾರವನ್ನು ಸೋಲಿಸಲು ಒಗ್ಗಟ್ಟಿನಿಂದ ಸ್ಪರ್ಧಿಸಲಿದೆ ಎಂದು ಅವರು ಹೇಳಿದ್ದಾರೆ.

ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ “ವಿಷಯಾಧಾರಿತ” ವೇದಿಕೆಯಲ್ಲಿ ಸ್ಪರ್ಧಿಸಲಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಮತ್ತು ಅಭಿವೃದ್ಧಿ ಸೇರಿದಂತೆ ಎಲ್ಲಾ ರಂಗಗಳಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.

ಮಹಾಘಟಬಂಧನ್‌ ಮೈತ್ರಿಯ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ತೇಜಸ್ವಿ, “ಎಲ್ಲವನ್ನೂ ಸೂಕ್ತ ಸಮಯದಲ್ಲಿ ಮತ್ತು ಪರಸ್ಪರ ನಿರ್ಧರಿಸಲಾಗುತ್ತದೆ. ಅಭಿವೃದ್ಧಿ ಮಾಡುವಲ್ಲಿ ಶೋಚನೀಯವಾಗಿ ವಿಫಲವಾಗಿರುವ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಕಿತ್ತೊಗೆಯಲು ನಾವು ಒಗ್ಗಟ್ಟಾಗಿದ್ದೇವೆ. ನಾವು ರಾಜ್ಯವನ್ನು ಸಾಮಾನ್ಯ ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇವೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್ ನಾಯಕರೊಂದಿಗಿನ ಸಭೆ ಒಂದು ಗಂಟೆ ಕಾಲ ನಡೆಯಿತು. ಸಭೆಯಲ್ಲಿ ಬಿಹಾರದ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಕುಮಾರ್, ಮನೋಜ್ ಕುಮಾರ್ ಝಾ (ಆರ್‌ಜೆಡಿ ಸಂಸದ, ರಾಜ್ಯಸಭೆ), ಸಂಜಯ್ ಯಾದವ್ (ಆರ್‌ಜೆಡಿ ಸಂಸದ, ರಾಜ್ಯಸಭೆ) ಸೇರಿದಂತೆ ಇತರ ಆರ್‌ಜೆಡಿ ನಾಯಕರು ಭಾಗವಹಿಸಿದ್ದರು. ಬಿಹಾರ ಚುನಾವಣಾ ಕಾರ್ಯತಂತ್ರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಕ್ಕಳ ಕಳ್ಳಸಾಗಣೆ ಪ್ರಕರಣ | ಅಲಹಾಬಾದ್ ಹೈಕೋರ್ಟ್, ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರಿಂಕೋರ್ಟ್

ಮಕ್ಕಳ ಕಳ್ಳಸಾಗಣೆ ಪ್ರಕರಣ | ಅಲಹಾಬಾದ್ ಹೈಕೋರ್ಟ್, ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರಿಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...