Homeಮುಖಪುಟಬಿಹಾರ ಚುನಾವಣೆ 'ಆರಂಭದಿಂದಲೂ ನ್ಯಾಯಯುತವಾಗಿರಲಿಲ್ಲ' : ರಾಹುಲ್ ಗಾಂಧಿ

ಬಿಹಾರ ಚುನಾವಣೆ ‘ಆರಂಭದಿಂದಲೂ ನ್ಯಾಯಯುತವಾಗಿರಲಿಲ್ಲ’ : ರಾಹುಲ್ ಗಾಂಧಿ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ‘ಆರಂಭದಿಂದಲೂ ನ್ಯಾಯಯುತವಾಗಿರಲಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ (ನವೆಂಬರ್ 14) ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಸೋಲನುಭವಿಸಿದ ಕೆಲ ಗಂಟೆಗಳ ಬಳಿಕ ವಿಪಕ್ಷ ನಾಯಕ ಸಾಮಾಜಿಕ ಮಾಧ್ಯಮದಲ್ಲಿ ಮೇಲಿನ ಹೇಳಿಕೆ ನೀಡಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಶುಕ್ರವಾರ (ನವೆಂಬರ್ 14) ಪ್ರಕಟಗೊಂಡಿದೆ. ಎನ್‌ಡಿಎ ಒಕ್ಕೂಟ ಮತ್ತೊಮ್ಮೆ ಅಭೂತಪೂರ್ವ ಗೆಲುವು ದಾಖಲಿಸಿದೆ. ಒಕ್ಕೂಟದ ಪ್ರಮುಖ ಪಕ್ಷ ಬಿಜೆಪಿ 89 ಸ್ಥಾನಗಳನ್ನು ಪಡೆದಿದ್ದು, ನಿತೀಶ್ ಕುಮಾರ್ ನೇತೃತ್ವದ ಜೆಡಿ (ಯು) 85 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದೆ. ಒಕ್ಕೂಟದ ಮತ್ತೊಂದು ಪಕ್ಷ ಎಲ್‌ಜೆಪಿ (ರಾಮ್‌ ವಿಲಾಸ್) 19 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ.

ಇತ್ತ ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷ ಕಾಂಗ್ರೆಸ್‌ ಕೇವಲ 6 ಸ್ಥಾನಗಳಿಗೆ ತೃಪ್ತಿಪಡೆದುಕೊಂಡಿದೆ. ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ 24 ಸ್ಥಾನಗಳನ್ನು ಗಳಿಸಿದೆ. ಸಿಪಿಐ (ಎಂಎಲ್‌) (ಎಲ್) ಎರಡು ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ 2020ರ ಚುನಾವಣೆಯಲ್ಲಿ 19 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ 6 ಕುಸಿದಿದೆ.

ಶುಕ್ರವಾರ ಸಂಜೆ ಹಾಕಿದ ಪೋಸ್ಟ್‌ನಲ್ಲಿ ವಿರೋಧ ಪಕ್ಷಗಳ ಮಹಾಘಟಬಂಧನ್ ಒಕ್ಕೂಟದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ಮತದಾರರಿಗೆ ರಾಹುಲ್ ಗಾಂಧಿ ಧನ್ಯವಾದ ಅರ್ಪಿಸಿದ್ದಾರೆ. ಆದರೆ, ಫಲಿತಾಂಶ ನಿಜವಾಗಿಯೂ ಆಶ್ಚರ್ಯಕರವಾಗಿದೆ ಎಂದು ಹೇಳಿದ್ದಾರೆ.

“ಆರಂಭದಿಂದಲೂ ನ್ಯಾಯಯುತವಾಗಿರದ ಚುನಾವಣೆಯಲ್ಲಿ ನಾವು ಗೆಲುವು ಸಾಧಿಸಲು ಸಾಧ್ಯವಾಗಿಲ್ಲ” ಎಂದಿದ್ದಾರೆ.

“ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಮಾಡುತ್ತಿರುವ ಹೋರಾಟವಾಗಿದೆ. ಕಾಂಗ್ರೆಸ್ ಪಕ್ಷ ಮತ್ತು ಇಂಡಿಯಾ ಒಕ್ಕೂಟ ಬಿಹಾರದ ಫಲಿತಾಂಶವನ್ನು ಆಳವಾಗಿ ಪರಿಶೀಲನೆ ನಡೆಸಲಿದೆ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಇನ್ನಷ್ಟು ಪರಿಣಾಮಕಾರಿ ಪ್ರಯತ್ನ ಮಾಡಲಿದೆ” ಎಂದು ಬರೆದುಕೊಂಡಿದ್ದಾರೆ.

“ಬಿಹಾರದ ಚುನಾವಣಾ ಫಲಿತಾಂಶ ನಿಸ್ಸಂದೇಹವಾಗಿ ಬೃಹತ್ ಪ್ರಮಾಣದಲ್ಲಿ ಮತ ಕಳ್ಳತನವನ್ನು ಪ್ರತಿಬಿಂಬಿಸುತ್ತದೆ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶುಕ್ರವಾರ ರಾತ್ರಿ ಹೇಳಿದ್ದಾರೆ. ಇದು ಪ್ರಧಾನಿ, ಕೇಂದ್ರ ಗೃಹ ಸಚಿವರು ಮತ್ತು ಚುನಾವಣಾ ಆಯೋಗದ ಮಾಸ್ಟರ್ ಮೈಂಡ್ ಎಂದು ಅವರು ಆರೋಪಿಸಿದ್ದಾರೆ.

ಕಳೆದ ವರ್ಷ ನಡೆದ ಮಹಾರಾಷ್ಟ್ರ, ಹರಿಯಾಣದ ವಿಧಾನಸಭಾ ಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಭಾರೀ ಪ್ರಮಾಣದ ಮತಗಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ ಈಗಾಗಲೇ ಆರೋಪಿಸಿದ್ದಾರೆ.

2024ರ ಲೋಕಸಭೆ ಚುನಾವಣೆ ವೇಳೆ ಬೆಂಗಳೂರು ಕೇಂದ್ರ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಮತ್ತು 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆ ವೇಳೆ ನಡೆದ ಮತಗಳ್ಳತನ ಕುರಿತು ಸುದ್ದಿಗೋಷ್ಠಿ ನಡೆಸಿ ರಾಹುಲ್ ಗಾಂಧಿ ದಾಖಲೆ ಬಿಡುಗಡೆ ಮಾಡಿದ್ದಾರೆ.

ರಾಹುಲ್ ಗಾಂಧಿ ಒಟ್ಟು 3 ಬಾರಿ ದೆಹಲಿಯಲ್ಲಿ ದೊಡ್ಡ ಮಟ್ಟದ ಪತ್ರಿಕಾಗೋಷ್ಠಿ ನಡೆಸಿ ಮತಗಳ್ಳತನ ಆರೋಪಗಳನ್ನು ಮಾಡಿದ್ದಾರೆ. ಚುನಾವಣಾ ಆಯೋಗ ಪ್ರತೀ ಬಾರಿಯೂ ಅವರ ಆರೋಪಗಳನ್ನು ನಿರಾಕರಿಸಿಕೊಂಡು ಬಂದಿದೆ.

ಚುನಾವಣಾ ಆಯೋಗವು ನಕಲಿ ಮತದಾರರನ್ನು ತೆಗೆದುಹಾಕದೆ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ನಾಶಮಾಡುವ ಮೂಲಕ ಸಾಕ್ಷ್ಯಗಳನ್ನು ಮುಚ್ಚಿಹಾಕಿ ಬಿಜೆಪಿಗೆ ಚುನಾವಣೆ ಗೆಲ್ಲಲು ಸಹಾಯ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ: ಕೊಲೆ ಆರೋಪಿ ಅನಂತ್ ಸಿಂಗ್ ಗೆ ಮೊಕಾಮಾದಲ್ಲಿ ಭರ್ಜರಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...