Homeಮುಖಪುಟಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

ಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

- Advertisement -
- Advertisement -

ಬಿಹಾರದಲ್ಲಿ ನವೆಂಬರ್ 6ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಎನ್‌ಡಿಎ ಭಾಗವಾಗಿರುವ ಲೋಕಜನಶಕ್ತಿ ಪಕ್ಷ (ಎಲ್‌ಜೆಪಿ) ಸಂಸದೆ ಶಾಂಭವಿ ಚೌಧರಿ ಅವರ ಎರಡೂ ಕೈಗಳಲ್ಲಿ ಮತದಾನದ ಗುರುತಿನ ಶಾಯಿ ಕಂಡುಬಂದಿದೆ. ಈ ಮೂಲಕ ಅವರು ‘ಮತಗಳ್ಳತನ’ ನಡೆಸಿದ್ದಾರೆ ವಿಪಕ್ಷಗಳು ಆರೋಪಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಶಾಂಭವಿ ಅವರ ವಿಡಿಯೋವೊಂದು ವೈರಲ್ ಆಗಿದೆ. ಅದರಲ್ಲಿ, ಬಂಕೀಪುರ ವಿಧಾನಸಭಾ ಕ್ಷೇತ್ರದ ಬುದ್ಧ ಕಾಲೊನಿಯ ಮತಗಟ್ಟೆಯಲ್ಲಿ ಮತದಾನ ಮಾಡಿ ಬಳಿಕ, ಶಾಂಭವಿ ತನ್ನ ಬಲಗೈ ಬೆರಳಿಗೆ ಶಾಯಿ ಹಾಕಿದ್ದನ್ನು ಮೊದಲು ತೋರಿಸುವುದು, ಬಳಿಕ ಎಡಗೈ ಬೆರಳಿಗೆ ಶಾಯಿ ಹಾಕಿದ್ದನ್ನು ತೋರಿಸುವುದನ್ನು ನೋಡಬಹುದು.

ಶಾಂಭವಿ ಅವರ ಎರಡೂ ಕೈ ಬೆರಳುಗಳಲ್ಲಿ ಶಾಯಿ ಗುರುತು ಕಂಡು ಬಂದಿರುವುದು ರಾಹುಲ್ ಗಾಂಧಿ ಮಾಡುತ್ತಿರುವ ಮತಗಳ್ಳತನ ಆರೋಪಕ್ಕೆ ಸ್ಪಷ್ಟ ಪುರಾವೆ. ಶಾಂಭವಿ ಎರಡೆರಡು ಬಾರಿ ಮತದಾನ ಮಾಡಿ ಅಕ್ರಮವೆಸಗಿದ್ದಾರೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಶಾಂಭವಿ ಅವರ ವೈರಲ್ ವಿಡಿಯೋವನ್ನು ಹಂಚಿಕೊಂಡಿರುವ ಆರ್‌ಜೆಡಿಯ ರಾಷ್ಟ್ರೀಯ ವಕ್ತಾರೆ ಕಾಂಚನಾ ಯಾದವ್, “ಇದು ಸಂಪೂರ್ಣ ಹೊಸ ಮಟ್ಟದ ವಂಚನೆ. ಇದು ಎಲ್‌ಜೆಪಿ ಸಂಸದೆ ಶಾಂಭವಿ ಚೌಧರಿ. ಅವರ ಎರಡೂ ಕೈಗಳಲ್ಲಿ ಶಾಯಿ ಇದೆ, ಅಂದರೆ ಅವರು ಎರಡು ಬಾರಿ ಮತ ಚಲಾಯಿಸಿದ್ದಾರೆ. ಇದು ಬೆಳಕಿಗೆ ಬಂದಾಗ, ಅವರ ತಂದೆ ಅಶೋಕ್ ಚೌಧರಿ ಅವರು ತಮ್ಮ ಕಣ್ಣುಗಳಿಂದ ಅವರಿಗೆ ಸಿಗ್ನಲ್ ನೀಡುತ್ತಿರುವುದು ಕಂಡುಬಂದಿದೆ. ಚುನಾವಣಾ ಆಯೋಗ, ಇದು ಹೇಗೆ ನಡೆಯುತ್ತಿದೆ? ಇದನ್ನು ಯಾರು ತನಿಖೆ ಮಾಡುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಕೂಡ ತನ್ನ ಎಕ್ಸ್‌ ಖಾತೆಯಲ್ಲಿ ಶಾಂಭವಿ ಅವರು ಎರಡು ಬೆರಳುಗಳನ್ನು ತೋರಿಸಿದ ಫೋಟೋ ಹಂಚಿಕೊಂಡಿದ್ದು, “ಎರಡು ಕೈಗಳ್ಳಲ್ಲಿ ಮತಗಳ್ಳತನ’ ಎಂದು ಬರೆದುಕೊಂಡಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಾಟ್ನಾ ಜಿಲ್ಲಾಡಳಿತ, “ಮತಗಟ್ಟೆಯ ಸಿಬ್ಬಂದಿ ತಪ್ಪಾಗಿ ಶಾಂಭವಿ ಅವರ ಬಲಗೈಗೆ ಶಾಯಿ ಹಚ್ಚಿದ್ದರು. ಆನಂತರ ಅವರ ಎಡಗೈಗೆ ಶಾಯಿ ಹಚ್ಚಿ ತಪ್ಪನ್ನು ಸರಿಪಡಿಸಿದ್ದಾರೆ” ಎಂದು ಹೇಳಿದೆ.

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...