ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) 12–15 ಸ್ಥಾನಗಳಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ವಿನೋದ್ ಕುಮಾರ್ ಪಾಂಡೆ ಗುರುವಾರ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಬಿಹಾರ ಚುನಾವಣೆ
ಆದಾಗ್ಯೂ, ಪಕ್ಷವು ತನ್ನ ಇಂಡಿಯಾ ಮೈತ್ರಿಯ ಪಕ್ಷಗಳೊಂದಿಗೆ ಚರ್ಚಿಸಿದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಜೆಎಂಎಂ ನಾಯಕ ಹೇಳಿದ್ದಾರೆ ಎಂದು ವರದಿ ಹೇಳಿದೆ.
“ಮುಂಬರುವ ಬಿಹಾರ ಚುನಾವಣೆಯಲ್ಲಿ ಸ್ಪರ್ಧಿಸಲು ನಾವು ನಿರ್ಧರಿಸಿದ್ದೇವೆ ಮತ್ತು 12 ರಿಂದ 15 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿದ್ದೇವೆ. ನಮ್ಮ ಇಂಡಿಯಾ ಮೈತ್ರಿಯ ಪಾಲುದಾರರೊಂದಿಗೆ ಸಮಾಲೋಚನೆಯ ನಂತರ ಸ್ಥಾನಗಳ ಸಂಖ್ಯೆಯ ಕುರಿತು ಅಂತಿಮ ನಿರ್ಧಾರವನ್ನು ಘೋಷಿಸಲಾಗುವುದು” ಎಂದು ವಿನೋದ್ ಕುಮಾರ್ ಪಾಂಡೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರೆ.
ಚುನಾವಣೆಗೆ ತಯಾರಿ ನಡೆಸಲು ಬಿಹಾರದಲ್ಲಿ ಪಕ್ಷದ ಘಟಕಗಳು ಸಕ್ರಿಯವಾಗಿ ತೊಡಗಿಸಿಕೊಂಡಿವೆ ಮತ್ತು ಅವರೊಂದಿಗೆ ಚರ್ಚೆಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯುವ ನಿರೀಕ್ಷೆಯಿದೆ.
ಈ ಮಧ್ಯೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜಾರ್ಖಂಡ್‌ನಾದ್ಯಂತ ಶುಕ್ರವಾರ ನಿಗದಿಯಾಗಿದ್ದ ಪ್ರತ್ಯೇಕ ಸರ್ನಾ ಧಾರ್ಮಿಕ ಸಂಹಿತೆಗಾಗಿ ಜೆಎಂಎಂ ಆಯೋಜಿಸಿದ್ದ ಆಂದೋಲನ ಕಾರ್ಯಕ್ರಮವನ್ನು ಮುಂದೂಡಿದೆ.
“ದೇಶದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ದೇಶ ನಮ್ಮ ಪ್ರಮುಖ ಆದ್ಯತೆಯಾಗಿದೆ. ಆದ್ದರಿಂದ, ನಾವು ಇದೀಗ ಕಾರ್ಯಕ್ರಮವನ್ನು ಮುಂದೂಡಲು ಮತ್ತು ನಮ್ಮ ಸಶಸ್ತ್ರ ಪಡೆಗಳೊಂದಿಗೆ ದೃಢವಾಗಿ ನಿಲ್ಲಲು ನಿರ್ಧರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ. ಬಿಹಾರ ಚುನಾವಣೆ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಪಿಎಂಎಲ್‌ಎ ಆರೋಪಿಯು ಪ್ರಾಸಿಕ್ಯೂಷನ್ ಅವಲಂಬಿಸದ ದಾಖಲೆಗಳ ನಕಲು ಪ್ರತಿ ಪಡೆಯುವ ಹಕ್ಕು ಹೊಂದಿದ್ದಾರೆ: ಸುಪ್ರೀಂ ಕೋರ್ಟ್
ಪಿಎಂಎಲ್‌ಎ ಆರೋಪಿಯು ಪ್ರಾಸಿಕ್ಯೂಷನ್ ಅವಲಂಬಿಸದ ದಾಖಲೆಗಳ ನಕಲು ಪ್ರತಿ ಪಡೆಯುವ ಹಕ್ಕು ಹೊಂದಿದ್ದಾರೆ: ಸುಪ್ರೀಂ ಕೋರ್ಟ್

