Homeಮುಖಪುಟಬಿಹಾರ: ಅಂತಿಮ ಹಂತದ ಚುನಾವಣೆ - 78 ಕ್ಷೇತ್ರಗಳಲ್ಲಿ ಶೇ.56ರಷ್ಟು ಮತದಾನ

ಬಿಹಾರ: ಅಂತಿಮ ಹಂತದ ಚುನಾವಣೆ – 78 ಕ್ಷೇತ್ರಗಳಲ್ಲಿ ಶೇ.56ರಷ್ಟು ಮತದಾನ

- Advertisement -
- Advertisement -
ಬಿಹಾರ ವಿಧಾನಸಭಾ ಚುನಾವಣೆಯ ಮೂರನೇ ಮತ್ತು ಅಂತಿಮ ಹಂತದ ಮತದಾನ ಶಾಂತಿಯುತವಾಗಿ ನಡೆದಿದ್ದು ಸಂಜೆ 5 ಗಂಟೆ ವೇಳೆಗೆ ಶೇ.52.80ರಷ್ಟು ಮತದಾನವಾಗಿದೆ. 78 ಕ್ಷೇತ್ರಗಳ 1204 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ದಾಖಲಾಗಿದೆ.
ರಾಜ್ಯದ 243 ವಿಧಾನಸಭಾ ಕ್ಷೇತ್ರಗಳ ಪೈಕಿ ಈ 78 ಕ್ಷೇತ್ರಗಳು ಅತಿ ಹೆಚ್ಚಿನ ಮಹತ್ವ ಪಡೆದುಕೊಂಡಿದ್ದವು. ಈ ಕ್ಷೇತ್ರಗಳಲ್ಲಿ ಆರ್.ಜೆ.ಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಮತ್ತು ಬಿಜೆಪಿ-ಜೆಡಿಯು ನೇತೃತ್ವದ ಎನ್.ಡಿ.ಎ ಪ್ರಮುಖ ಅಭ್ಯರ್ಥಿಗಳು ಕಣದಲ್ಲಿದ್ದು ಮತದಾರರು ನೀಡುವ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.
ಕೋಸಿ, ಮಿಥಿಲ, ತೀರ್ ಹತ್ ವಲಯದ 78 ಕ್ಷೇತ್ರಗಳಿಗೆ ಮತದಾನ ನಡೆದಿದೆ. ಈ ಅಂತಿಮ ಹಂತದ ಚುನಾವಣೆಯಲ್ಲಿ ಹಾಲಿ ಸರ್ಕಾರದ 12 ಮಂದಿ ಸಚಿವರು ಸ್ಪರ್ಧೆಗಿಳಿದಿರುವುದು ಮುಖ್ಯ ವಿಷಯವಾಗಿದ್ದು ಮತದಾರ ಯಾರಿಗೆ ಮಣೆಹಾಕುತ್ತಾರೆ ಎಂಬುದನ್ನು ನೋಡಬೇಕಾಗಿದೆ.
ಸೀಮಾಂಚಲ ವಲಯವು ಮುಸ್ಲೀಂ ಬಾಹುಳ್ಯದ ಕ್ಷೇತ್ರಗಳಾಗಿದ್ದು ಎಐಎಂಐಎಂ ಮತ್ತು ಇತರೆ ಸಣ್ಣ ಪಕ್ಷಗಳು ಮಾಡಿಕೊಂಡಿರುವ ಜಾತ್ಯತೀತವಾದಿ ಘಟಬಂಧನ್‌ಗೆ ಅನುಕೂಲವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಇಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಾಜಿ ಸಿಎಂ ಲಾಲೂ ಅವರನ್ನು ಗುರಿಮಾಡಿಕೊಂಡು ದಾಳಿ ನಡೆಸಿದ್ದರು. ಲಾಲೂ ಅವಧಿಯಲ್ಲಿ ಜಂಗಲ್ ರಾಜ್ ಆಗಿತ್ತು ಎಂದು ನಿತೀಶ್ ಆರೋಪ ಮಾಡಿದ್ದರು. ಇದಕ್ಕೆ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಮಂಗಲ್ ರಾಜ್ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಪ್ರಚಾರ ಸಭೆಗಳಲ್ಲಿ ಭಾಗವಹಿಸಿದ್ದರು. ಭಾರತ್ ಮಾತಾಕಿ ಜೈ ಮತ್ತು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುವಂತೆ ಕಾರ್ಯಕರ್ತರನ್ನು ಪ್ರೇರೇಪಿಸಿದ್ದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಬಿಹಾರಕ್ಕೆ ನುಸುಳುಕೋರರು ನುಸುಳಿದ್ದಾರೆ. ಅವರನ್ನು ಹೊರಹಾಕಲು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದರು. ಇದು ಕಾವೇರಿದ ಚರ್ಚೆಗೂ ಕಾರಣವಾಗಿತ್ತು.
ಮಹಾಘಟಬಂಧನ್ ನೇತೃತ್ವ ವಹಿಸಿರುವ ತೇಜಸ್ವಿ ಯಾದವ್ ಇಲ್ಲಿನ ಜನ ಹೊರಗಿನವರಿಗೆ ಆಡಳಿತ ನಡೆಸಲು ಬಿಡುವುದಿಲ್ಲ. ನಿತೀಶ್ ಕುಮಾರ್ ವಿರುದ್ಧ ಆಡಳಿತ ವಿರೋಧಿ ಅಲೆ ಎದ್ದಿದೆ. ಜನ ಅವರನ್ನು ತಿರಸ್ಕರಿಸುತ್ತಾರೆ. ಬಿಜೆಪಿ ಮತ್ತು ಜೆಡಿಯು ನಡುವೆ ಸಾಕಷ್ಟು ಭಿನ್ನಮತ ಉದ್ಭವಿಸಿದೆ. ಬಿಜೆಪಿ ನೀಡಿರುವ ಜಾಹಿರಾತುಗಳಲ್ಲಿ ನಿತೀಶ್ ಕುಮಾರ್ ಭಾವಚಿತ್ರವಿಲ್ಲ ಎಂದು ಜನರ ಗಮನ ಸೆಳೆದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...