Homeಮುಖಪುಟಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

ಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ, ಮಂಗಳವಾರ (ಸೆ.30) ಭಾರತೀಯ ಚುನಾವಣಾ ಆಯೋಗ (ಇಸಿಐ) ಬಿಹಾರದ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ವರ್ಷದ ಜೂನ್ 24ರ ವೇಳೆಗೆ 7.89 ಕೋಟಿ ಇದ್ದ ಬಿಹಾರದ ಒಟ್ಟು ಮತದಾರ ಸಂಖ್ಯೆ, ಎಸ್‌ಐಆರ್‌ ಬಳಿಕ 7.42 ಕೋಟಿಗೆ ಇಳಿದಿದೆ. ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆಯ ಪ್ರಕಾರ 65 ಲಕ್ಷ ಮತದಾರರನ್ನು  ಪಟ್ಟಿಯಿಂದ ಕೈಬಿಡಲಾಗಿದೆ.

ಎಸ್‌ಐಆರ್ ಬಳಿಕ ಆಗಸ್ಟ್ 1, 2025ರಂದು ಚುನಾವಣಾ ಆಯೋಗ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿತ್ತು. ಅದರಲ್ಲಿ 7.24 ಕೋಟಿ ಮತದಾರರಿದ್ದರು. ಇವರಲ್ಲಿ 3.66 ಲಕ್ಷ ಅನರ್ಹ ಮತದಾರರನ್ನು ಕೈಬಿಡಲಾಗಿದೆ. ಮತ್ತು 21.53 ಲಕ್ಷ ಅರ್ಹ ಮತದಾರರನ್ನು ಫಾರ್ಮ್ 6 ಬಳಸಿ ಸೇರಿಸಲಾಗಿದೆ. ಇದರಿಂದಾಗಿ ಅಂತಿಮ ಮತದಾರರ ಸಂಖ್ಯೆ 7.42 ಕೋಟಿ ಆಗಿದೆ.

ಎಸ್‌ಐಆರ್ ಪ್ರಕ್ರಿಯೆ ಸಂಕೀರ್ಣವಾಗಿತ್ತು. ಇದಕ್ಕಾಗಿ ಇದರಲ್ಲಿ ಭಾಗಿಯಾಗಿದ್ದ ಎಲ್ಲಾ ಪಕ್ಷಗಳು, ಮತದಾರರು ಮತ್ತು ಇತರ ಪ್ರಮುಖ ಪಾಲುದಾರರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ. ಈ ನಡುವೆ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡ ನಂತರ, ವಿರೋಧ ಪಕ್ಷಗಳಿಂದ ಚುನಾವಣಾ ಆಯೋಗದ ವಿರುದ್ದ ಮೌಖಿಕ ದಾಳಿ ಮತ್ತು ಟೀಕೆಗಳು ಕೇಳಿ ಬಂದಿವೆ.

4.6 ಲಕ್ಷ ಹೊಸ ಮತದಾರರು ಹೇಗೆ ಸೇರ್ಪಡೆಯಾದರು? ಯೋಗೇಂದ್ರ ಯಾದವ್ ಪ್ರಶ್ನೆ

ಅಂತಿಮ ಪಟ್ಟಿಗೆ 4.6 ಲಕ್ಷ ಹೊಸ ಮತದಾರರನ್ನು ಹೇಗೆ ಸೇರಿಸಲಾಗಿದೆ ಎಂದು ಯೋಗೇಂದ್ರ ಯಾದವ್ ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದಾರೆ.

“ಚುನಾವಣಾ ಆಯೋಗದ ಪ್ರಕಾರ, ಸೆಪ್ಟೆಂಬರ್ 1ರವರೆಗೆ ಸ್ವೀಕರಿಸಿದ ಹೊಸ ಫಾರ್ಮ್ -6 ಸಂಖ್ಯೆ 16.93 ಲಕ್ಷ. ನಂತರ ಅರ್ಜಿ ಸಲ್ಲಿಸಲು ಅವಕಾಶ ಇರಲಿಲ್ಲ. ಹೀಗಿರುವಾಗ ಚುನಾವಣಾ ಆಯೋಗ ಒಟ್ಟು 21.53 ಲಕ್ಷ ಮತದಾರರನ್ನು ಸೇರ್ಪಡೆಗೊಳಿಸಿರುವುದು ಹೇಗೆ? ಸೆಪ್ಟೆಂಬರ್ 1ರ ನಂತರ ಅಂತಿಮ ಪಟ್ಟಿಗೆ ಕನಿಷ್ಠ 4.6 ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿದ್ದು ಹೇಗೆ? ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಯೋಗೇಂದ್ರ ಯಾದವ್ ಕೇಳಿದ್ದಾರೆ. 

ಅಂತಿಮ ಪಟ್ಟಿಯಲ್ಲಿ ಬಡವರು, ದಲಿತರ ಹೆಸರು ಸೇರಿಸಿಲ್ಲ- ಪ್ರತಿಪಕ್ಷಗಳ ಆರೋಪ

ಕಾಂಗ್ರೆಸ್ ಪಕ್ಷವು ಅಂತಿಮ ಮತದಾರರ ಪಟ್ಟಿಯನ್ನು ತೀವ್ರವಾಗಿ ಟೀಕಿಸಿದೆ. ಎಸ್‌ಐಆರ್ ಅನ್ಯಾಯ ಮತ್ತು ಪಾರದರ್ಶಕತೆ ಕೊರತೆಯಿಂದ ಕೂಡಿದೆ ಎಂದಿದೆ.

ಎಸ್‌ಐಆಎರ್ ಪ್ರಕ್ರಿಯೆಯು ಆರಂಭದಿಂದಲೂ ದೋಷಪೂರಿತವಾಗಿದೆ. ಆದರೂ ಚುನಾವಣಾ ಆಯೋಗ ಎಸ್‌ಐಆರ್ ಯಶಸ್ವಿಯಾಗಿದೆ ಎಂದು ಘೋಷಿಸಿದೆ. 68 ಲಕ್ಷಕ್ಕೂ ಹೆಚ್ಚು ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಮತ್ತು ಕೇವಲ 21.53 ಲಕ್ಷ ಹೆಸರುಗಳನ್ನು ಮಾತ್ರ ಸೇರಿಸಲಾಗಿದೆ. ಜನರ ಮತದಾನದ ಹಕ್ಕನ್ನು ರಕ್ಷಿಸಲು ನಮ್ಮ ಪಕ್ಷವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ ಎಂದು ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಕುಮಾರ್ ಹೇಳಿದ್ದಾರೆ.

ನಮ್ಮ ಶತ ಪ್ರಯತ್ನಗಳ ಹೊರತಾಗಿಯೂ ಬಡವರು, ದಲಿತರು, ಅತ್ಯಂತ ಹಿಂದುಳಿದವರು ಮತ್ತು ಹಿಂದುಳಿದ ವರ್ಗಗಳ ಹೆಸರುಗಳನ್ನು ಪಟ್ಟಿಯಲ್ಲಿ ಸೇರಿಸಿಲ್ಲ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 10,000 ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ಕಂಡುಕೊಂಡಿದ್ದೇವೆ ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ವಕ್ತಾರ ಶಕ್ತಿ ಸಿಂಗ್ ಯಾದವ್ ತಿಳಿಸಿದ್ದಾರೆ.

ಮತಗಳ್ಳತನ ಆರೋಪಗಳಿಗೆ ಸೂಕ್ತ ಉತ್ತರ- ಎನ್‌ಡಿಎ

ಬಿಜೆಪಿ ವಕ್ತಾರ ಪ್ರಭಾಕರ್ ಮಿಶ್ರಾ ಅವರು ವಿರೋಧ ಪಕ್ಷದ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. “ಅಂತಿಮ ಮತದಾರರ ಪಟ್ಟಿಯಲ್ಲಿ ಹೆಚ್ಚಿನ ಸಂಖ್ಯೆಯ ಹೊಸ ಹೆಸರುಗಳನ್ನು ಸೇರಿಸಲಾಗಿದೆ. ಇದು ಮತಗಳ್ಳತನದ ಆರೋಪ ಮಾಡಿದ ವಿರೋಧ ಪಕ್ಷಗಳಿಗೆ ಸೂಕ್ತ ಉತ್ತರವಾಗಿದೆ” ಎಂದು ಹೇಳಿದ್ದಾರೆ. 

ಜೆಡಿಯು ಮುಖ್ಯ ವಕ್ತಾರ ಮತ್ತು ಎಂಎಲ್‌ಸಿ ನೀರಜ್ ಕುಮಾರ್ ಮಾತನಾಡಿ, 21.53 ಲಕ್ಷ ಹೊಸ ಹೆಸರುಗಳನ್ನು ಸೇರಿಸಲಾಗಿದೆ. ಅದರಲ್ಲಿ ಹೆಚ್ಚಿನವು ಅತ್ಯಂತ ಹಿಂದುಳಿದ ವರ್ಗಗಳು (ಇಬಿಸಿ) ಮತ್ತು ದಲಿತ ಸಮುದಾಯಗಳಿಗೆ ಸೇರಿದವಾಗಿವೆ. ಬಿಹಾರದಲ್ಲಿ ಕಾಂಗ್ರೆಸ್-ಆರ್‌ಜೆಡಿಯ ‘ಮತ ಕಳ್ಳತನ’ ಆರೋಪಗಳಿಗೆ ಚುನಾವಣಾ ಆಯೋಗದ ಅಂತಿಮ ಪಟ್ಟಿಯು ಸರಿಯಾದ ಪ್ರತಿಕ್ರಿಯೆ ನೀಡಿದೆ ಎಂದಿದ್ದಾರೆ.

ಇಸ್ರೇಲ್ ಬೆದರಿಕೆಗಳ ನಡುವೆಯೂ ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...