Homeಮುಖಪುಟಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

- Advertisement -
- Advertisement -

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ ಆಘಾತ ನಿಡಿದೆ.

ಮತ ಚಲಾಯಿಸದವರಲ್ಲಿ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಶಾಸಕ ಫೈಸಲ್ ರೆಹಮಾನ್ ಮತ್ತು ಮೂವರು ಕಾಂಗ್ರೆಸ್ ಶಾಸಕರಾದ ಮನೋಹರ್ ಪ್ರಸಾದ್, ಸುರೇಂದ್ರ ಕುಶ್ವಾಹ ಮತ್ತು ಮನೋಜ್ ಬಿಸ್ವಾಸ್ ಸೇರಿದ್ದಾರೆ.

ಮತದಾನ ಮುಂದುವರೆದಂತೆ ಮೂವರು ಕಾಂಗ್ರೆಸ್ ಶಾಸಕರು ದಿನವಿಡೀ ಪಕ್ಷದೊಂದಿಗೆ ಸಂಪರ್ಕದಿಂದ ಹೊರಗಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಶಾಸಕರ ಫೋನ್‌ಗಳು ಸ್ವಿಚ್ ಆಫ್ ಆಗಿದ್ದವು. ಅವರ ಈ ನಡೆಯು ವಿರೋಧ ಪಕ್ಷದ ಬಣದೊಳಗೆ ಕಳವಳವನ್ನುಂಟುಮಾಡಿತು.

ನಾಲ್ವರು ಶಾಸಕರ ಅನುಪಸ್ಥಿತಿಯು ನಿರ್ಣಾಯಕ ಕ್ಷಣದಲ್ಲಿ ಬಂದಿತು. ಐದನೇ ರಾಜ್ಯಸಭಾ ಸ್ಥಾನಕ್ಕೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಇಮಡಿಯಾ ಬಣ ನೇರ ಸ್ಪರ್ಧೆಯಲ್ಲಿ ಸಿಲುಕಿದೆ.

ಜೆಡಿ(ಯು) ನಾಯಕರಾದ ನಿತೀಶ್ ಕುಮಾರ್ ಮತ್ತು ರಾಮನಾಥ್ ಠಾಕೂರ್, ಬಿಜೆಪಿಯ ನಿತಿನ್ ನಬಿನ್ ಮತ್ತು ಶಿವಂ ಕುಮಾರ್ ಅವರ ಗೆಲುವು ಖಚಿತವೆಂದು ಪರಿಗಣಿಸಲಾಗಿದ್ದರೂ, ಅಂತಿಮ ಸ್ಥಾನಕ್ಕೆ ನಡೆಯುವ ಹೋರಾಟವು ಎನ್‌ಡಿಎ ಅಭ್ಯರ್ಥಿ ಉಪೇಂದ್ರ ಕುಶ್ವಾಹ ಮತ್ತು ಮಹಾಘಟಬಂಧನ್ ಅಭ್ಯರ್ಥಿ ಎ.ಡಿ. ಸಿಂಗ್ ನಡುವೆ ತೀವ್ರ ಪೈಪೋಟಿಯಾಗಿ ಮಾರ್ಪಟ್ಟಿದೆ.

ಎನ್‌ಡಿಎಗೆ ಸೇರಿದ ಎಲ್ಲಾ 202 ಶಾಸಕರು ಈಗಾಗಲೇ ತಮ್ಮ ಮತಗಳನ್ನು ಚಲಾಯಿಸಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ನಾಲ್ವರು ಶಾಸಕರು ಮತದಾನಕ್ಕೆ ಹಾಜರಾಗದ ಕಾರಣ ಮಹಾಘಟಬಂಧನ್‌ನ ಮತ ಎಣಿಕೆ 37 ರಲ್ಲೇ ಉಳಿದಿದೆ.

243 ಸದಸ್ಯರ ವಿಧಾನಸಭೆಯಲ್ಲಿ 35 ಶಾಸಕರನ್ನು ಹೊಂದಿರುವ ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನಕ್ಕೆ ಗೆಲುವು ಖಚಿತಪಡಿಸಿಕೊಳ್ಳಲು ಕನಿಷ್ಠ 41 ಶಾಸಕರ ಬೆಂಬಲ ಅಗತ್ಯವಿತ್ತು. ಮೈತ್ರಿಕೂಟವು ಐದು ಎಐಎಂಐಎಂ ಶಾಸಕರ ಬೆಂಬಲವನ್ನು ಪಡೆದುಕೊಂಡಿತ್ತು. ಬಿಎಸ್‌ಪಿ ಶಾಸಕರ ಬೆಂಬಲವನ್ನು ಸಹ ನಿರೀಕ್ಷಿಸುತ್ತಿತ್ತು.

ಕುಶ್ವಾಹ ಗೆಲ್ಲಲು, ಎನ್‌ಡಿಎಗೆ ಮಹಾಘಟಬಂಧನ್‌ನ ಕನಿಷ್ಠ ಮೂವರು ಶಾಸಕರ ಮತಗಳು ಬೇಕಾಗಿದ್ದವು. ಈ ಸಂದರ್ಭದಲ್ಲಿ, ವಾಲ್ಮೀಕಿನಗರದ ಸುರೇಂದ್ರ ಕುಶ್ವಾಹ, ಫೋರ್ಬ್ಸ್‌ಗಂಜ್‌ನ ಮನೋಜ್ ಬಿಸ್ವಾಸ್ ಮತ್ತು ಮಣಿಹರಿಯ ಮನೋಹರ್ ಪ್ರಸಾದ್ ಎಂಬ ಮೂವರು ಕಾಂಗ್ರೆಸ್ ಶಾಸಕರ ವಿವರಣೆಯಿಲ್ಲದ ಅನುಪಸ್ಥಿತಿಯು ಮಹತ್ವ ಪಡೆದುಕೊಂಡಿತು.

ಚುನಾವಣೆಗೆ ಮುನ್ನ, ಅಕ್ರಮ ಕುದುರೆವ್ಯಾಪಾರ ಪ್ರಯತ್ನಗಳನ್ನು ತಡೆಗಟ್ಟಲು ಮಹಾ ಮೈತ್ರಿಕೂಟವು ತನ್ನ ಶಾಸಕರನ್ನು ಪಾಟ್ನಾದ ಹೋಟೆಲ್‌ನಲ್ಲಿ ಇರಿಸಿತ್ತು. ಈ ಮಧ್ಯೆ, ಎನ್‌ಡಿಎ ಭಾನುವಾರ ರಾಜ್ಯ ರಾಜಧಾನಿಯಲ್ಲಿ ಸಚಿವರು ಮತ್ತು ಹಿರಿಯ ನಾಯಕರ ನಿವಾಸಗಳಲ್ಲಿ ತನ್ನ ಶಾಸಕರೊಂದಿಗೆ ಸಭೆಗಳನ್ನು ನಡೆಸಿತು.

243 ಸದಸ್ಯರ ಬಿಹಾರ ವಿಧಾನಸಭೆಯಲ್ಲಿ, ಎನ್‌ಡಿಎ 202 ಶಾಸಕರೊಂದಿಗೆ ಆರಾಮದಾಯಕ ಬಹುಮತವನ್ನು ಹೊಂದಿದೆ. ಆದರೂ ಐದು ರಾಜ್ಯಸಭಾ ಸ್ಥಾನಗಳನ್ನು ಪಡೆಯಲು ಅಗತ್ಯವಿರುವ 205 ಸ್ಥಾನಗಳಲ್ಲಿ ಈ ಸಂಖ್ಯೆಗೆ ಮತಗಳು ಮೂರು ಕಡಿಮೆಯಾಗಿದೆ. ಬಿಹಾರದಿಂದ ರಾಜ್ಯಸಭಾ ಸ್ಥಾನವನ್ನು ಗೆಲ್ಲಲು ಒಬ್ಬ ಅಭ್ಯರ್ಥಿಗೆ ಕನಿಷ್ಠ 41 ಶಾಸಕರ ಬೆಂಬಲ ಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...