Homeರಾಜಕೀಯಮಿತ್ರಪಕ್ಷ BJP ವಿರೋಧದ ನಡುವೆಯೂ ‘ಜಾತಿ ಗಣತಿ’ಗೆ ಮುಂದಾದ ಬಿಹಾರ ಸರ್ಕಾರ

ಮಿತ್ರಪಕ್ಷ BJP ವಿರೋಧದ ನಡುವೆಯೂ ‘ಜಾತಿ ಗಣತಿ’ಗೆ ಮುಂದಾದ ಬಿಹಾರ ಸರ್ಕಾರ

- Advertisement -
- Advertisement -

ಪ್ರತಿಪಕ್ಷದ ನಾಯಕ ತೇಜಸ್ವಿ ಯಾದವ್ ಅವರ ಬೇಡಿಕೆಯನ್ನು ಬೆಂಬಲಿಸಿ ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಪಡೆದ ನಂತರ ತಮ್ಮ ಸರ್ಕಾರ ಶೀಘ್ರದಲ್ಲೇ ಜಾತಿ ಗಣತಿ ಕಾರ್ಯವನ್ನು ಪ್ರಾರಂಭಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಹೇಳಿದ್ದಾರೆ. ಮೇ 27 ರಂದು ಜಾತಿ ಗಣತಿ ಕುರಿತು ಸರ್ವಪಕ್ಷಗಳ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆದರೆ ಸರ್ಕಾರದ ಮಿತ್ರಪಕ್ಷವಾದ ಬಿಜೆಪಿ ಈ ಬಗ್ಗೆ ವಿರೋಧವನ್ನು ಸೂಚಿಸಿದೆ.

“ಜಾತಿವಾರು ಜನಗಣತಿ ಕುರಿತು ಎಲ್ಲರ ಅಭಿಪ್ರಾಯ ಪಡೆಯಲು ಸರ್ವಪಕ್ಷ ಸಭೆ ಕರೆಯುತ್ತೇವೆ. ನಂತರ ರಾಜ್ಯ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಮಂಡಿಸಲಾಗುವುದು. 27ರಂದು ಸಭೆ ನಡೆಸುವ ಕುರಿತು ಕೆಲ ಪಕ್ಷಗಳೊಂದಿಗೆ ಮಾತನಾಡಿದ್ದೇವೆ ಆದರೆ ಕೆಲವು ಪಕ್ಷಗಳ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ. ಅಂತಿಮ ತೀರ್ಮಾನದ ನಂತರ, ಪ್ರಸ್ತಾವನೆಯು ಸಂಪುಟಕ್ಕೆ ಹೋಗಲಿದ್ದು, ಅದರ ನಂತರ ನಾವು ಕೆಲಸ ಪ್ರಾರಂಭಿಸುತ್ತೇವೆ” ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಪ್ರತಿ ಪಕ್ಷದೊಂದಿಗೆ ಮಾತುಕತೆ ಆರಂಭಿಸಿದ್ದೇವೆ. ಎಲ್ಲರೂ ಮಂಡಳಿಯಲ್ಲಿಲ್ಲ. ಅವರ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ” ಎಂದು ನಿತೀಶ್ ಕುಮಾರ್ ಹೇಳಿದ್ದರೆ.

ಇದನ್ನೂ ಓದಿ: ಬಿಹಾರ: ಜಾತಿ ಗಣತಿಗೆ ಒಕ್ಕೂಟ ಸರ್ಕಾರ ನಕಾರ; ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು

ಜಾತಿ ಜನಗಣತಿ ಕುರಿತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ದೆಹಲಿಗೆ ಪಾದಯಾತ್ರೆ ಮಾಡುತ್ತೇವೆ ಎಂದು ಎಚ್ಚರಿಸಿದ ನಂತರ ಮುಖ್ಯಮಂತ್ರಿ ಈ ನಿರ್ಧಾರ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಜಾತಿ ಗಣತಿಯ ಮಾರ್ಗಸೂಚಿಯನ್ನು ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇದು ಬಿಜೆಪಿಗೆ ಕಿರಿಕಿರಿ ಉಂಟುಮಾಡುತ್ತದೆ ಎಂದು ತಿಳಿದಿದ್ದರೂ ಅವರು ಈ ನಿರ್ಧಾರವನ್ನು ಮಾಡಿದ್ದಾಗಿ ವರದಿಯಾಗಿದೆ.

ಈ ಸಭೆಯ ನಂತರ ಪಕ್ಷದ ಸಂಸ್ಥಾಪಕ ಲಾಲು ಯಾದವ್ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದು ಆರ್‌ಜೆಡಿ ಆರೋಪಿಸಿದೆ. ಒಂದು ವೇಳೆ ಅವರು ಆರ್‌ಜೆಡಿಯೊಂದಿಗೆ ಸ್ನೇಹ ಮಾಡಲು ಯೋಜಿಸಿದ್ದರೆ ನಿತೀಶ್ ಕುಮಾರ್ ಅವರಿಗೂ ಇದುವೆ ಗತಿ ಎಂಬ ತೀಕ್ಷ್ಣ ಸಂದೇಶವನ್ನು ರವಾನಿಸಲು ಬಿಜೆಪಿ ಬಯಸಿದ್ದು, ಅದಕ್ಕಾಗಿಯೆ ದಾಳಿಗಳು ಸಮಯಕ್ಕೆ ಸರಿಯಾಗಿ ನಡೆದಿವೆ ಎಂದು ಆರ್‌ಜೆಡಿ ಹೇಳಿಕೊಂಡಿದೆ.

ಜಾತಿ ಗಣತಿ ವಿಚಾರದಲ್ಲಿ ನಿತೀಶ್ ಕುಮಾರ್ ಅವರ ನಿರ್ಧಾರಕ್ಕೆ ಬಿಜೆಪಿ ಒಪ್ಪುತ್ತದೆ ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ಉಪಮುಖ್ಯಮಂತ್ರಿ, ಬಿಜೆಪಿ ತಾರಕಿಶೋರ್‌‌ ಪ್ರಸಾದ್ ಸೂಚಿಸಿದ್ದಾರೆ. “ನಾವು ಈ ಬಗ್ಗೆ ಚರ್ಚಿಸಿ, ವಿವಿಧ ಅಂಶಗಳನ್ನು ಪರಿಗಣಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಾತಿಗಣತಿಗೆ ಸರ್ಕಾರಗಳು ಹಿಂಜರಿಯುತ್ತಿರುವುದೇಕೆ? ಕರ್ನಾಟಕದ ವರದಿ ಬಿಡುಗಡೆಯಾಗಿಲ್ಲವೇಕೆ?

ಜಾತಿ ಗಣತಿಯನ್ನು ಬಿಜೆಪಿಯು ತಾತ್ವಿಕವಾಗಿ ವಿರೋಧಿಸುತ್ತಿದೆ. ಜಾತಿ ಆಧಾರಿತ ಜನಗಣತಿ ಎಂಬುದು ವಿಭಜನೆಯ ಕಸರತ್ತು ಎಂದು ಒಕ್ಕೂಟ ಸರ್ಕಾರ ಬಹಳ ಹಿಂದೆಯೇ ಹೇಳುತ್ತಲೇ ಬಂದಿತ್ತು. ಆದರೆ ಬಿಹಾರದ ರಾಜಕೀಯ ಪಕ್ಷಗಳು ಜಾತಿ ಗಣತಿಯು ಸಮಾಜದಲ್ಲಿ ಅತ್ಯಂತ ನಿರ್ಲಕ್ಷಿತರಿಗೆ ಸಹಾಯ ಮಾಡಲು ಉತ್ತಮ ನೀತಿ ರೂಪಿಸಲು ಕಾರಣವಾಗುತ್ತದೆ ಎಂದು ವಾದಿಸುತ್ತಿವೆ.

ಕಳೆದ ವರ್ಷ, ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರನ್ನೊಳಗೊಂಡ ಬಿಹಾರ ರಾಜಕಾರಣಿಗಳ ನಿಯೋಗವು ಜಾತಿ ಗಣತಿಗಾಗಿ ಒತ್ತಾಯಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ಜಾತಿ-ಆಧಾರಿತ ಎಣಿಕೆಯನ್ನು ಕೊನೆಯ ಬಾರಿಗೆ 1931 ರಲ್ಲಿ ನಡೆಸಲಾಯಿತು. ಈ ವೇಳೆ ಬಿಹಾರವು ಬ್ರಿಟಿಷ್ ಆಳ್ವಿಕೆಯಲ್ಲಿದ್ದು, ಜಾರ್ಖಂಡ್ ಮತ್ತು ಒಡಿಶಾ ರಾಜ್ಯಗಳು ಬಿಹಾರದ ಭಾಗವಾಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...